ಪ್ರಸ್ತುತ ಪಶ್ಚಿಮ ಬಂಗಾಳದ ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಪ್ರಾರ್ಥನೆ ಸಲ್ಲಿಸಲು ಮುಸ್ಲಿಂ ಮಹಿಳೆಯೊಬ್ಬಳು ಬುರ್ಖಾವನ್ನು ತೆಗೆದುಹಾಕುತ್ತಿರುವುದನ್ನು ತೋರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. “ಈ ವೀಡಿಯೊವನ್ನು ನೀವು ನೋಡಲೇಬೇಕು, ಇದು ಪಶ್ಚಿಮ ಬಂಗಾಳದ್ದಾಗಿದೆ. ಮುಸ್ಲಿಂ ಮಹಿಳೆಯೊಬ್ಬಳ ತಾಯಿ ದುರ್ಗೆಯ ಮೇಲಿನ ಭಕ್ತಿ ಮತ್ತು ನಂಬಿಕೆಯ ಬಗ್ಗೆ ನಿಮ್ಮ ಅಭಿಪ್ರಾಯವನ್ನು ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿ.” ಎಂಬ ಶೀರ್ಷಿಕೆಯೊಂದಿಗೆ ವೈರಲ್ ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ.

ಆರ್ಕೈವ್ ಮಾಡಿದ ಪೋಸ್ಟ್ ಅನ್ನು ಇಲ್ಲಿ ಕಾಣಬಹುದು.

ಫ್ಯಾಕ್ಟ್‌ ಚೆಕ್:

ಈ ಕುರಿತು ನಾವು ಹೆಚ್ಚಿನ ಮಾಹಿತಿ ತಿಳಿಯಲು ವೈರಲ್ ವೀಡಿಯೊದಿಂದ ಕೆಲವು ಕೀಫ್ರೇಮ್‌ಗಳನ್ನು ಬಳಸಿ ರಿವರ್ಸ್ ಇಮೇಜ್ ಹುಡುಕಾಟವನ್ನು ನಡೆಸಿದಾಗ ನಟಿ ಸಂಜನಾ ಗಲ್ರಾನಿ ಅವರು 10 ಅಕ್ಟೋಬರ್ 2024 ರಂದು ಫೇಸ್ಬುಕ್‌ನಲ್ಲಿ ಅಪ್ಲೋಡ್ ಮಾಡಿದ ಇದೇ ರೀತಿಯ ವೀಡಿಯೊ ಒಂದು  ಲಭ್ಯವಾಗಿದೆ.

ಶೀರ್ಷಿಕೆಯಲ್ಲಿ ಮತ್ತು ವೀಡಿಯೊದ ಕೊನೆಯಲ್ಲಿ ಹಕ್ಕು ನಿರಾಕರಣೆಯನ್ನು(Disclaimer) ಸೇರಿಸಲಾಗಿದೆ ಎಂದು ನಾವು ಗಮನಿಸಿದ್ದೇವೆ. ಇದರಲ್ಲಿ “ವೀಕ್ಷಿಸಿದ್ದಕ್ಕಾಗಿ ಧನ್ಯವಾದಗಳು! ಈ ಪುಟವು ಪೂರ್ವನಿಯೋಜಿತವಾಗಿ ಸ್ಕ್ರಿಪ್ಟ್ ಮಾಡಿದ ನಾಟಕಗಳು, ವ್ಯಂಗ್ಯಚಿತ್ರಗಳು ಮತ್ತು ಜಾಗೃತಿ ವೀಡಿಯೊಗಳನ್ನು ಒಳಗೊಂಡಿದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ಕಿರುಚಿತ್ರಗಳನ್ನು ಮನರಂಜನೆ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರ ರಚಿಸಲಾಗಿದೆ. ವೀಡಿಯೊಗಳಲ್ಲಿ ಚಿತ್ರಿಸಲಾದ ಎಲ್ಲಾ ಪಾತ್ರಗಳು ಮತ್ತು ಸನ್ನಿವೇಶಗಳು ಕಾಲ್ಪನಿಕವಾಗಿವೆ ಮತ್ತು ಜಾಗೃತಿ ಮೂಡಿಸಲು, ಮನರಂಜನೆ ನೀಡಲು ಮತ್ತು ಶಿಕ್ಷಣ ನೀಡುವ ಉದ್ದೇಶವನ್ನು ಹೊಂದಿವೆ.ಎಂಬ ಶೀರ್ಷಿಕೆಯನ್ನು ನೀಡಲಾಗಿದೆ.

ಇದೇ ರೀತಿಯ ಹಕ್ಕು ನಿರಾಕರಣೆಗಳನ್ನು ಒಳಗೊಂಡಿರುವ ಈ ಪುಟದಲ್ಲಿ ಪೋಸ್ಟ್ ಮಾಡಲಾದ ಹಲವಾರು ಸ್ಕ್ರಿಪ್ಟೆಡ್ ವೀಡಿಯೊಗಳನ್ನು ನಾವು ಕಂಡುಕೊಂಡಿದ್ದೇವೆ, ಇದು ವೈರಲ್ ವೀಡಿಯೊವನ್ನು ಸ್ಕ್ರಿಪ್ಟ್ ಮಾಡಲಾಗಿದೆ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾಡಲಾಗಿದೆ ಎಂದು ದೃಢಪಡಿಸಿದೆ. ಈ ಸ್ಕ್ರಿಪ್ಟ್ ಮಾಡಿದ ವೀಡಿಯೊಗಳಲ್ಲಿ ಒಂದನ್ನು ಕೆಳಗಿನ ಹೋಲಿಕೆಯಲ್ಲಿ ತೋರಿಸಿರುವಂತೆ ಅದೇ ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಚಿತ್ರೀಕರಿಸಲಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಪ್ರಾರ್ಥನೆ ಸಲ್ಲಿಸಲು ಮುಸ್ಲಿಂ ಮಹಿಳೆಯೊಬ್ಬಳು ಬುರ್ಖಾವನ್ನು ತೆಗೆಯುವ ಪೂರ್ವನಿಯೋಜಿತ ವೀಡಿಯೊವನ್ನು ನಿಜವಾದ ಘಟನೆ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ.


ಇದನ್ನು ಓದಿ: ಪ್ರಧಾನಿ ಮೋದಿ ತಮ್ಮದೇ ಟೀಕೆಯ ವಿಡಿಯೋವನ್ನು ವೀಕ್ಷಿಸಿದ್ದಾರೆ ಎಂದು ಎಡಿಟೆಡ್‌ ವಿಡಿಯೋ ಹಂಚಿಕೆ


ನಿಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್‌ಚೆಕ್ ವಾಟ್ಸಾಪ್ ನಂಬರ್‌ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ.