Fact Check | ರೈಲಿನಲ್ಲಿ ಅಂಬೇಡ್ಕರ್‌ ಚಿತ್ರವನ್ನು ಅಳವಡಿಸಲಾಗಿದೆ ಎಂಬುದು ಎಡಿಟೆಟ್‌ ಫೋಟೋ..!

ಸಾಮಾಜಿಕ ಜಾಲತಾಣದಲ್ಲಿ ಫೋಟೋವೊಂದು ವ್ಯಾಪಕವಾಗಿ ವೈರಲ್ ಆಗುತ್ತಿದೆ. ಇದರಲ್ಲಿ ಮೆಟ್ರೋ ಟ್ರೈನ್‌ವೊಂದರಲ್ಲಿ ಡಾ. ಬಿಆರ್ ಅಂಬೇಡ್ಕರ್ ಅವರ ಪೋಸ್ಟರ್ ಅಳವಡಿಸಿದ್ದು, ಇದಕ್ಕೆ ಸಂಬಂಧಪಟ್ಟಂತೆ ಸಾಕಷ್ಟು ಮಂದಿ ಈ ಫೋಟೋವನ್ನು ಹಂಚಿಕೊಂಡಿದ್ದು, ಇದರ ಬಗ್ಗೆ ವಿವಿಧ ರೀತಿಯಲ್ಲಿ ತಮ್ಮದೇ ಆದ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ ಈ ಫೋಟೋ ಸಾಕಷ್ಟು ಮಂದಿಯಲ್ಲಿ ಚರ್ಚೆಯನ್ನು ಹುಟ್ಟುಹಾಕಿದ್ರು, ಹಲವರು ವಿವಿಧ ಬರಹಗಳೊಂದಿಗೆ ಶೇರ್‌ ಮಾಡುತ್ತಿದ್ದಾರೆ.

ಹೀಗೆ ವೈರಲ್ ಫೋಟೋವನ್ನು ಹಂಚಿಕೊಂಡಿರುವ ಹಲವರು ಇದು ಅಮೆರಿಕದ ಮೆಟ್ರೋ ಟ್ರೈನ್ ಒಂದರಲ್ಲಿ ಅಂಬೇಡ್ಕರ್ ಅವರ ಚಿತ್ರವನ್ನು ಅಳವಡಿಸಿರುವ ದೃಶ್ಯವಾಗಿದೆ, ಇದು ಅಮೆರಿಕದಲ್ಲಿ ಸಾಧ್ಯವಾಗಿದೆ ಆದರೆ ಭಾರತದಲ್ಲಿ ಮಾತ್ರ ನಾವು ಇಂತಹ ಸನ್ನಿವೇಶಗಳನ್ನು ನೋಡಲು ಸಾಧ್ಯವಾಗುವುದಿಲ್ಲ ಎಂದು ಬರೆದುಕೊಂಡಿದ್ದಾರೆ. ಹೀಗಾಗಿ ಇದನ್ನೇ ನಿಜವೆಂದು ನಂಬಿ ಹಲವರು ತಮ್ಮ ವೈಯಕ್ತಿಕ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಹೀಗೆ ಶೇರ್ ಮಾಡಲಾಗುತ್ತಿರುವ ಫೋಟೋವಿನ ಅಸಲಿಯತ್ತು ಏನು ಎಂಬುದನ್ನು ಈ ಫ್ಯಾಕ್ಟ್‌ಚೆಕ್‌ನಲ್ಲಿ ಪರಿಶೀಲನೆ ನಡೆಸೋಣ.

ಫ್ಯಾಕ್ಟ್‌ಚೆಕ್

ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ಫೋಟೋ ಕುರಿತು ಪರಿಶೀಲನೆ ನಡೆಸಲು ನಮ್ಮ ಕನ್ನಡ ಫ್ಯಾಕ್ಟ್‌ಚೆಕ್‌ ತಂಡ ಮುಂದಾಯಿತು. ಇದಕ್ಕಾಗಿ ವೈರಲ್ ಫೋಟೋಗೆ ಸಂಬಂಧಿಸಿದಂತೆ ಯಾವುದಾದರೂ ಮಾಧ್ಯಮಗಳು ಅಥವಾ ಸುದ್ದಿ ಸಂಸ್ಥೆಗಳು ವರದಿ ಮಾಡಿವೆಯೇ ಎಂದು ಅಧಿಕೃತ ಸುದ್ದಿಗಳಿಗಾಗಿ ಹುಡುಕಾಟವನ್ನು ನಡೆಸಿದೆವು. ಆದರೆ ಈ ಬಗ್ಗೆ ಯಾವುದೇ ವರದಿಗಳು ಕಂಡುಬಂದಿಲ್ಲ. ಒಂದು ವೇಳೆ ಘಟನೆ ನಿಜವಾಗಿದ್ದರೆ ಆ ಕುರಿತು ರಾಷ್ಟ್ರೀಯ, ಅಂತರಾಷ್ಟ್ರೀಯ ಮಾಧ್ಯಮಗಳು ಕೂಡ ವರದಿಯನ್ನು ಮಾಡಬೇಕಿತ್ತು. ಹೀಗಾಗಿ ವೈರಲ್‌ ಚಿತ್ರ ಹಲವು ಅನುಮಾನಗಳಿಗೆ ಕಾರಣವಾಯಿತು.

ಹೀಗಾಗಿ ಈ ಬಗ್ಗೆ ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ಪಡೆಯಲು ಕೆಲವೊಂದು ಕೀವರ್ಡ್‌ಗಳನ್ನು ಬಳಸಿ ಅಂತರ್ಜಾಲದಲ್ಲಿ ಹುಡುಕಾಟವನ್ನು ನಡೆಸಿದೆವು. ಈ ವೇಳೆ 20 ಫೆಬ್ರವರಿ 2017ರಂದು ಎಬಿಪಿ ಪ್ರಕಟಿಸಿದ ವರದಿಯೊಂದು ಕಂಡು ಬಂದಿದೆ. ಈ ವರದಿಯಲ್ಲಿನ ರೈಲಿನ ಚಿತ್ರಕ್ಕೂ ವೈರಲ್ ಆಗುತ್ತಿರುವ ರೈಲಿನ ಚಿತ್ರಕ್ಕೂ ಸಾಕಷ್ಟು ಸಾಮ್ಯತೆ ಇದ್ದು, ಎರಡೂ ರೈಲಿನಲ್ಲಿ 1414 ಎಂಬ ಒಂದೇ ಸಂಖ್ಯೆಯನ್ನು ಬರೆಯಲಾಗಿದೆ. ಇನ್ನೂ ವೈರಲ್‌ ಚಿತ್ರದಲ್ಲಿನ ರೈಲು ಮತ್ತು ವರದಿಯಲ್ಲಿನ ರೈಲು ಒಂದೇ ಆಯಾಮದಲ್ಲಿ ತೆಗೆಯಲಾಗಿರುವುದು ಕೂಡ ಸ್ಪಷ್ಟವಾಗಿ ಕಂಡು ಬಂದಿದೆ. ಹಾಗಾಗಿ ಎಬಿಪಿ ವರದಿಯಲಿನ ರೈಲಿನ ಚಿತ್ರ ಮೂಲ ಚಿತ್ರವಾಗಿದ್ದು, ಇದೇ ಫೋಟೋವನ್ನು ಬಳಸಿಕೊಂಡು ಎಡಿಟ್ ಮಾಡಿರುವುದು ಸ್ಪಷ್ಟವಾಗಿದೆ.

                                                                             ABP ವರದಿಯಲ್ಲಿ ಕಂಡು ಬಂದ ಮೂಲ ವರದಿ

ಒಟ್ಟಾರೆಯಾಗಿ ಈ ಎಲ್ಲಾ ಅಂಶಗಳನ್ನು ಗಮನಿಸಿ ಹೇಳುವುದಾದರೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾದ ರೀತಿಯಲ್ಲಿ ರೈಲಿನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪೋಸ್ಟರ್ ಅನ್ನು ಹಾಕಲಾಗಿದೆ ಎಂಬುದು ಸುಳ್ಳಾಗಿದೆ. ವೈರಲ್‌ ಫೋಟೋವಿನ ಮೂಲ ಫೋಟೋ 20 ಫೆಬ್ರವರಿ 2017ರಂದು ಎಬಿಪಿ ಪ್ರಕಟಿಸಿದ ವರದಿಯೊಂದಕ್ಕೆ ಸಂಬಂಧಿಸಿದ್ದಾಗಿದೆ. ಹಾಗಾಗಿ ಈ ಸುದ್ದಿಯನ್ನು ಯಾವುದೇ ಕಾರಣಕ್ಕೂ ಹಂಚಿಕೊಳ್ಳಬೇಡಿ. ಸುಳ್ಳು ಸುದ್ದಿ ಹಂಚಿಕೊಳ್ಳುವುದು ಕಾನೂನಿನ ಪ್ರಕಾರ ಅಪರಾಧವಾಗಿದೆ.


ಇದನ್ನೂ ಓದಿ : Fact Check: ನೆಹರೂ ಅವರು ಸುಭಾಷ್‌ ಚಂದ್ರ ಬೋಸ್‌ ವಿರುದ್ಧ ಆಟ್ಲೀ ಅವರಿಗೆ ಪತ್ರ ಬರೆದಿದ್ದರು ಎಂಬುದು ಸುಳ್ಳು


ನಿಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್‌ಚೆಕ್ ವಾಟ್ಸಾಪ್ ನಂಬರ್‌ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ

Leave a Reply

Your email address will not be published. Required fields are marked *