ಮುಂಬರಲಿರುವ ಅಮೇರಿಕ ಚುನಾವಣೆಗಳಲ್ಲಿ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಎಂದೇ ಗುರುತಿಸಿಕೊಂಡಿದ್ದ ಅಮೇರಿಕದ ಅಧ್ಯಕ್ಷ ಜೋ ಬೈಡೆನ್ ಅವರು ಒಮ್ಮಿಂದೊಮ್ಮೆಗೆ ಕಣದಿಂದ ಹಿಂದೆ ಸರಿದಿದ್ದಾರೆ, ತನ್ಮೂಲಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರನ್ನು ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿಯನ್ನಾಗಿ ನಾಮನಿರ್ದೇಶನಗೊಳಿಸಿದ್ದಾರೆ. ಇದರ ನಡುವೆ ಇದೀಗ ಸಾಮಾಜಿಕ ಜಾಲತಾಣದಲ್ಲಿ “ಅಮೆರಿಕ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಕಮಲಾ ಹ್ಯಾರಿಸ್ ಅವರು ಟ್ರಂಪ್ ವಿರುದ್ಧ ಜಾಹಿರಾತು ಪ್ರಚಾರವನ್ನು ಆರಂಭಿಸಿದ್ದಾರೆ” ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
First official campaign ad for Kamala Harris for President! Pass it on.
Kamala Harris prosecuted sex predators.
Trump is one.
She shut down for-profit scam colleges.
He ran one.
She held big banks accountable.
He's owned by them.Kamala Harris is not just prepared to take on… pic.twitter.com/eUDrpdWJhB
— LongTime🤓FirstTime👨💻 (@LongTimeHistory) July 21, 2024
ಹೀಗೆ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ಸುದ್ದಿಯನ್ನು ನೋಡಿದ ಹಲವರು ಟ್ರಂಪ್ ವಿರುದ್ಧ ಕಮಲಾ ಹ್ಯಾರಿಸ್ ಚುನಾವಣ ಪ್ರಚಾರ ಆರಂಭಿಸಿದ್ದಾರೆ ಎಂದು ತಮ್ಮ ವೈಯಕ್ತಿಕ ಸಾಮಾಜಿಕ ಜಾಲತಾಣದ ಖಾತೆಗಳಲ್ಲೂ ಕೂಡ ಹಂಚಿಕೊಳ್ಳುತ್ತಿದ್ದಾರೆ. ಆದರೆ ಹೀಗೆ ಹಂಚಿಕೊಳ್ಳಲಾಗುತ್ತಿದ್ದರೂ ಅಮೆರಿಕದ ಅಧ್ಯಕ್ಷ ಚುನಾವಣೆಯ ಮಾಹಿತಿಗಳನ್ನು ಆಧಾರಿಸಿದಾಗ ಈ ವೈರಲ್ ಪೋಸ್ಟ್ಗಳ ಬಗ್ಗೆ ಸಾಮಾನ್ಯ ಜನರಲ್ಲಿ ಅನುಮಾನವನ್ನು ಮೂಡಿಸಿದೆ. ಹಾಗಾಗಿ ಈ ಫ್ಯಾಕ್ಟ್ಚೆಕ್ನಲ್ಲಿ ವೈರಲ್ ಪೋಸ್ಟ್ನಲ್ಲಿ ಹೇಳಿರುವ ಅಂಶಗಳ ಕುರಿತು ಪರಿಶೀಲನೆ ನಡೆಸೋಣ
Go Kamala! The first Harris ad it out. pic.twitter.com/yurXKqPXlG
— Sarah Zupko Kondeusz (@PopSarah) July 21, 2024
ಫ್ಯಾಕ್ಟ್ಚೆಕ್
ವ್ಯಾಪಕವಾಗಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿರುವಂತೆ ನಿಜಕ್ಕೂ ಕಮಲಾ ಹ್ಯಾರಿಸ್ ಅವರು ಟ್ರಂಪ್ ವಿರುದ್ಧ ಜಾಹಿರಾತು ನೀಡಿದ್ದಾರೆಯೇ ಎಂದು ಪರಿಶೀಲನೆ ನಡೆಸಲು ನಮ್ಮ ಕನ್ನಡ ಫ್ಯಾಕ್ಟ್ಚೆಕ್ ತಂಡ ಮುಂದಾಯಿತು. ಇದಕ್ಕಾಗಿ ಮೊದಲು ಕಮಲಾ ಹ್ಯಾರಿಸ್ ಅವರು ನಿಜಕ್ಕೂ ಅಮೆರಿಕಾ ಅಧ್ಯಕ್ಷ ಚುನಾವಣೆಯೇ ಅಭ್ಯರ್ಥಿಯೇ ಎಂಬುದನ್ನು ನಾವು ಪರಿಶೀಲನೆ ನಡೆಸಿದೆವು. ಆಗ ನಮಗೆ ಜೋ ಬೈಡೆನ್ ಅವರು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರನ್ನು ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿಯನ್ನಾಗಿ ನಾಮನಿರ್ದೇಶನಗೊಳಿಸಿರುವುದು ತಿಳಿದು ಬಂದಿದ್ದು, ಇನ್ನೂ ಕೂಡ ಅಧಿಕೃತವಾಗಿ ಇವರೇ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಎಂಬುದು ಘೋಷಣೆಯಾಗಿಲ್ಲ.
ಇನ್ನೂ ಕೂಡ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಯಾರೂ ಎಂಬುದೇ ಘೋಷಣೆಯಾಗದೇ ಇದ್ದಾಗ ಹೇಗೆ ಕಮಲಾ ಹ್ಯಾರಿಸ್ ಅವರು ಟ್ರಂಪ್ ವಿರುದ್ಧ ಜಾಹಿರಾತು ನೀಡಲು ಸಾಧ್ಯ? ಎಂಬ ಪ್ರಶ್ನೆ ಕೂಡ ಕಾಡುತ್ತದೆ. ಹೀಗಾಗಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋ ಕುರಿತು ಪರಿಶೀಲನೆ ನಡೆಸಲು ವಿಡಿಯೋವಿನ ವಿವಿಧ ಕೀ ಫ್ರೇಮ್ಗಳನ್ನು ಬಳಸಿ ಗೂಗಲ್ ರಿವರ್ಸ್ ಇಮೇಜ್ನಲ್ಲಿ ಹುಡುಕಾಟವನ್ನು ನಡೆಸಲಾಯಿತು ಈ ವೇಳೆ ನಮಗೆ ಕಮಲಾ ಹ್ಯಾರಿಸ್ ಅವರು 21 ನವೆಂಬರ್ 2019ರಂದು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡ ವಿಡಿಯೋವೊಂದು ಕಂಡು ಬಂದಿದೆ. ಹೀಗಾಗಿ ಈ ವಿಡಿಯೋ ಕೂಡ ಇತ್ತೀಚಿನದ್ದಲ್ಲ ಎಂದು ತಿಳಿದು ಬಂದಿದ್ದು. ಈ ವಿಡಿಯೋದಲ್ಲೇ ಟ್ರಂಪ್ ಅವರನ್ನು ಟೀಕಿಸಿರುವುದನ್ನು ಕಾಣಬಹುದಾಗಿದೆ.
I prosecuted sex predators. Trump is one.
I shut down for-profit scam colleges. He ran one.
I held big banks accountable. He's owned by them.I'm not just prepared to take on Trump, I'm prepared to beat him. pic.twitter.com/bg4xZ4uLne
— Kamala Harris (@KamalaHarris) November 20, 2019
ಒಟ್ಟಾರೆಯಾಗಿ ಹೇಳುವುದಾದರೆ 2019ರ ವಿಡಿಯೋವನ್ನು ಬಳಸಿಕೊಂಡು 2024ರಲ್ಲಿ ಕಮಲಾ ಹ್ಯಾರಿಸ್ ಅಮೆರಿಕದ ಅಧ್ಯಕ್ಷಿಯ ಚುನಾವಣ ಪ್ರಚಾರಕ್ಕಾಗಿ ಜಾಹಿರಾತು ಆರಂಭಿಸಿದ್ದಾರೆ ಎಂದು ಸುಳ್ಳು ಟಿಪ್ಪಣಿಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಇನ್ನು ಇಲ್ಲಿ ಪ್ರಮುಖವಾದ ವಿಚಾರವೆಂದರೆ ಡೆಮಾಕ್ರಟಿಕ್ ಪಕ್ಷದ ಅಧಿಕೃತ ಅಧ್ಯಕ್ಷೀಯ ಅಭ್ಯರ್ಥಿಯಾಗಿ ಕಮಲಾ ಹ್ಯಾರಿಸ್ ಅವರು ಆಯ್ಕೆಯಾಗಿಲ್ಲ. ಹಾಗಾಗಿ ವೈರಲ್ ವಿಡಿಯೋದೊಂದಿಗೆ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ಪೋಸ್ಟ್ ಸಂಪೂರ್ಣವಾಗಿ ಸುಳ್ಳಿನಿಂದ ಕೂಡಿದೆ.
ಇದನ್ನೂ ಓದಿ : Fact Check: ಮಿಸ್ಟರ್ ಬೀನ್ ನಟ ರೋವನ್ ಅಟ್ಕಿನ್ಸನ್ ಹಾಸಿಗೆ ಹಿಡಿದಿದ್ದಾರೆ ಎಂದು ಎಡಿಟ್ ಮಾಡಿದ ಪೋಟೋ ಹಂಚಿಕೊಳ್ಳಲಾಗಿದೆ
ನಿಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್ಚೆಕ್ ವಾಟ್ಸಾಪ್ ನಂಬರ್ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ.