Fact Check : ಮಹಮ್ಮದ್ ಯೂನಸ್ ಬಾಂಗ್ಲಾದೇಶದ ಹಂಗಾಮಿ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬುದು ಸುಳ್ಳು
ಬಾಂಗ್ಲಾದೇಶದ ಮುಖ್ಯ ಸಲಹೆಗಾರರಾದ ಮಹಮ್ಮದ್ ಯೂನಸ್, ರಾಷ್ಟ್ರದ ಹಂಗಾಮಿ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆಯನ್ನು ಘೋಷಿಸಿದ್ದಾರೆ ಎಂಬ ವೀಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ವೀಡಿಯೊ ಕ್ಲಿಪ್ನಲ್ಲಿ ಯೂನಸ್, “ನಾನು, ಬಾಂಗ್ಲಾದೇಶದ ಮುಖ್ಯ ಸಲಹೆಗಾರ ಮಹಮ್ಮದ್ ಯೂನಸ್, ನಾನು ಮಧ್ಯಂತರ ಸರ್ಕಾರಕ್ಕೆ ರಾಜೀನಾಮೆ ನೀಡಿದ್ದೇನೆ” ಎಂಬ ವೀಡಿಯೊವನ್ನು ಹಂಚಿಕೊಳ್ಳಲಾಗುತ್ತಿದೆ. ಫ್ಯಾಕ್ಟ್ ಚೆಕ್ : ವೈರಲ್ ವೀಡಿಯೊ ಕ್ಲಿಪ್ನ ‘ಮಹಮ್ಮದ್ ಯೂನಸ್ ರಾಜೀನಾಮೆ’ ಎಂಬ ಹೆಸರನ್ನು Google ಕೀವರ್ಡ್ ಬಳಸಿಕೊಂಡು ಹುಡುಕಿದಾಗ, ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ದಾಳಿಗಳು ಮತ್ತು ಹಿಂಸಾಚಾರಗಳು ನಿಲ್ಲದಿದ್ದರೆ…