Fact Check: ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಜೀವಂತವಾಗಿದ್ದಾರೆ; ಅವರ ನಿಧನದ ಸುದ್ದಿ ಸುಳ್ಳು

ಎಲ್‌.ಕೆ.ಅಡ್ವಾಣಿ

ಹಿರಿಯ ಬಿಜೆಪಿ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರು ಆಸ್ಪತ್ರೆಗೆ ದಾಖಲಾದ ಕೆಲವು ದಿನಗಳ ನಂತರ, ಅವರ ನಿಧನದ ಸುದ್ದಿ ಅಂತರ್ಜಾಲದಲ್ಲಿ ಕಾಣಿಸಿಕೊಂಡಿದ್ದು, ಅನೇಕ ಸಾಮಾಜಿಕ ಮಾಧ್ಯಮ ಬಳಕೆದಾರರು ಸಂತಾಪ ಸೂಚಿಸಿದ್ದಾರೆ.

ಲಾಲ್ ಕೃಷ್ಣ ಅಡ್ವಾಣಿಯವರಿಗೆ ಹಲವಾರು ಕಾಂಗ್ರೆಸ್‌ ಮತ್ತು ಬಿಜೆಪಿ ಕಾರ್ಯಕತರು ಶ್ರದ್ಧಾಂಜಲಿ ಸಲ್ಲಿಸುವ ಪೋಸ್ಟರ್‌ಗಳನ್ನು ಹಂಚಿಕೊಂಡಿದ್ದಾರೆ.

ಹಿಂದಿಯಲ್ಲಿ ಪೋಸ್ಟ್ ಮಾಡಲಾದ ಒಂದು ಪೋಸ್ಟ್ ಹೀಗಿದೆ:  भारत रत्न पुरस्कार प्राप्त आणि भारताचे माजी उपपंतप्रधान, लालकृष्ण अडवाणी जी यांचे दुःखद निधन. भावपुर्ण श्रध्दांजली (ಇಂಗ್ಲಿಷ್ ಅನುವಾದ: ಭಾರತ ರತ್ನ ಪ್ರಶಸ್ತಿ ಪುರಸ್ಕೃತ ಮತ್ತು ಭಾರತದ ಮಾಜಿ ಉಪ ಪ್ರಧಾನಿ ಎಲ್.ಕೆ.ಅಡ್ವಾಣಿ ಜಿ ಅವರ ದುಃಖದ ನಿಧನ. ಹೃತ್ಪೂರ್ವಕ ಶ್ರದ್ಧಾಂಜಲಿ)

ಮೇಲಿನ ಪೋಸ್ಟ್ ಅನ್ನು ಇಲ್ಲಿ ನೋಡಬಹುದು (ಆರ್ಕೈವ್) ಅಂತಹ ಹೆಚ್ಚಿನ ಪೋಸ್ಟ್ ಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಫ್ಯಾಕ್ಟ್‌ಚೆಕ್: ಎಲ್.ಕೆ.ಅಡ್ವಾಣಿ ಅವರ ನಿಧನದ ಸುದ್ದಿಯನ್ನು ನಾವು ಫ್ಯಾಕ್ಟ್ ಚೆಕ್ ಮಾಡಿದಾಗ ಅದು ಸುಳ್ಳು ಎಂದು ತಿಳಿದುಬಂದಿದೆ. ನಾವು ಗೂಗಲ್‌ನಲ್ಲಿ ಕೀವರ್ಡ್ ಹುಡುಕಾಟ ನಡೆಸಿದಾಗ ಯಾವುದೇ ವಿಶ್ವಾಸಾರ್ಹ ಸುದ್ದಿ ವರದಿ ಕಂಡುಬಂದಿಲ್ಲ.

ಆದರೆ, ಜುಲೈ 07, 2024 ರ ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ, ಬಿಜೆಪಿ ಮುಖಂಡ ಮತ್ತು ಕೇಂದ್ರ ಸಚಿವ ವಿ.ಸೋಮಣ್ಣ ಅವರು ಎಲ್.ಕೆ.ಅಡ್ವಾಣಿ ಅವರ ನಿಧನವನ್ನು ತಪ್ಪಾಗಿ ಘೋಷಿಸಿದ್ದಾರೆ. ಬಿಜೆಪಿ ಸಂಸದ ಡಾ.ಸಿ.ಎನ್ ಮಂಜುನಾಥ್ ಕೂಡ ಇದೇ ತಪ್ಪು ಸಂದೇಶವನ್ನು ಹಂಚಿಕೊಂಡಿದ್ದರು. ಇದಾದ ಕೆಲವೇ ದಿನಗಳಲ್ಲಿ ಇಬ್ಬರೂ ನಾಯಕರು ತಮ್ಮ ತಪ್ಪನ್ನು ಅರಿತುಕೊಂಡು ಕ್ಷಮೆಯಾಚಿಸಿದರು. ಈ ಕುರಿತು ಡೆಕ್ಕನ್ ಹೆರಾಲ್ಡ್‌ ಮತ್ತು ವಿಜಯ ಕರ್ನಾಟಕ ವರದಿಯನ್ನು ನೋಡಬಹುದು.

ಎಲ್.ಕೆ.ಅಡ್ವಾಣಿ ಅವರು ಜೀವಂತವಾಗಿದ್ದಾರೆ ಮತ್ತು ಆರೋಗ್ಯವಾಗಿದ್ದಾರೆ ಎಂದು ಅವರ ಕಚೇರಿ ದೃಢಪಡಿಸಿದೆ. ವಿಶೇಷವೆಂದರೆ, ಅಡ್ವಾಣಿ ಅವರು ನಿಧನರಾಗಿದ್ದರೆ, ಅದನ್ನು ಭಾರತ ಮತ್ತು ವಿದೇಶಗಳ ಪ್ರಮುಖ ಸುದ್ದಿ ಸಂಸ್ಥೆಗಳು ಪ್ರಸಾರ ಮಾಡುತ್ತಿದ್ದವು. ಅಡ್ವಾಣಿ ಅವರ ಆಸ್ಪತ್ರೆಗೆ ದಾಖಲಾದ ಮತ್ತು ಡಿಸ್ಚಾರ್ಜ್ ಆದ ಇತ್ತೀಚಿನ ವರದಿಗಳನ್ನು ಇಲ್ಲಿಇಲ್ಲಿ ಮತ್ತು ಇಲ್ಲಿ ನೋಡಬಹುದು. ಆದ್ದರಿಂದ, ಎಲ್.ಕೆ.ಅಡ್ವಾಣಿ ಅವರು ಸ್ವರ್ಗಸ್ಥರಾದರು ಎಂಬ ಹೇಳಿಕೆ ಸುಳ್ಳು.


ಇದನ್ನು ಓದಿ: 2041ರ ಹೊತ್ತಿಗೆ ಭಾರತದಲ್ಲಿ ಮುಸ್ಲಿಂ ಜನಸಂಖ್ಯೆ ಶೇ.84 ರಷ್ಟು ಏರಿಕೆಯಾಗಲಿದೆ ಎಂಬುದು ಸುಳ್ಳು


ವೀಡಿಯೋ ನೋಡಿ: ಬಸ್ ದಾಳಿಯ ಈ ವಿಡಿಯೋ ಗುಜರಾತ್‌ ರಾಜ್ಯದ್ದು. ಕರ್ನಾಟಕದ ಉಚಿತ ಯೋಜನೆಗೂ ಇದಕ್ಕೂ ಸಂಬಂಧವಿಲ್ಲ


ನಿಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್‌ಚೆಕ್ ವಾಟ್ಸಾಪ್ ನಂಬರ್‌ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ

Leave a Reply

Your email address will not be published. Required fields are marked *