Fact Check | ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದಾಗ ವಕ್ಫ್ ಬೋರ್ಡ್ ಪರವಾಗಿ ಮಾತನಾಡಿದ್ದು ನಿಜ

ಸಾಮಾಜಿಕ ಜಾಲತಾಣದಲ್ಲಿ ಹಾಲಿ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿಯಾದಂತಹ ಬಸವರಾಜ್ ಬೊಮ್ಮಾಯಿ ಅವರಿಗೆ ಸಂಬಂಧಿಸಿದ ವಿಡಿಯೋವೊಂದು ವ್ಯಾಪಕವಾಗಿ ವೈರಲ್‌ ಆಗುತ್ತಿದೆ. ಈ ವಿಡಿಯೋದಲ್ಲಿ ಬೊಮ್ಮಾಯಿ ಅವರು ವಕ್ಫ್ ಬೋರ್ಡ್ ಪರವಾಗಿ ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಮಾತನಾಡಿರುವುದು ಕಂಡುಬಂದಿದೆ. ಹೀಗಾಗಿ ಪ್ರಸ್ತುತ ರಾಜ್ಯದಲ್ಲಿ ವಕ್ಫ್ ಬೋರ್ಡ್‌ ವಿಷಯ ಚರ್ಚೆಯಲ್ಲಿರುವಾಗ ಈ ವಿಡಿಯೋವನ್ನು ಸಾಕಷ್ಟು ಮಂದಿ ಹಂಚಿಕೊಳ್ಳುತ್ತಿದ್ದಾರೆ.

ಹಿಂದಿನ ಬಿಜೆಪಿ ಸರ್ಕಾರ ವಕ್ಫ್ ಬೋರ್ಡ್ ಪರವಾಗಿ ನಿಲುವನ್ನು ಹೊಂದಿತ್ತು. ಈಗ ವಕ್ಫ್‌ ವಿರೋಧಿಯಂತೆ ವರ್ತಿಸುತ್ತಿದೆ. ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ ಅವರು ವಕ್ಫ್ ಆಸ್ತಿಯನ್ನು ಸಾಕಷ್ಟು ಖಾಸಗಿಯವರು ಆಕ್ರಮಿಸಿಕೊಂಡಿದ್ದಾರೆ. ಅದನ್ನು ಮರಳಿ ವಕ್ಫ್ ಬೋರ್ಡ್‌ಗೆ ಕೊಡಿಸುವುದಾಗಿ ಹೇಳಿರುವುದು ಕಂಡುಬಂದಿದೆ. ಹೀಗಾಗಿ ಈ ವಿಡಿಯೋ ರಾಜಕೀಯವಾಗಿ ಬಹಳ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದ್ದು, ಸಾಕಷ್ಟು ಮಂದಿ ಈ ವಿಡಿಯೋ ನಿಜವೇ ಅಥವಾ ಸುಳ್ಳು ನಿರೂಪಣೆಯಿಂದ ಕೂಡಿದೆಯೇ ಎಂಬ ಗೊಂದಲಕ್ಕೆ ಸಿಲುಕಿದ್ದಾರೆ. ಹಾಗಾಗಿ ಈ ವಿಡಿಯೋವಿನ ಅಸಲಿಯತ್ತು ಏನು ಎಂಬುದನ್ನು ಈ ಫ್ಯಾಕ್ಟ್‌ಚೆಕ್‌ನಲ್ಲಿ ಪರಿಶೀಲನೆ ನಡೆಸೋಣ

ಫ್ಯಾಕ್ಟ್‌ಚೆಕ್

ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್ ಆಗುತ್ತಿರುವ ಬಸವರಾಜ್ ಬೊಮ್ಮಾಯಿ ಅವರ ವಿಡಿಯೋ ಕುರಿತು ಪರಿಶೀಲನೆ ನಡೆಸಲು ನಮ್ಮ ಕನ್ನಡ ಫ್ಯಾಕ್ಟ್‌ಚೆಕ್‌ ತಂಡ ಮುಂದಾಯಿತು. ಇದಕ್ಕಾಗಿ ವೈರಲ್ ವಿಡಿಯೋಗೆ ಸಂಬಂಧಿಸಿದಂತೆ ವಿವಿಧ ಕೀ ವರ್ಡ್‌ಗಳನ್ನು ಬಳಸಿ ಗೂಗಲ್‌ನಲ್ಲಿ ಪರಿಶೀಲನೆಯನ್ನು ನಡೆಸಿತು. ಈ ವೇಳೆ ನಮಗೆ 22 ನವೆಂಬರ್ 2022ರಂದು FM Express Bijapur News ಎಂಬ ಯುಟ್ಯೂಬ್ ಚಾನೆಲ್‌ನಲ್ಲಿ ಪೂರ್ಣ ಆವೃತ್ತಿಯ ಮೂಲ ವಿಡಿಯೋ ಪತ್ತೆಯಾಯಿತು.

ಇದರಲ್ಲಿ ಬಸವರಾಜು ಬೊಮ್ಮಾಯಿ ಅವರು” Compromise ಮಾಡಬಾರದು. ನೀವು Compromise ಆದಲ್ಲಿ ನಮ್ಮಿಂದ ಏನೂ ಮಾಡಲು ಸಾಧ್ಯವಿಲ್ಲ. ಉಪರ್ವಾಲಾ ನೋಡುತ್ತಿದ್ದಾನೆ… ಖುದಾನ ಜಮೀನನ್ನು ಲೂಟಿ ಮಾಡುತ್ತಿರಬೇಕಾದರೆ ನೀವೆಲ್ಲಾ ಕಣ್ಣು ಮುಚ್ಚಿ ಕುಳಿತರೆ , ಲೂಟಿ ಮಾಡುವವನಿಗಿಂತ ಲೂಟಿ ಮಾಡಲು ಬಿಟ್ಟವರೇ ದೊಡ್ಡ ಮುಜ್ರಿಂ ಆಗುತ್ತಾರೆ. ಖುದಾನ ಜಮೀನುಗಳನ್ನು ರಕ್ಷಿಸುವ ಅವಕಾಶ ಲಭಿಸಿರುವ ನೀವು ಪುಣ್ಯವಂತರು. ಕರ್ನಾಟಕದಲ್ಲಿ ಸುಮಾರು 2000 ಕೋಟಿ ವಕ್ಫ್ ಆಸ್ತಿಯನ್ನು ಈಗಾಗಲೇ ಖಾಸಗಿಯವರು ತಮ್ಮದಾಗಿಸಿಕೊಂಡಿದ್ದಾರೆ… ಅಲ್ಲಿ ಇಲ್ಲಿ ಅಲ್ಪಸ್ವಲ್ಪ ಜಮೀನು ಒಳಗೆ ಹಾಕಿದ್ದರೆ ಬೇರೆ ವಿಷಯ. ಸಂಪೂರ್ಣ ಆಸ್ತಿಗಳನ್ನೇ ಖಾಸಗಿಯವರು ಒಳಗೆ ಹಾಕಿದ್ದು, ಇನ್ನೀಗ ಆಸ್ತಿಯ ಒಂದು ಮೂಲೆಯಲ್ಲಿ ನಾವು ಮಸೀದಿ ಕಟ್ಟುತ್ತೇವೆ ಎಂದರೆ ಅವರು ನಿಮಗೆ ಅವಕಾಶ ನೀಡುತ್ತಾರಾ…?!! ಆದ್ದರಿಂದ ಖಾಸಗಿಯವರು ವಶಪಡಿಸಿಕೊಂಡಿರುವ ವಕ್ಫ್ ನದ್ದು ಎಷ್ಟೆಲ್ಲಾ ಆಸ್ತಿಗಳಿವೆಯೋ ಅದೆಲ್ಲವೂ ಮತ್ತೆ ವಕ್ಫ್‌ನ ಅಡಿಗೆ ಬರುವವರೆಗೂ ನಿವೇಲ್ಲಾ ಸುಮ್ಮನೆ ಕೂರಬಾರದು. ನಿಮ್ಮ ಜೊತೆಗೆ ನಾವಿದ್ದೇವೆ “. ಎಂದು ಹೇಳಿರುವುದು ಪತ್ತೆಯಾಗಿದೆ. ಇದನ್ನೇ ಹಲವು ವರದಿಗಳಲ್ಲಿ ಕೂಡ ಉಲ್ಲೇಖಿಸಲಾಗಿದೆ.

ಇನ್ನು ಯುನೈಟೆಡ್ ನ್ಯೂಸ್ ಆಫ್ ಇಂಡಿಯಾ 22 ಸಪ್ಟೆಂಬರ್ 2022 ರಂದು ಪ್ರಕಟಿಸಿದ ವರದಿಯಲ್ಲೂ ಕೂಡ ವಕ್ಫ್ ಆಸ್ತಿ ದುರ್ಬಳಕೆ ಕುರಿತು ಬೊಮ್ಮಾಯಿ ಸರ್ಕಾರ ತನಿಖೆ ನಡೆಸಲಿದೆ ಎಂಬುದನ್ನು ಉಲ್ಲೇಖಿಸಿ ಸುದ್ದಿಯನ್ನು ಪ್ರಕಟಿಸಿರುವುದು ಕಂಡುಬಂದಿದೆ. ಇನ್ನು ಆಪ್ ಕಿ ಆವಾಜ್ ಡಿಜಿಟಲ್ ಸುದ್ದಿ ಸಂಸ್ಥೆ ಕೂಡ 22 ನವೆಂಬರ್ 2022 ರಂದು ಬಸವರಾಜ್ ಬೊಮ್ಮಾಯಿ ಅವರು ಮಾತನಾಡಿರುವ ಪೂರ್ಣ ಆವೃತ್ತಿಯ ವಿಡಿಯೋವನ್ನು ಪ್ರಕಟಿಸಿರುವುದು ಕಂಡುಬಂದಿದೆ.ಹೀಗೆ ಹಲವು ಸುದ್ದಿ ಸಂಸ್ಥೆಗಳು ಬಸವರಾಜ್ ಬೊಮ್ಮಾಯಿ ಅವರು ಮಾತನಾಡಿರುವ ವಿಡಿಯೋವನ್ನು 2022 ರಲ್ಲಿ ಪ್ರಕಟಿಸಿರುವುದು ಕಂಡುಬಂದಿದೆ. ಹಾಗಾಗಿ ಬಸವರಾಜು ಬೊಮ್ಮಾಯಿ ಅವರು ಆಸ್ತಿಯ ಪರವಾಗಿ ಮಾತನಾಡಿರುವುದು ನಿಜ ಎಂಬುದು ಸ್ಪಷ್ಟವಾಗಿದೆ

ಒಟ್ಟಾರೆಯಾಗಿ ಹೇಳುವುದಾದರೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಬಸವರಾಜ ಬೊಮ್ಮಾಯಿ ಅವರು ಮಾತನಾಡಿದ್ದಾರೆ ಎಂಬ ವಿಡಿಯೋ ನಿಜವಾಗಿದೆ. ಸಿಎಂ ಆಗಿದ್ದಾಗ ಬೊಮ್ಮಾಯಿ ವಕ್ಫ್ ಬೋರ್ಡ್ ಪರವಾಗಿ ಮಾತನಾಡಿರುವುದು ಸ್ಪಷ್ಟವಾಗಿ ವಿಡಿಯೋದಲ್ಲಿ ಕಂಡುಬಂದಿದೆ. ಹಾಗಾಗಿ ವೈರಲ್‌ ವಿಡಿಯೋ ನಿಜವಾಗಿದೆ .


ಇದನ್ನೂ ಓದಿ : Fact Check | ಮಹಾರಾಷ್ಟ್ರದಲ್ಲಿ ವ್ಯಕ್ತಿಯೊಬ್ಬ ಪೊಲೀಸರಿಗೆ ಬೆದರಿಕೆ ಹಾಕಿರುವ ಹಳೆಯ ವಿಡಿಯೋವನ್ನು ಕರ್ನಾಟಕದ್ದು ಎಂದು ಹಂಚಿಕೆ


ನಿಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್‌ಚೆಕ್ ವಾಟ್ಸಾಪ್ ನಂಬರ್‌ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇ

Leave a Reply

Your email address will not be published. Required fields are marked *