Fact Check | 20 ಜನ ಹಂತಕರ ಗುಂಪು ಜನರನ್ನು ಕೊಲ್ಲಲು ರಾತ್ರಿ ದಾಳಿ ನಡೆಸುತ್ತದೆ ಎಂಬ ಸುದ್ದಿ ಸುಳ್ಳು

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ವೈರಲ್‌ ಆಗುತ್ತಿದೆ. ಹಲವರು ಈ ವಿಡಿಯೋದೊಂದಿಗೆ ಬೇರೆ ಆಡಿಯೋವೊಂದನ್ನು ಜೊತೆಗೂಡಿಸಿ ಹಂಚಿಕೊಳ್ಳುತ್ತಿದ್ದಾರೆ. ಈ ವೈರಲ್‌ ಆಡಿಯೋದಲ್ಲಿ 20 ಜನ ಹಂತಕರ ಗುಂಪು ರಾತ್ರಿ ದಾಳಿ ನಡೆಸಿ ಕುಟುಂಬವೊಂದನ್ನು ಬರ್ಬರವಾಗಿ ಕೊಂದು ಹಾಕಿದೆ ಎಂದು ಉಲ್ಲೇಖಿಸಲಾಗಿದೆ. ಹೀಗಾಗಿ ಸಾರ್ವಜನಿಕರು ರಾತ್ರಿ ಹೊತ್ತು ಹೊರಗೆ ಓಡಾಡದಂತೆ ಮತ್ತು ಯಾರೇ ರಾತ್ರಿಯ ಹೊತ್ತಿನಲ್ಲಿ ಬಾಗಿಲು ತಟ್ಟಿದರೂ ತೆಗೆಯದಂತೆ ಈ ಅಡಿಯೋದಲ್ಲಿ ಸೂಚಿಸಲಾಗಿದೆ.

ಈ ವೈರಲ್‌ ವಿಡಿಯೋ ಮತ್ತು ಆಡಿಯೋವನ್ನು ಒಂದು ಗೂಡಿಸಿ ಸಾಕಷ್ಟು ಮಂದಿ ತಮ್ಮ ವೈಯಕ್ತಿ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಇದು ಸಾರ್ವಜನಿಕ ವಲಯದಲ್ಲಿ ಭೀತಿಯನ್ನು ಹುಟ್ಟು ಹಾಕಿದೆ. ಹೀಗಾಗಿ ವೈರಲ್‌ ವಿಡಿಯೋ ಗೊಂದಲಕ್ಕೆ ಕೂಡ ಕಾರಣವಾಗಿದೆ. ಹೀಗೆ ವಿವಿಧ ನಿರೂಪಣೆಗಳೊಂದಿಗೆ ಹಂಚಿಕೊಳ್ಳಲಾಗುತ್ತಿರುವ ವಿಡಿಯೋ ಎಷ್ಟರ ಮಟ್ಟಿಗೆ ಸತ್ಯ ಎಂಬುದನ್ನು ಈ ಫ್ಯಾಕ್ಟ್‌ಚೆಕ್‌ನಲ್ಲಿ ಸಂಪೂರ್ಣವಾಗಿ ಪರಿಶೀಲನೆ ನಡೆಸೋಣ

ಫ್ಯಾಕ್ಟ್‌ಚೆಕ್‌

ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್‌ ಪೋಸ್ಟ್‌ ಕುರಿತು ಪರಿಶೀಲನೆ ನಡೆಸಲು ನಮ್ಮ ಕನ್ನಡ ಫ್ಯಾಕ್ಟ್‌ಚೆಕ್‌ ತಂಡ ಮುಂದಾಯಿತು. ಇದಕ್ಕಾಗಿ ನಾವು ವೈರಲ್‌ ವಿಡಿಯೋವಿನ ವಿವಿಧ ಕೀ ಫ್ರೇಮ್‌ಗಳನ್ನು ಬಳಸಿಕೊಂಡು ಗೂಗಲ್‌ ರಿವರ್ಸ್‌ ಇಮೇಜ್‌ನಲ್ಲಿ ಹುಡುಕಾಟ ನಡೆಸಿದೆವು. ಈ ವೇಳೆ ನಮಗೆ 24 ಜೂನ್ 2023 ರಂದು ಅದೇ ಚಿತ್ರವನ್ನು ಒಳಗೊಂಡಿರುವ ಟ್ವೀಟ್‌ ಒಂದು ಕಂಡು ಬಂದಿದೆ. ಅದರಲ್ಲಿ “ಯುಪಿಯಿಂದ ಇಂದಿನ ಅತಿದೊಡ್ಡ ಸುದ್ದಿ: ಮೈನ್‌ಪುರಿ ಜಿಲ್ಲೆಯ ಕಿಶಾನಿ ಪೊಲೀಸ್ ಠಾಣೆ ವ್ಯಾಪ್ತಿಯ ಗೋಕುಲ್‌ಪುರ ಅರ್ಸಾರಾ ಗ್ರಾಮದಲ್ಲಿ 6 ಜನರನ್ನು ಹರಿತವಾದ ಆಯುಧಗಳಿಂದ ಹತ್ಯೆ ಮಾಡಲಾಗಿದೆ. ಒಂದೇ ಕುಟುಂಬದ ಆರು ಮಂದಿ ಮಲಗಿದ್ದ ವೇಳೆ ಸಾವನ್ನಪ್ಪಿದ್ದಾರೆ. 3 ದಿನಗಳ ಹಿಂದೆ ಕುಟುಂಬದಲ್ಲಿ ಮದುವೆ ಇತ್ತು. ಪೊಲೀಸರು ಈ ಬಗ್ಗೆ ಸಕ್ರಿಯವಾಗಿ ತನಿಖೆ ನಡೆಸುತ್ತಿದ್ದಾರೆ.” ಎಂಬ ಬರಹವು ಕಂಡು ಬಂದಿದೆ.

ಇದರ ಆಧಾರ ಮೇಲೆ ನಾವು ಇನ್ನಷ್ಟು ಹುಡುಕಾಟವನ್ನು ನಡೆಸಿದೆವು. ಈ ವೇಳೆ ನಮಗೆ 24 ಜೂನ್ 2023 ರಲ್ಲಿ ಪ್ರಕಟಗೊಂಡ ವರದಿಯೊಂದು ಕಂಡು ಬಂದಿದೆ. ಆ ವರದಿಯ ಪ್ರಕಾರ  ಕಿಶಾನಿ ಪೊಲೀಸ್ ಠಾಣೆ ವ್ಯಾಪ್ತಿಯ ಗೋಕುಲ್‌ಪುರ ಅರ್ಸಾರಾ ಗ್ರಾಮದಲ್ಲಿ ಆರು ಜನರನ್ನು ಹರಿತವಾದ ಆಯುಧಗಳಿಂದ ಹತ್ಯೆ ಮಾಡಲಾಗಿದೆ. ಒಂದೇ ಕುಟುಂಬದ ಆರು ಮಂದಿ ಮಲಗಿದ್ದ ವೇಳೆ ಸಾವನ್ನಪ್ಪಿದ್ದಾರೆ. ಎಂದು ಉಲ್ಲೇಖಿಸಾಲಗಿದೆ.

ಇದೇ ರೀತಿ ಹಲವಾರು ಮಾಧ್ಯಮ ಸಂಸ್ಥೆಗಳು ಕೂಡ ಈ ಘಟನೆಯ ಬಗ್ಗೆ ವರದಿಯನ್ನು ಮಾಡಿದ್ದು,  ಮೈನ್‌ಪುರಿಯ ಕಿಶಾನಿ ಪ್ರದೇಶದಲ್ಲಿ ಒಂದೇ ಕುಟುಂಬದ ಎಂಟು ಸದಸ್ಯರ ಮೇಲೆ ದಾಳಿ ನಡೆಸಲಾಗಿದ್ದು, ಆರು ಮಂದಿ ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ವರದಿ ಮಾಡಿದೆ. ದಾಳಿಕೋರ ಕುಟುಂಬದ ಸದಸ್ಯರೇ ಕೊಲೆ ಮಾಡಿದ ನಂತರ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಅಂಶ ಬೆಳಕಿಗೆ ಬಂದಿದೆ.

ಒಟ್ಟಾರೆಯಾಗಿ ಹೇಳುವುದಾದರೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿರುವ ರೀತಿ 20 ಜನ ಹಂತಕರ ತಂಡ ರಾತ್ರೋ ರಾತ್ರಿ ಜನ ಸಾಮಾನ್ಯರು ಕೊಲ್ಲುತ್ತಿದೆ ಎಂಬುದು ಸುಳ್ಳು. ವೈರಲ್‌ ವಿಡಿಯೋದ ಘಟನೆ ಉತ್ತರ ಪ್ರದೇಶಕ್ಕೆ ಸಂಬಂಧಿಸಿದ್ದಾಗಿದ್ದು, ಮೈನ್‌ಪುರಿ ಜಿಲ್ಲೆಯ ಕಿಶಾನಿಯಲ್ಲಿ ಕುಟುಂಬದ ಸದಸ್ಯನೊಬ್ಬ ತನ್ನ ಇತರೇ ಕುಟುಂಬ ಸದಸ್ಯರನ್ನು ಕೊಂದು ತಾನೂ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದ್ದಾಗಿದೆ. ಹಾಗಾಗಿ ವೈರಲ್‌ ವಿಡಿಯೋ ಸುಳ್ಳು ನಿರೂಪಣೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ.


ಇದನ್ನೂ ಓದಿ : Fact Check: ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್‌ ಸರ್ಕಾರ “ಶೌಚಾಲಯ ತೆರಿಗೆ” ವಿಧಿಸಲು ಮುಂದಾಗಿದೆ ಎಂಬುದು ಸುಳ್ಳು 


ನಿಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್‌ಚೆಕ್ ವಾಟ್ಸಾಪ್ ನಂಬರ್‌ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ

Leave a Reply

Your email address will not be published. Required fields are marked *