ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ವೈರಲ್ ಆಗುತ್ತಿದೆ. ಇದರಲ್ಲಿ ವ್ಯಕ್ತಿಯೊಬ್ಬ ಕುರ್ಆನ್ ಅನ್ನು ಓದುತ್ತಿರುವುದು ಕಾಣಬಹುದಾಗಿದೆ. ಇದನ್ನು ಗಮನಿಸಿದ ಹಲವರು ಈತ ಖ್ಯಾತ ಫುಟ್ಬಾಲ್ ಆಟಗಾರ ಕ್ರಿಸ್ಟಿಯಾನೋ ರೆನಾಲ್ಡೋ ಕುರ್ಆನ್ ಅನ್ನು ಓದುತ್ತಿದ್ದಾರೆ ಮತ್ತು ಅವರು ಇಸ್ಲಾಂ ಧರ್ಮವನ್ನು ಒಪ್ಪಿಕೊಂಡಿದ್ದಾರೆ ಎಂದು ಬರೆದುಕೊಂಡು ಹಂಚಿಕೊಳ್ಳುತ್ತಿದ್ದಾರೆ.
माशाअल्लाह…..❤️
Ronaldo "कुरआन" की तिलावत करते हुऐ…!!❤️🌸 pic.twitter.com/4vyDuMXKzm— 🩷 تــᷧـــــᷡـــــᷡــــᷧــــᷟــــᷧــــⷮـــمنّا 🩷 (@Ta_manna__) September 26, 2024
ವೈರಲ್ ಪೋಸ್ಟ್ ಅನ್ನು ನೋಡಿದ ಸಾಕಷ್ಟು ಮಂದಿ ಸಾಮಾಜಿಕ ಜಾಲತಾಣದ ಬಳಕೆದಾರರು ಇದನ್ನು ನಿಜವೆಂದು ನಂಬಿ, ತಮ್ಮ ವೈಯಕ್ತಿಕ ಖಾತೆಗಳಲ್ಲಿ ವಿವಿಧ ಬರಹಗಳೊಂದಿಗೆ ಹಂಚಿಕೊಳ್ಳುತ್ತಿದ್ದಾರೆ. ಹಲವರು ಮುಸ್ಲಿಂ ವಿರೋಧಿ ಬರಹಗಳೊಂದಿಗೆ ಕೂಡ ಈ ವಿಡಿಯೋವನ್ನು ಹಂಚಿಕೊಂಡು, ತಮ್ಮ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ. ಈ ಮೂಲಕ ವಿವಿಧ ರೀತಿಯ ಅಭಿಪ್ರಾಯಗಳು ಈ ವಿಡಿಯೋ ಬಗ್ಗೆ ಅಂತರ್ಜಾಲದಲ್ಲಿ ವ್ಯಕ್ತವಾಗುತ್ತಿದೆ. ಹೀಗೆ ಹಂಚಿಕೊಳ್ಳಲಾಗುತ್ತಿರುವ ವೈರಲ್ ವಿಡಿಯೋ ಕುರಿತು ಈ ಫ್ಯಾಕ್ಟ್ಚೆಕ್ನಲ್ಲಿ ಪರಿಶೀಲನೆ ನಡೆಸೋಣ
कह दो ए-मोमीनो … इस्लाम सबसे ज्यादा खुबसूरत मज़हब है ☝️
मशहूर फुटबॉलर रोनाल्डो कुरआन पढ़ते हुए माशाअल्लाह 👌 pic.twitter.com/7nbSsyChDK
— Sayyada Fatima (@sayyadafatima8) June 3, 2024
ಫ್ಯಾಕ್ಟ್ಚೆಕ್
ಸಾಮಾಜಿಕ ಜಾಲತಾಣದಲ್ಲಿ ವಿವಿಧ ಬರಹಗಳೊಂದಿಗೆ ಹಂಚಿಕೊಳ್ಳಲಾಗುತ್ತಿರುವ ವೈರಲ್ ವಿಡಿಯೋ ಕುರಿತು ಪರಿಶೀಲನೆ ನಡೆಸಲು ನಮ್ಮ ಕನ್ನಡ ಫ್ಯಾಕ್ಟ್ಚೆಕ್ ತಂಡ ಮುಂದಾಯಿತು. ಇದಕ್ಕಾಗಿ ನಾವು ವೈರಲ್ ವಿಡಿಯೋವಿನ ಕಮೆಂಟ್ಗಳನ್ನು ಪರಿಶೀಲನೆ ನಡೆಸಿದೆವು. ಈ ವೇಳೆ ಸಾಕಷ್ಟು ಮಂದಿ ಈ ವ್ಯಕ್ತಿ ರೊನಾಲ್ಡೋ ಅಲ್ಲ ಆದರೆ ಅವರ ಹೆಸರು ಬಿವರ್ ಅಬ್ದುಲ್ಲಾ ಎಂದು ಉಲ್ಳೇಖಿಸಿದ್ದಾರೆ.
ಇದರ ಆಧಾರದ ಮೇಲೆ ಹುಡುಕಾಟವನ್ನು ನಡೆಸಿದಾಗ ಅನೇಕ ಸುದ್ದಿ ವರದಿಗಳು ನಮಗೆ ಕಂಡುಬಂದಿವೆ. ಅದರಲ್ಲಿ ಬೀವರ್ ಅಬ್ದುಲ್ಲಾ ಅವರು ಪ್ರಸಿದ್ಧ ಫುಟ್ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೊ ಅವರ ರೀತಿ ಇದ್ದಾರೆ. ಅದಕ್ಕಾಗಿ ಅವರು ಹೆಚ್ಚು ಜನಪ್ರಿಯರಾಗಿದ್ದಾರೆ ಮತ್ತು ಅವರು ಇಂಗ್ಲೆಡ್ನ ಬರ್ಮಿಂಗ್ ಹ್ಯಾಮ್ನಲ್ಲಿ ವಾಸಿಸುತ್ತಿದ್ದಾರೆ ಎಂಬುದು ತಿಳಿದು ಬಂದಿದೆ. ಇವರಿಗೆ ಸಂಬಂಧಪಟ್ಟ ಹಲವು ವಿಡಿಯೋಗಳು, ಫೋಟೋಗಳು ಸಾಮಾಜಿಕ ಜಾಲತಾಣ ಮತ್ತು ಅಂತರ್ಜಾಲದಲ್ಲಿ ಲಭ್ಯವಿದ್ದು ಅಲ್ಲಿಯೂ ಕೂಡ ಪರಿಶೀಲನೆ ನಡೆಸಬಹುದಾಗಿದೆ
ಒಟ್ಟಾರೆಯಾಗಿ ಹೇಳುವುದಾದರೆ ಖ್ಯಾತ ಫುಟ್ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೋ ಅವರು ಕುರ್ಆನ್ ಅನ್ನು ಓದುತ್ತಿದ್ದಾರೆ ಮತ್ತು ಇಸ್ಲಾಂ ಮತವನ್ನು ಅವರು ಒಪ್ಪಿಕೊಂಡಿದ್ದಾರೆ ಎಂಬ ಪ್ರತಿಪಾದನೆ ಸಂಪೂರ್ಣವಾಗಿ ಸುಳ್ಳಿನಿಂದ ಕೂಡಿದೆ. ಹಾಗಾಗಿ ಇಂತಹ ಸುದ್ದಿಗಳು ಕಂಡು ಬಂದರೆ ಅವುಗಳನ್ನು ನಿರ್ಲಕ್ಷಿಸಿ ಮತ್ತು ಇಂತಹ ಸುಳ್ಳು ಸುದ್ದಿಗಳನ್ನು ಹಂಚಿಕೊಳ್ಳುವುದು ಕಾನೂನಿನ ಪ್ರಕಾರ ಅಪರಾಧವಾಗಿದೆ.
ಇದನ್ನೂ ಓದಿ : Fact Check | ಬೈಕ್ನಲ್ಲಿ ಬಂದ ಇಬ್ಬರು ಮುಸುಕುಧಾರಿಗಳಿಂದ ವೃದ್ಧನಿಗೆ ಕಿರುಕುಳ ನೀಡಿದ್ದಾರೆ ಎಂಬುದು ನೈಜ ಘಟನೆಯಲ್ಲ
ನಿಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್ಚೆಕ್ ವಾಟ್ಸಾಪ್ ನಂಬರ್ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ.