ವ್ಯಕ್ತಿಯೊಬ್ಬ ಪೊಲೀಸರಿಗೆ ಬೆದರಿಕೆ ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೋವನ್ನು ಶೇರ್ ಮಾಡಲಾಗುತ್ತಿದ್ದು, ಇದು ಇತ್ತೀಚೆಗೆ ಕರ್ನಾಟಕದಲ್ಲಿ ನಡೆದ ಘಟನೆ ಎಂದು ಹೇಳಲಾಗುತ್ತಿದೆ. ಇನ್ನೂ ಕೆಲವರು ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವಿರುವುದರಿಂದ ಮುಸಲ್ಮಾನರು ಪೊಲೀಸರಿಗೆ ಹೆದರುತ್ತಿಲ್ಲ. ಅವರು ಏನೆ ತಪ್ಪು ಮಾಡಿದರು ಪೊಲೀಸರು ಹೆದರುತ್ತಿದ್ದಾರೆ ಎಂದು ವಿಡಿಯೋವನ್ನು ಶೇರ್ ಮಾಡಲಾಗುತ್ತಿದೆ.
ವೈರಲ್ ಪೋಸ್ಟ್ ನೋಡಿದ ಹಲವು ಮಂದಿ ಇದು ಕರ್ನಾಟಕದಲ್ಲಿ ನಡೆದ ಘಟನೆ ಎಂದು ತಮ್ಮ ವೈಯಕ್ತಿಕ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಜೊತೆಗೆ ಹಲವರು ಮುಸ್ಲಿಂ ಸಮುದಾಯದ ವಿರುದ್ಧ ಆಕ್ರೋಶವನ್ನು ವ್ಯಕ್ತ ಪಡಿಸಿ ಪೋಸ್ಟ್ ಮಾಡುತ್ತಿದ್ದಾರೆ. ಹೀಗಾಗಿ ವೈರಲ್ ವಿಡಿಯೋ ಕೋಮುದ್ವೇಷವನ್ನು ಕೂಡ ಹರಡುವಲ್ಲಿ ಯಶಸ್ವಿಯಾಗಿದೆ. ಹೀಗೆ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ಪೋಸ್ಟ್‌ನ ಅಸಲಿಯತ್ತು ಏನು ಎಂಬುದನ್ನು ಈ ಫ್ಯಾಕ್ಟ್‌ಚೆಕ್‌ನಲ್ಲಿ ಪರಿಶೀಲನೆ ನಡೆಸೋಣ
ಫ್ಯಾಕ್ಟ್‌ಚೆಕ್
ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ಪೋಸ್ಟ್ ಕುರಿತು ಪರಿಶೀಲನೆ ನಡೆಸಲು ನಮ್ಮ ಕನ್ನಡ ಫ್ಯಾಕ್ಟ್‌ಚೆಕ್ ತಂಡ ಮುಂದಾಯಿತು. ಇದಕ್ಕಾಗಿ ನಾವು ವೈರಲ್ ಪೋಸ್ಟ್‌ಗೆ ಸಂಬಂಧಿಸಿದಂತೆ ಕೆಲವೊಂದು ಕೀ ವರ್ಡ್‌ಗಳನ್ನು ಬಳಸಿ ಅಂತರ್ಜಾಲದಲ್ಲಿ ಹುಡುಕಾಟವನ್ನು ನಡೆಸಿದೆವು. ಈ ವೇಳೆ ನಮಗೆ ಸೋಪಾನ್ ಜಾಧವ್ ಹೆಸರಿನ ಫೇಸ್‌ಬುಕ್ ಖಾತೆಯಲ್ಲಿ ಸೆಪ್ಟೆಂಬರ್ 24, 2018 ರಂದು ಅಪ್‌ಲೋಡ್ ಮಾಡಲಾದ ವೈರಲ್ ವೀಡಿಯೊವೊಂದು ಲಭ್ಯವಾಗಿದ್ದು, ಅದರಲ್ಲಿ ಮಾಹಿತಿಯ ಪ್ರಕಾರ ಈ ಘಟನೆ ಮಹಾರಾಷ್ಟ್ರದ ಚೋಪ್ರಾ ಬಸ್ ನಿಲ್ದಾಣದಲ್ಲಿ ನಡೆದಿದೆ ಎನ್ನಲಾಗಿದೆ.
ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ನಾವು ಇನ್ನಷ್ಟು ಕೀ ವರ್ಡ್‌ಗಳನ್ನು ಬಳಸಿ ಹುಡುಕಾಟವನ್ನು ನಡೆಸಿದೆವು. ಈ ವೇಳೆ ನಮಗೆ ಸೆಪ್ಟೆಂಬರ್ 20, 2018 ರಂದು ಜುಬಿಲಿಹಿಲ್ಸ್ ಫಿರೋಜ್ ಖಾನ್ ಹೆಸರಿನ ಪುಟದಲ್ಲಿ ಈ ವೀಡಿಯೊವನ್ನು ಅಪ್‌ಲೋಡ್ ಮಾಡಿರುವುದು ಕಂಡು ಬಂದಿದ್ದು, ಇದೇ ರೀತಿಯಲ್ಲಿ ಹಲವರು ವೈರಲ್ ವಿಡಿಯೋವನ್ನು ಹಂಚಿಕೊಂಡಿದ್ದು, ಅವುಗಳಲ್ಲಿ ಕೂಡ ಇದೇ ಅಂಶವನ್ನು ಉಲ್ಲೇಖಿಸಲಾಗಿದೆ. ಇನ್ನು ಈ ಬಗ್ಗೆ ವಿಶ್ವಾಸ್ ನ್ಯೂಸ್ ಮಹಾರಾಷ್ಟ್ರದ ಚೋಪ್ರಾ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ಮಾಹಿತಿಯನ್ನು ಪಡೆದಿದ್ದು, ಅದರ ಪ್ರಕಾರ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ಅವತಾರ್ ಸಿಂಗ್ ಚೌಹಾಣ್, ‘ಈ ಘಟನೆ 2018 ರಲ್ಲಿ ಸಂಭವಿಸಿದ್ದು, ಕೆಲವರು ಚೋಪ್ರಾ ಬಸ್ ನಿಲ್ದಾಣದ ಬಳಿ ವಾಹನವನ್ನು ನಿಲ್ಲಿಸಿದಾಗ ಸಂಚಾರಕ್ಕೆ ತೊಂದರೆಯಾಗಿತ್ತು. ಅದನ್ನು ತೆಗೆಯುವ ವಿಚಾರದಲ್ಲಿ ವಾಗ್ವಾದ ನಡೆದಿದ್ದು, ಅಲ್ಲಿನ ಜನರು ಪೊಲೀಸರಿಗೆ ಬೆದರಿಕೆ ಹಾಕಿದ್ದಾರೆ ಎಂದು ಮಾಹಿತಿಯನ್ನು ನೀಡಲಾಗಿದೆ.
ಒಟ್ಟಾರೆಯಾಗಿ ಹೇಳುವುದಾದರೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಂತೆ ಕರ್ನಾಟಕದಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬ ಪೊಲೀಸರಿಗೆ ಬೆದರಿಕೆ ಹಾಕಿದ್ದಾನೆ ಎಂಬುದು ಸುಳ್ಳು. ವೈರಲ್ ವಿಡಿಯೋ ಮಹಾರಾಷ್ಟ್ರದ್ದಾಗಿದ್ದು. ಬಸ್ ನಿಲ್ದಾಣದಲ್ಲಿ ವಾಹನ ನಿಲುಗಡೆಯ ವಿಚಾರದಲ್ಲಿ ಜನ ಸಾಮಾನ್ಯರಿಗೂ ಪೊಲೀಸರಿಗೂ ನಡೆದ ವಾಗ್ವಾದಕ್ಕೆ ಸಂಬಂಧ ಪಟ್ಟಿದೆ. ವೈರಲ್ ವಿಡಿಯೋದಲ್ಲಿ ಹೇಳಿದಂತೆ ಇದಕ್ಕೆ ಯಾವುದೇ ಕೋಮು ಆಯಾಮವಿಲ್ಲ. ಹಾಗಾಗಿ ಈ ವೈರಲ್ ಪೋಸ್ಟ್ ಅನ್ನು ಯಾವುದೇ ಕಾರಣಕ್ಕೂ ಹಂಚಿಕೊಳ್ಳ ಬೇಡಿ. ಸುಳ್ಳು ಸುದ್ದಿ ಹಂಚಿಕೊಳ್ಳುವುದು ಕಾನೂನಿನ ಪ್ರಕಾರ ಅಪರಾಧವಾಗಿದೆ.
ಇದನ್ನೂ ಓದಿ : Fact Check : ಇಂದಿರಾ ಗಾಂಧಿಯವರು ಮೀನು ತಿನ್ನುತ್ತಿದ್ದರು ಎಂದು ಹುರಿದ ಜೋಳ ತಿನ್ನುವ ಫೋಟೋ ಹಂಚಿಕೆ
ನಿಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್‌ಚೆಕ್ ವಾಟ್ಸಾಪ್ ನಂಬರ್‌ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇ