Fact Check | ಯೋಗಿ ಆದಿತ್ಯನಾಥ್ ಪ್ರಧಾನಿ ಮೋದಿಯನ್ನು ಕಡೆಗಣಿಸಿದ್ದಾರೆ ಎಂಬ ವಿಡಿಯೋ ಎಡೆಟೆಡ್‌ ಆಗಿದೆ

ಇತ್ತೀಚೆಗೆ ಹಲವು ಕಾರಣಗಳಿಂದಾಗಿ ಉತ್ತರ ಪ್ರದೇಶದ ರಾಜಕಾರಣ ಬಹಳ ದೊಡ್ಡ ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿದೆ. ಅದರಲ್ಲೂ ಪ್ರಮುಖವಾಗಿ ಯೋಗಿ ಆದಿತ್ಯನಾಥ್‌ ಮತ್ತು ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರ ನಡುವೆ ವೈಮನಸ್ಸು ಇದೆ ಎಂದು, ಆಗಾಗ ಹಲವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ಗಳನ್ನು ಮಾಡುತ್ತಲೇ ಇರುತ್ತಾರೆ. ಇದೀಗ ವಿಡಿಯೋವೊಂದು ವೈರಲ್ ಆಗಿದ್ದು, ಇದರಲ್ಲಿ ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಕಾರ್ಯಕ್ರಮವೊಂದಕ್ಕೆ ಬರುವಾಗ ಎಲ್ಲರಿಗೂ ನಮಸ್ಕರಿಸಿದ್ದಾರೆ ಆದರೆ ಯೋಗಿ ಆದಿತ್ಯನಾಥ್ ಇಬ್ಬರು ನಾಯಕರು ನಮಸ್ಕರಿಸುವಾಗ ಅವರಿಗೆ ಪ್ರತಿಕ್ರಿಯೆಯನ್ನು ನೀಡಿಲ್ಲ ಎಂದು ವಿಡಿಯೋವನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ.

ಈ ವಿಡಿಯೋ ನೋಡಿದ ಹಲವರು ” ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರವು ಸಮಾನಾಂತರ ಸರ್ಕಾರ ನಡೆಸಲು ಬಾಬುಗಳನ್ನು ನೇಮಿಸಿದ ಮೋದಿ ಮತ್ತು ಶಾ ಅವರಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಿಲ್ಲ. ಮೋದಿ ಒನ್ ಮ್ಯಾನ್ ಶೋ ಬಯಸುತ್ತಾರೆ ಮತ್ತು ಷಾ ಯಾವುದೇ ಸವಾಲನ್ನು ಸಹಿಸುವುದಿಲ್ಲ. ಈ ಇಬ್ಬರೂ ಭಾರತವನ್ನು ಹಾಳು ಮಾಡುತ್ತಿದ್ದಾರೆ” ಎಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಇನ್ನೂ ಹಲವರು ವಿವಿಧ ರೀತಿಯಲ್ಲಿ ಟಿಪ್ಪಣಿ ಬರೆದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವನ್ನು ಪೋಸ್ಟ್‌ ಮಾಡುತ್ತಿದ್ದಾರೆ.

ಫ್ಯಾಕ್ಟ್‌ಚೆಕ್‌

ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿರುವ ವಿಡಿಯೋ ಕುರಿತು ಕನ್ನಡ ಫ್ಯಾಕ್ಟ್‌ಚೆಕ್‌ ತಂಡ ಪರಿಶೀಲನೆಯನ್ನು ನಡೆಸಲು ಮುಂದಾಯಿತು. ಇದಕ್ಕಾಗಿ ಕೆಲವೊಂದು ಕೀ ವರ್ಡ್‌ಗಳನ್ನು ಬಳಸಿ ಅಂತರ್ಜಾಲದಲ್ಲಿ ಹುಡುಕಾಟವನ್ನು ನಡೆಸಿದೆವು. ಈ ವೇಳೆ ನಮಗೆ ಪ್ರಧಾನಿ ಮೋದಿಯವರ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ 28 ಜುಲೈ 2024ರಂದು PM Modi attends a meeting of BJP CMs and Deputy CMs ಎಂಬ ಶೀರ್ಷಿಕೆಯಲ್ಲಿ ಹಂಚಿಕೊಂಡ ವಿಡಿಯೋವೊಂದು ಪತ್ತೆಯಾಗಿದೆ.

ಈ ವಿಡಿಯೋ ಬಿಜೆಪಿಯ ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳ ಸಭೆಯದ್ದಾಗಿದ್ದು, ಈ ವಿಡಿಯೋವನ್ನು ಸೂಕ್ಷ್ಮವಾಗಿ ಗಮನಿಸಿದಾಗ ವೀಡಿಯೊದ ಮೊದಲ ಎರಡು ಸೆಕೆಂಡುಗಳಲ್ಲಿ ಯೋಗಿ ಆದಿತ್ಯನಾಥ್ ಅವರು ಪ್ರಧಾನಿ ಮೋದಿಯನ್ನು ಸ್ವಾಗತಿಸಲು ಕೈ ಮುಗಿದು ನಮಸ್ಕರಿಸುವುದನ್ನು ಕಾಣಬಹುದಾಗಿದೆ. ಆದರೆ ಅವರು ವೇಗವಾಗಿ ಕೈಮುಗಿದು ಮತ್ತೆ ಕೈಯನ್ನು ಕೆಳಗಿಳಿಸಿರುವುದು ವಿಡಿಯೋದಲ್ಲಿ ಕಂಡುಬಂದಿದೆ. ಹೀಗಾಗಿ ವೈರಲ್‌ ವಿಡಿಯೋ ಎಡಿಟ್‌ ಮಾಡಲಾಗಿದೆ ಎಂಬುದು ಸಾಬೀತಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ ಅವರನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ನಿರ್ಲಕ್ಷಿಸಿದ್ದಾರೆ ಎಂದು ಹಂಚಿಕೊಳ್ಳಲಾಗುತ್ತಿರುವ ವಿಡಿಯೋ ಎಡಿಟೆಡ್ ಆಗಿದ್ದು, ಈ ವಿಡಿಯೋದೊಂದಿಗೆ ವೈರಲ್ ಆಗುತ್ತಿರುವ ಬರಹಗಳು ಕೂಡ ಸುಳ್ಳಿನಿಂದ ಕೂಡಿದೆ. ಹಾಗಾಗಿ ಇಂತಹ ವಿಡಿಯೋಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರವಹಿಸಿ.


ಇದನ್ನೂ ಓದಿ : Fact Check | ಯುವಕ ಪಾನೀಯದ ಬಾಟೆಲ್‌ನಲ್ಲಿ ಉಗುಳಿದ ಹಳೆಯ ವಿಡಿಯೋ ಟೆಕ್ಸಾಸ್‌ದು


ನಿಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್‌ಚೆಕ್ ವಾಟ್ಸಾಪ್ ನಂಬರ್‌ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ.

Leave a Reply

Your email address will not be published. Required fields are marked *