ಪಶ್ಚಿಮ ಬಂಗಾಳದ ಚುನಾವಣೆಯ ಹಳೆಯ ವಿಡಿಯೋವನ್ನು ಮಧ್ಯಪ್ರದೇಶಕ್ಕೆ ಸೇರಿದ್ದು ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ

ಪಂಚರಾಜ್ಯಗಳಾದ ಮಧ್ಯಪ್ರದೇಶ, ಛತ್ತೀಸ್ ಗಢ, ರಾಜಸ್ಥಾನ, ತೆಲಂಗಾಣ ಹಾಗೂ ಮಿಝೋರಾಂ ನಲ್ಲಿ ಈಗಾಗಲೇ ಚುನಾವಣೆಗಳು ಜರುಗುತ್ತಿವೆ. ಈ ಸುದ್ದಿ ಬರೆಯುವ ಹೊತ್ತಿಗೆ ಮಧ್ಯ ಪ್ರದೇಶದ ಚುನಾವಣೆಯು ಮುಗಿದಿದೆ. ಆದರೆ ಮಿಕ್ಕ ರಾಜ್ಯಗಳಿಗೆ ಹೋಲಿಸಿದರೆ ಮಧ್ಯ ಪ್ರದೇಶದಲ್ಲಿ ಹರಿದಾಡಿದಷ್ಟು ಸುಳ್ಳು ಸುದ್ದಿಗಳು, ಅಪಪ್ರಚಾರಗಳು ಬೇರೆಲ್ಲೂ ನಡೆದಿಲ್ಲ. ಮಧ್ಯಪ್ರದೇಶದ ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಹರಿದಾಡುತ್ತಿದ್ದ ಹಲವಾರು ಸುಳ್ಳು ಸುದ್ದಿಗಳನ್ನು ಕನ್ನಡ ಫ್ಯಾಕ್ಟ್‌ಚೆಕ್ ಬಯಲುಗೊಳಿಸಿದೆ. ಅವುಗಳನ್ನು ನೀವು ಇಲ್ಲಿ ನೋಡಬಹುದು. ಇತ್ತೀಚೆಗೆ ಮಧ್ಯಪ್ರದೇಶದ ಆಡಳಿತಾರೂಢ ಬಿಜೆಪಿ ನಾಯಕ ಹಳ್ಳಿಗೆ ಪ್ರಚಾರಕ್ಕೆಂದು ಹೋದ…

Read More

ರಾಮ ಮಂದಿರದ ಮೇಲೆ ಭಗವಧ್ವಜ ಹಾರಿಸಿದ ದಿನವೇ ಭಾರತವನ್ನು ಹಿಂದೂ ರಾಷ್ಟ್ರ ಎಂದು ಘೋಷಿಸಲಾಗುವುದು ಎಂದು ಯೋಗಿ ಆದಿತ್ಯನಾಥ್ ಹೇಳಿಲ್ಲ

ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಅಯೋಧ್ಯೆಯ ರಾಮಮಂದಿರದ ಕೆಲಸಗಳು ಭರದಿಂದ ಸಾಗುತ್ತಿವೆ. ಅಯೋಧ್ಯೆಯ “ರಾಮ ಮಂದಿರ”, “ಹಿಂದೂ ರಾಷ್ಟ್ರ” ಮತ್ತು “ಅಖಂಡ ಭಾರತ” ಬಿಜೆಪಿ ಮತ್ತು ಬಲಪಂಥೀಯರು ಪ್ರತಿಪಾದಿಸುತ್ತಿರುವ “ಉಗ್ರ ಹಿಂದುತ್ವದ” ಪ್ರತೀಕವಾಗಿದೆ ಮತ್ತು ಆಢಳಿತಾರೂಢ ಬಿಜೆಪಿಯ ರಾಜಕೀಯದ ಅಸ್ತ್ರವಾಗಿದೆ. ಆದ್ದರಿಂದ ಬಿಜೆಪಿ ನಾಯಕರು ಭಾರತವನ್ನು ಮುಂಬರುವ ದಿನಗಳಲ್ಲಿ ಹಿಂದೂ ರಾಷ್ಟ್ರವನ್ನಾಗಿ ಪರಿವರ್ತಿಸಲಾಗುವುದು ಎಂದು ತಮ್ಮ ಪಕ್ಷದ ಬೆಂಬಲಿಗರಿಗೆ ಈಗಾಗಲೇ ಭರವಸೆಯನ್ನು ನೀಡುತ್ತಾ ಬಂದಿದ್ದಾರೆ. ಅದರಂತೆ, “ರಾಮಜನ್ಮ ಭೂಮಿಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮ ಮಂದಿರದ ಮೇಲೆ ಭಗವಧ್ವಜ ಹಾರಿಸಿದ…

Read More

Fact Check | ಬೆಟ್ಟಿಂಗ್ ಆಪ್‌ಗೆ ಸೆಳೆಯಲು ರತನ್ ಟಾಟಾ ಅವರ ಡೀಪ್ ಫೇಕ್ ವಿಡಿಯೋ ಬಳಕೆ!

ಸಾಮಾಜಿಕ ಜಾಲತಾಣದಲ್ಲಿ ರತನ್‌ ಟಾಟಾ ಅವರ ಜಾಹಿರಾತು ವಿಡಿಯೋವೊಂದು ವೈರಲ್‌ ಆಗಿದೆ ಅದರಲ್ಲಿ ಅವರು “ಹಲವಾರು ಮಂದಿ ನನ್ನ ಬಳಿ ಬೇಗ ಶ್ರೀಮಂತರಾಗುವುದು ಹೇಗೆ ಎಂದು ಕೇಳುತ್ತಾರೆ. ಅದಕ್ಕೆ ನನ್ನ ಉತ್ತರ ಭಾರತದಲ್ಲಿರುವ ನನ್ನ ಗೆಳೆಯ ಅಮಿರ್‌ ಖಾನ್‌ ಆತ ಏವಿಯೇಟರ್‌ ಎಂಬ ಗೇಮ್‌ ಸಂಸ್ಥೆ” ” ಏವಿಯೇಟರ್‌ ಗೇಮ್‌ ಸಂಸ್ಥೆಯ ಮಾಲಿಕ ಅಮಿರ್‌ ಖಾನ್‌ನಿಂದ ಹಲವಾರು ಮಂದಿ ಸಿರಿವಂತರಾಗಿ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ನೀವು ಕೂಡ ಈತನ ಏವಿಯೇಟರ್‌ ಟೀಮ್‌ಗೆ ಸೇರಿ ಗೇಮ್‌ ಆಡಿ” ಎಂದು…

Read More
BJP

ಬಿಜೆಪಿಗೆ ಮತ ನೀಡಬೇಡಿ ಎಂದು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಉಮಾ ಭಾರತಿಯವರು ಹೇಳಿಲ್ಲ

ಪಂಚರಾಜ್ಯಗಳ ಚುನಾವಣೆಯ ಈ ಸಂದರ್ಭದಲ್ಲಿ ಅನೇಕ ಸುಳ್ಳು ಸುದ್ದಿಗಳು ಆರೋಪ-ಪ್ರತ್ಯಾರೋಪಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇನ್ನೂ ಹಲವು ಎಡಿಟೆಡ್ ವಿಡಿಯೋಗಳನ್ನು ಜನ ಸತ್ಯವೆಂದು ನಂಬಿ ಹಂಚಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ, ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಉಮಾ ಭಾರತಿಯವರು ಲೋಧಿ ಸಮಾಜವನ್ನು ಕಡೆಗಣಿಸಿರುವ ಕಾರಣಕ್ಕಾಗಿ ಈ ಬಾರಿ ಬಿಜೆಪಿಗೆ ಓಟು ನೀಡದಂತೆ ಜನರಲ್ಲಿ ಕೇಳಿಕೊಂಡಿದ್ದಾರೆ ಎಂಬ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ  ವೈರಲ್ ಆಗುತ್ತಿದೆ. ಫ್ಯಾಕ್ಟ್‌ಚೆಕ್‌: ಈ ವಿಡಿಯೋ 1 ಫೆಬ್ರವರಿ 2023ರಂದು ಭೋಪಾಲ್‌ನ ಅಯೋಧ್ಯೆ ನಗರದ ಹನುಮಾನ್ ದೇವಸ್ಥಾನದಲ್ಲಿ ಮದ್ಯ…

Read More

Fact Check | ನೆಹರುರವರಿಗೆ ಸ್ವಾಮಿ ವಿದ್ಯಾನಂದ ವಿದೇಹ ಕಪಾಳಮೋಕ್ಷ ಮಾಡಿದ್ದರು ಎಂಬುದು ಸುಳ್ಳು

ಸಾಮಾಜಿಕ ಜಾಲತಾಣದಲ್ಲಿ “ಜವಾಹರಲಾಲ್ ನೆಹರು ಅವರಿಗೆ ಸ್ವಾಮಿ ವಿದ್ಯಾನಂದ ವಿದೇಹ ಅವರು ಸಾರ್ವಜನಿಕ ಸಮಾರಂಭದಲ್ಲಿ ಕಪಾಳಮೋಕ್ಷ ಮಾಡಿದ್ದರು. ಆ ಸಂದರ್ಭದಲ್ಲಿ ಈ ಫೋಟೋ ಸೆರೆಹಿಡಿಯಲಾಗಿದೆ” ಎಂಬ ಪೋಸ್ಟ್‌ ವೈರಲ್‌ ಆಗಿದೆ. ಕಳೆದ ಹಲವು ತಿಂಗಳುಗಳಿಂದ ಸಾಕಷ್ಟು ಮಂದಿ ಸಾಮಾಜಿಕ ಜಾಲತಾಣದಲ್ಲಿ ಈ ಪೋಸ್ಟ್‌ನ್ನು ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ. ಆದರೆ ಈ ಕುರಿತ ಫ್ಯಾಕ್ಟ್‌ಚೆಕ್‌ ನಡೆಸಿದಾಗ ಪೋಸ್ಟ್‌ನಲ್ಲಿ ಹಂಚಿಕೊಂಡ ಫೋಟೋವನ್ನು 1962 ರ ಬಿಹಾರದ ಪಾಟ್ನಾದಲ್ಲಿ ನಡೆದ ಕಾಂಗ್ರೆಸ್ ಸಭೆಯ ಸಂದರ್ಭದಲ್ಲಿ ತೆಗೆಯಲಾಗಿದೆ. ಈ ಸಭೆಯಲ್ಲಿ ಜನಸಂದಣಿ ಹೆಚ್ಚಾಗಿದ್ದರಿಂದ ನೂಕುನುಗ್ಗಲು…

Read More

ಮಧ್ಯಪ್ರದೇಶದಲ್ಲಿ ಬಿಜೆಪಿ ಪರ ಪ್ರಚಾರ ಮಾಡಲು ಹಿಂದೂ ಸಂತರು ನಿರಾಕರಿಸಿದ್ದಾರೆ ಎಂಬುದು ಸುಳ್ಳು

ಪಂಚರಾಜ್ಯಗಳ ಚುನಾವಣೆಗಳು ಜರುಗುತ್ತಿವೆ. ಆಯಾ ರಾಜ್ಯಗಳಲ್ಲಿ  ವಿವಿಧ ರಾಜಕೀಯ ಪಕ್ಷಗಳು ತೀವ್ರವಾದ ಪ್ರಚಾರ ಕಾರ್ಯದಲ್ಲಿ ತೊಡಗಿವೆ. ಈ ನಡುವೆ ತಮ್ಮ ಎದುರಾಳಿ ಅಭ್ಯರ್ಥಿಯನ್ನು, ಪಕ್ಷವನ್ನು ಹಿಮ್ಮೆಟ್ಟಿಸಲು ಅನೇಕ ಸುಳ್ಳು ಸುದ್ದಿಗಳನ್ನು, ವಿಡಿಯೋಗಳನ್ನು ಹರಿಬಿಡಲಾಗುತ್ತಿದೆ. ಈಗ, ಮಧ್ಯಪ್ರದೇಶದಲ್ಲಿ ಹಿಂದೂ ಸಾಧು-ಸಂತರು ಶಿವರಾಜ್ ಸಿಂಗ್ ಚೌಹಾಣ್ ಮತ್ತು ಬಿಜೆಪಿ ಪರ ಪ್ರಚಾರ ಮಾಡಲು ನಿರಾಕರಿಸಿದ್ದಾರೆ, ಈ ಬಾರಿ ಬಿಜೆಪಿ ಕೇವಲ 50 ಸ್ಥಾನಗಳಿಗೆ ಸೀಮಿತವಾಗಲಿದೆ ಎಂದು ಹೇಳಿದ್ದಾರೆ ಎಂಬ ವಿಡಿಯೋ ಒಂದು ಹಲವು ತಿಂಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಫ್ಯಾಕ್ಟ್‌ಚೆಕ್‌:…

Read More
ರೈಲು

ರೈಲಿನ ಹಾರ್ನ್‌ನಿಂದ ನಮಾಜ್‌ಗೆ ತೊಂದರೆಯೆಂದು ಮುಸ್ಲಿಮರಿಂದ ರೈಲು ನಿಲ್ದಾಣ ಧ್ವಂಸ ಎಂಬುದು ಸುಳ್ಳು

ಪಶ್ಚಿಮ ಬಂಗಾಳದ ಮುಸಲ್ಮಾನರ ಜನಸಂಖ್ಯೆ ಹೆಚ್ಚಾಗಿರುವ ಮುರಿಶಿದಬಾದ್ ಜಿಲ್ಲೆಯಲ್ಲಿ ನಮಾಜ್ ಮಾಡುವಾಗ ಶಬ್ದ ಮಾಲಿನ್ಯದಿಂದ ತೊಂದರೆಯಾಗುತ್ತದೆ ಎಂದು ರೈಲು ಹಳಿಗಳನ್ನು ಕಾನೂನುಬಾಹಿರವಾಗಿ ಕಿತ್ತು ಬಿಸಾಡಿದ್ದಾರೆ, ಇನ್ನು ಮಠ-ಮಂದಿರ ದೇವಸ್ಥಾನಗಳು ಅವರಿಗೆ ಯಾವ ಲೆಕ್ಕ ಎಂದು ಪ್ರತಿಪಾದಿಸಿ ವಿಡಿಯೊವೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ. ನಮಾಜ್ ಮಾಡಲು ರೈಲಿನ ಶಬ್ದದಿಂದ ತೊಂದರೆ ಆಗುತ್ತದೆ ಎಂದು ರೈಲು ಹಳಿ ಮತ್ತು ರೈಲನ್ನೆ ನಾಶ ಮಾಡಲು ಪ್ರಯತ್ನ ಪಡುತ್ತಿರುವ ಜನ ಎಂದು ಮತ್ತೊಂದು ವಿಡಿಯೋವನ್ನು ಸಹ ಹಂಚಿಕೊಳ್ಳಲಾಗಿದೆ. ಇವುಗಳ ಹಿನ್ನಲೆಯೇನು ಎಂದು…

Read More

Fact Check : ವಿಶ್ವದ ಭ್ರಷ್ಟ ಪ್ರಧಾನಿಗಳ ಪಟ್ಟಿಯಲ್ಲಿ ನರೇಂದ್ರ ಮೋದಿ ಅವರಿಗೆ ಎರಡನೇ ಸ್ಥಾನ ಎಂಬುದು ಸುಳ್ಳು

“ಫಾಕ್ಸ್ ನ್ಯೂಸ್ ಬಿಡುಗಡೆ ಮಾಡಿದ ಟಾಪ್ 10 ಭ್ರಷ್ಟ ಪ್ರಧಾನ ಮಂತ್ರಿಗಳ ಪಟ್ಟಿಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಎರಡನೇ ಸ್ಥಾನದಲ್ಲಿದ್ದಾರೆ. ಅಂದಭಕ್ತರ ವಿಶ್ವಗುರು ಈಗ ಭ್ರಷ್ಟಗುರು ಸತ್ಯ ತಡವಾಗುತ್ತೆ ಆದರೆ ಸತ್ಯ ಸಾಯಲ್ಲ” ಎಂಬ ಪೋಸ್ಟ್‌ವೊಂದು ಪೇಪರ್‌ ಕಟಿಂಗ್‌ನೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಬ್ಬುತ್ತಿದೆ. ಈ ಕುರಿತು ಫ್ಯಾಕ್ಟ್‌ಚೆಕ್‌ ನಡೆಸಿದಾಗ ವಿಶ್ವದ ಅತ್ಯಂತ ಭ್ರಷ್ಟ ಪ್ರಧಾನ ಮಂತ್ರಿಗಳ ಬಗ್ಗೆ ಫಾಕ್ಸ್ ನ್ಯೂಸ್ ಇಂತಹ ಯಾವುದೇ ವರದಿಯನ್ನು ಪ್ರಕಟಿಸಲಿಲ್ಲ. ಫಾಕ್ಸ್ ನ್ಯೂಸ್ ಪಾಯಿಂಟ್‌ಗೂ ಮತ್ತು ಯುಎಸ್ ಮೂಲದ…

Read More