Fact Check : ಡೊನಾಲ್ಡ್ ಟ್ರಂಪ್ ವಿಡಿಯೋ ಗೇಮ್‌ಗಳನ್ನು ಬ್ಯಾನ್‌ ಮಾಡಬೇಕೆಂದು ಹೇಳಿಲ್ಲ

ಅಮೇರಿಕದ ಮಾಜಿ ಅಧ್ಯಕ್ಷ ಮತ್ತು ಹಾಲಿ ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಚುನಾವಣಾ ಅಭ್ಯರ್ಥಿ ಡೊನಾಲ್ಡ್ ಟ್ರಂಪ್‌ ವಿಡಿಯೋ ಗೇಮ್‌ಗಳನ್ನು ನಿಷೇಧಿಸಬೇಕು ಎಂದು ಹೇಳಿದ್ದಾರೆ ಎಂಬ  ವಿಡಿಯೋವೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ.

“ಡೊನಾಲ್ಡ್ ಟ್ರಂಪ್  ವಿಡಿಯೋ ಗೇಮ್‌ಗಳನ್ನು ನಿಷೇಧಿಸುವುದಾಗಿ ಹೇಳಿದ್ದಾರೆ” ಎಂಬ ಶೀರ್ಷಿಕೆಯೊಂದಿಗೆ ವಿಡಿಯೋವನ್ನು ಬಳಕೆದಾರರು ಹಂಚಿಕೊಳ್ಳುತ್ತಿದ್ದಾರೆ.

ಫ್ಯಾಕ್ಟ್‌ ಚೆಕ್‌ :

ಈ ವೈರಲ್‌ ವಿಡಿಯೋ ಕುರಿತು ನಿಜವನ್ನು ತಿಳಿದುಕೊಳ್ಳಲು, ವಿಡಿಯೋದ ಕೀಫ್ರೇಮ್‌ಗಳನ್ನು ರಿವರ್ಸ್ ಇಮೇಜ್ ಬಳಸಿ ಹುಡುಕಿದಾಗ,  2019ರ ಆಗಸ್ಟ್ 5ರಂದು FOX Carolina News YouTube ಚಾನಲ್‌ನಲ್ಲಿ ಹಂಚಿಕೊಂಡ ವಿಡಿಯೋ ಲಭಿಸಿದೆ.

ಈ ವಿಡಿಯೋದಲ್ಲಿ ಹಿಂಸಾತ್ಮಕ ವಿಡಿಯೋ ಗೇಮ್‌ಗಳು ಯುವಜನರಿಗೆ ಗುಂಡಿನ ದಾಳಿ ನಡೆಸಲು ಸ್ಫೂರ್ತಿಯಾಗಬಹುದು ಎಂದು ಟ್ರಂಪ್ ಹೇಳಿದ್ದರು. ನಮ್ಮ ಸಮಾಜದಲ್ಲಿ ಹಿಂಸೆಯನ್ನು ವೈಭವೀಕರಿಸುವುದನ್ನು ಮೊದಲು ನಿಲ್ಲಿಸಬೇಕು ಎಂದು ಅವರು ಹೇಳಿದ್ದರು. ಯಾವುದೇ ವಿಡಿಯೋ ಗೇಮ್‌ಗಳನ್ನು ನಿಷೇಧಿಸುವ ಕುರಿತು ಪ್ರಸ್ತಾಪಿಸಿಲ್ಲ. ಆದರೆ ಆ ವಿಡಿಯೋವನ್ನು ಎಡಿಟ್ ಮಾಡಲಾಗಿದೆ. ಇನ್ನು ಇತ್ತೀಚಿನ ದಿನಗಳಲ್ಲಿ ವೀಡಿಯೋ ಗೇಮ್‌ಗಳ ಮೇಲೆ ನಿಷೇಧ ಹೇರುವಂತೆ ಟ್ರಂಪ್ ಒತ್ತಾಯಿಸಿರವ ಯಾವುದೇ ವರದಿಗಳು ಲಭಿಸಿಲ್ಲ.

ಒಟ್ಟಾರೆಯಾಗಿ ಹೇಳುವುದಾದರೆ,  ಡೊನಾಲ್ಡ್ ಟ್ರಂಪ್ ವಿಡಿಯೋ ಗೇಮ್‌ಗಳನ್ನು ನಿಷೇಧಿಸುವುದಾಗಿ ಹೇಳಿಲ್ಲ. ಇಂತಹ ವಿಡಿಯೋಗಳನ್ನು ಹಂಚಿಕೊಳ್ಳುವ ಮುನ್ನ ಪರಿಶೀಲಿಸಿಕೊಳ್ಳಿ.


ಇದನ್ನು ಓದಿ :

Fact Check : ಬಾಬಾ ಸಿದ್ದಿಕಿ ಕೊಲೆಗೈದ ಆರೋಪಿ ಜೈಲಿನಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿಲ್ಲ


ನಿಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್‌ಚೆಕ್ ವಾಟ್ಸಾಪ್ ನಂಬರ್‌ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ.

Leave a Reply

Your email address will not be published. Required fields are marked *