Fact Check I ಫೇಲಸ್ತೀನ್ ಅಧ್ಯಕ್ಷ ಪ್ರಧಾನಿ ನರೇಂದ್ರ ಮೋದಿಯವರನ್ನು “ಯಹೂದಿಯರ ಗುಲಾಮ” ಎಂದು ಕರೆದಿಲ್ಲ

ಫೇಲಸ್ತೀನ್ ಅಧ್ಯಕ್ಷ ಮಹಮೂದ್ ಅಬ್ಬಾಸ್‌ರವರು ಪ್ರಧಾನಿ ನರೇಂದ್ರ ಮೋದಿಯವರನ್ನು “ಯಹೂದಿಯರ ಗುಲಾಮ” ಎಂದು ಬೈದಿದ್ದಾರೆ ಎಂಬುದಾಗಿ ಸಾಮಾಜಿಕ ಜಾಲತಾಣದಲ್ಲಿ ಪಾಕಿಸ್ತಾನಿ ಮೂಲದ ಬಳಕೆದಾರರು ಹಂಚಿಕೊಳ್ಳುತ್ತಿದ್ದಾರೆ. ಮೋದಿಯವರು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗಿನ ಸಂಭಾಷಣೆಯ ಕುರಿತು ಟ್ವೀಟ್ ಪೋಸ್ಟ್ ಮಾಡಿದ ಬಳಿಕ,  ಮೋದಿಯವರ ಬಗ್ಗೆ ಫೇಲಸ್ತೀನ್ ಅಧ್ಯಕ್ಷ ಮಹಮೂದ್ ಅಬ್ಬಾಸ್‌ರವರು ಅವಹೇಳನಕಾರಿ ಪದಗಳನ್ನು ಬಳಸಿದ್ದಾರೆ ಆರೋಪಿಸಲಾಗುತ್ತಿದೆ.

ಫ್ಯಾಕ್ಟ್‌ಚೆಕ್

ಈ ಹೇಳಿಕೆ ಸಂಪೂರ್ಣ ಸುಳ್ಳಿನಿಂದ ಕೂಡಿದೆ. ಯಾಕೆಂದರೆ, ಪ್ಯಾಲೆಸ್ತೀನ್ ಅಧ್ಯಕ್ಷ ಮಹಮೂದ್ ಅಬ್ಬಾಸ್ ಅಂತಹ ಯಾವುದೇ ಹೇಳಿಕೆಗಳನ್ನು ನೀಡಿಲ್ಲ. ಒಂದು ವೇಳೇ, ಅವರು ಆ ರೀತಿಯ ಹೇಳಿಕೆಗಳನ್ನು ನೀಡಿದ್ದೇ ಆದಲ್ಲಿ ಅದು ಮುಖ್ಯವಾಹಿನಿ ಮಾದ್ಯಮಗಳಲ್ಲಿ ಪ್ರಕಟವಾಗುತ್ತಿತ್ತು.

ಇತ್ತೀಚೆಗಷ್ಟೇ ಪ್ರಧಾನಿ ಮೋದಿಯವರು ಪ್ಯಾಲೆಸ್ತೀನ್ ಅಧ್ಯಕ್ಷ ಮಹಮೂದ್ ಅಬ್ಬಾಸ್ ಅವರೊಂದಿಗೆ ಅಮೆರಿಕದಲ್ಲಿ ಮಾತುಕತೆ ನಡೆಸಿ, ಪ್ಯಾಲೆಸ್ತೀನ್ ಜನತೆಗೆ ಬೆಂಬಲ ಸೂಚಿಸಿದ್ದರು ಮತ್ತು ಪ್ರದೇಶದಲ್ಲಿ ಶಾಂತಿ ಸ್ಥಾಪನೆಗೆ ಕರೆ ನೀಡಿದ್ದನ್ನು ದಿ ಇಂಟೆಂಟ್‌ ಡಾಟಾ ಸತ್ಯಶೋಧನಾ ಸಂಸ್ಥೆಯು ಬಹಿರಂಗ ಪಡಿಸಿದೆ.

“ಪಶ್ಚಿಮ ಏಷ್ಯಾದಲ್ಲಿನ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಪ್ರಧಾನಿ @netanyahu ಅವರೊಂದಿಗೆ ಮಾತನಾಡಿದೆ. ನಮ್ಮ ಜಗತ್ತಿನಲ್ಲಿ ಭಯೋತ್ಪಾದನೆಗೆ ಸ್ಥಾನವಿಲ್ಲ. ಪ್ರಾದೇಶಿಕ ಉದ್ವಿಗ್ನತೆಯನ್ನು ತಗ್ಗಿಸುವುದು ಮತ್ತು ಎಲ್ಲಾ ಒತ್ತೆಯಾಳುಗಳ ಸುರಕ್ಷಿತ ಬಿಡುಗಡೆಯನ್ನು ಖಚಿತಪಡಿಸಿಕೊಳ್ಳುವುದು ಮುಖ್ಯವಾಗಿದೆ. ಶಾಂತಿ ಮತ್ತು ಸ್ಥಿರತೆಯ ಆರಂಭಿಕ ಮರುಸ್ಥಾಪನೆಗಾಗಿ ನಡೆಯುವ ಪ್ರಯತ್ನಗಳಿಗೆ ಭಾರತ ಬೆಂಬಲ ಸೂಚಿಸಲು ಬದ್ಧವಾಗಿದ” ಎಂದು ಪ್ರಧಾನಿ ಮೋದಿಯವರು ಸೆಪ್ಟೆಂಬರ್ ೩೦ರಂದು ಟ್ಟೀಟ್‌ ಮಾಡಿದ್ದರು.

ಒಟ್ಟಾರೆಯಾಗಿ ಹೇಳುವುದಾದರೆ ಫೇಲಸ್ತೀನ್ ಅಧ್ಯಕ್ಷ ಮಹಮೂದ್ ಅಬ್ಬಾಸ್‌ರವರು ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಯಾವುದೇ ಅವಹೇಳನಕಾರಿ ಹೇಳಿಕೆಯನ್ನು ನೀಡಿಲ್ಲ. ಈ ರೀತಿ ಸುಳ್ಳುಗಳನ್ನು ಹರಡುವ ಮೂಲಕ ಗೊಂದಲ ಸೃಷ್ಟಿಸಲು ಯತ್ನಿಸಲಾಗುತ್ತಿದೆ ಎಂಬುದು ಇದರಿಂದ ಸ್ಪಷ್ಟವಾಗಿದೆ.


ಇದನ್ನು ಓದಿದ್ದೀರಾ? Fact Check: ಜವಾಹರಲಾಲ್ ನೆಹರು ಅವರು ಪತ್ನಿ ಕಮಲಾ ಅವರನ್ನು ನಿರ್ಲಕ್ಷಿಸಿದ್ದರು ಎಂಬ ಸುದ್ದಿ ಸುಳ್ಳು!

 


ನಿಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್‌ಚೆಕ್ ವಾಟ್ಸಾಪ್ ನಂಬರ್‌ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ

Leave a Reply

Your email address will not be published. Required fields are marked *