Fact Check | ಚುನಾವಣ ಪೂರ್ವ ಭರವಸೆ ಈಡೇರಿಸಲಾಗದಕ್ಕೆ ರಾಹುಲ್‌ ಗಾಂಧಿ ಕ್ಷಮೆ ಕೇಳಿದ್ದಾರೆಂಬುದು ಸುಳ್ಳು

ಸಾಮಾಜಿಕ ಜಾಲತಾಣದಲ್ಲಿ “ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಿಂಗಳಿಗೆ 8,500 ಹಣವನ್ನು ಮನೆಯ ಮಹಿಳಾ ಮುಖ್ಯಸ್ಥೆಗೆ ಕೊಡುವುದಾಗಿ ಭರವಸೆಯನ್ನು ನೀಡಿದ್ದರು. ಯುವಕರಿಗೆ ತಿಂಗಳಿಗೆ 1 ಲಕ್ಷದ ವೇತನ ಹಣವನ್ನು ನೀಡುವುದಾಗಿ ಚುನಾವಣಾ ಭರವಸೆಯನ್ನು ನೀಡಿದ್ದರು. ಇದಕ್ಕಾಗಿ ಈಗ ಅವರು ಕ್ಷಮೆಯನ್ನು ಕೇಳಿದ್ದಾರೆ. ಕಾಂಗ್ರೆಸ್ ನೀಡಿದ ಸುಳ್ಳು ಭರವಸೆಯಿಂದಾಗಿ 99 ಸ್ಥಾನಗಳನ್ನು ಪಡೆಯುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ. ಆದರೆ ಕಡಿಮೆ ಬಲದೊಂದಿಗೆ ಬಿಜೆಪಿ ಮೂರನೇ ಅವಧಿಗೆ ಮರಳುವಂತಾಯಿತು.” ಎಂಬ ಬರಹದೊಂದಿಗೆ ವ್ಯಾಪಕವಾಗಿ ಪೋಸ್ಟ್ ಅನ್ನು ಹಂಚಿಕೊಳ್ಳಲಾಗುತ್ತದೆ

ಈ ಪೋಸ್ಟ್ ಅನ್ನು ಗಮನಿಸಿದ ಹಲವರು ರಾಹುಲ್ ಗಾಂಧಿ ನಿಜಕ್ಕೂ ಕ್ಷಮೆ ಕೇಳಿದ್ದಾರೆ ಎಂದು ಭಾವಿಸಿ ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಅದೇ ರೀತಿಯಲ್ಲಿ ಕೆಲವು ಮುಸ್ಲಿಂ ಮಹಿಳೆಯರು ಗ್ಯಾರಂಟಿ ಹಣಗಳಿಗಾಗಿ ಬ್ಯಾಂಕ್ ಮುಂದೆ ಜಮಾಯಿಸಿರುವಂತಹ ಸುದ್ದಿಗಳನ್ನು ಕೂಡ ಹಂಚಿಕೊಳ್ಳಲಾಗುತ್ತಿದೆ.

ಫ್ಯಾಕ್ಟ್‌ಚೆಕ್

ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ಈ ಪೋಸ್ಟ್ ಕುರಿತು ಪರಿಶೀಲನೆ ನಡೆಸಲು ಕನ್ನಡ ಫ್ಯಾಕ್ಟ್‌ಚೆಕ್ ತಂಡ ಮುಂದಾಯಿತು. ಇದಕ್ಕಾಗಿ ವೈರಲ್ ಪೋಸ್ಟ್‌ಗೆ ಸಂಬಂಧಿಸಿದಂತೆ ಕೆಲವೊಂದು ಕೀ ವರ್ಡ್ಸ್ ಗಳನ್ನು ಬಳಸಿ ಅಂತರ್ಜಲದಲ್ಲಿ ಹುಡುಕಾಟವನ್ನು ನಡೆಸಲಾಯಿತು. ಆದರೆ ಈ ಕುರಿತು ಯಾವುದೇ ಮಾಹಿತಿಗಳು ಲಭ್ಯವಾಗಿಲ್ಲ. ಹೀಗಾಗಿ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್‌ನ ಅಧಿಕೃತ ಎಕ್ಸ್ ಖಾತೆಗಳಲ್ಲಿ ರಾಹುಲ್ ಗಾಂಧಿ ಕ್ಷಮೆ ಕೇಳಿದ್ದಾರೆಯೇ ಎಂದು ಹುಡುಕಲಾಯಿತು. ಆದರೆ ಇದಕ್ಕೆ ಸಂಬಂಧಿಸಿದಂತೆ ಯಾವುದೇ ಪೋಸ್ಟ್‌ಗಳು ಈ ಎರಡು ಖಾತೆಗಳಲ್ಲಿ ಕಂಡುಬಂದಿಲ್ಲ.

ಒಂದು ವೇಳೆ ರಾಹುಲ್ ಗಾಂಧಿ ಕ್ಷಮೆ ಕೇಳಿದ್ದು ನಿಜವೇ ಆಗಿದ್ದಲ್ಲಿ ಸ್ಥಳೀಯ ಮತ್ತು ರಾಷ್ಟ್ರೀಯ ಮಾಧ್ಯಮಗಳು ವರದಿಯನ್ನು ಮಾಡಬೇಕಿತ್ತು. ಆದರೆ ಯಾವ ಮಾಧ್ಯಮಗಳು ಕೂಡ ರಾಹುಲ್ ಗಾಂಧಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲು ಸಾಧ್ಯವಾಗದ ಕಾರಣ ಕ್ಷಮೆ ಕೇಳಿದ್ದಾರೆ ಎಂದು ವರದಿಗಳನ್ನು ಮಾಡಿಲ್ಲ. ಇದಕ್ಕೆ ಸಂಬಂಧಪಟ್ಟಂತೆ ಯಾವುದೇ ಅಧಿಕೃತ ಮಾಹಿತಿಗಳು ಕೂಡ ಲಭ್ಯವಾಗಿಲ್ಲ .

ಇಲ್ಲಿ ಬಹು ಮುಖ್ಯವಾಗಿ ಗಮನಿಸಬೇಕಾದ ಅಂಶ ಎಂದರೆ ರಾಹುಲ್ ಗಾಂಧಿ ಪ್ರತಿನಿಧಿಸುವ ಕಾಂಗ್ರೆಸ್ ಪಕ್ಷ ಅಥವಾ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದು ಆಗಲೂ ಅವರು ಚುನಾವಣಾ ಪೂರ್ವ ಭರವಸೆಗಳನ್ನು ಈಡೇರಿಸದಿದ್ದರೆ ಕ್ಷಮೆ ಕೇಳುವ ಪರಿಸ್ಥಿತಿ ಎದುರಾಗುತ್ತಿತ್ತು. ಆದರೆ ಕಾಂಗ್ರೆಸ್ ಆಗಲಿ, ಇಂಡಿಯಾ ಮೈತ್ರಿಕೂಟವಾಗಲೀ ಬಹುಮತ ಪಡೆದು ಸರ್ಕಾರ ರಚಿಸದ ಕಾರಣ ಅವರು ಕ್ಷಮೇ ಕೇಳುವ ಪ್ರಮೇಯವೇ ಉದ್ಭವಿಸುವುದಿಲ್ಲ.

ಒಟ್ಟಾರೆಯಾಗಿ ಈ ಎಲ್ಲಾ ಅಂಶಗಳನ್ನು ಗಮನಿಸಿದಾಗ ರಾಹುಲ್ ಗಾಂಧಿ ತಾವು ಚುನಾವಣಾ ಪೂರ್ವವಾಗಿ ನೀಡಿದ್ದ ಭರವಸೆಯನ್ನು ಈಡೇರಿಸಲು ಸಾಧ್ಯವಾಗದ ಕಾರಣ ಕ್ಷಮೆ ಕೇಳಿದ್ದಾರೆ ಎಂಬುದು ಸಂಪೂರ್ಣವಾಗಿ ಸುಳ್ಳಾಗಿದೆ. ಹಾಗು ಇಂತಹ ಸುಳ್ಳು ಸುದ್ದಿಗಳನ್ನು ಹಂಚಿಕೊಳ್ಳುವ ಮುನ್ನ ಪರಿಶೀಲಿಸಿಕೊಳ್ಳಿ.


ಇದನ್ನೂ ಓದಿ : ಜಿ7 ಶೃಂಗಸಭೆಯಲ್ಲಿ ಪಿಎಂ ಮೋದಿಯನ್ನು ಕರೆದೊಯ್ದ ವ್ಯಕ್ತಿ ಅಮೆರಿಕದ ಅಧ್ಯಕ್ಷ ಜೋ ಬೈಡನ್‌ ಅಲ್ಲ


ನಿಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್‌ಚೆಕ್ ವಾಟ್ಸಾಪ್ ನಂಬರ್‌ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ.

Leave a Reply

Your email address will not be published. Required fields are marked *