ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ಹಲವು ರೀತಿಯ ಸುಳ್ಳು ಸುದ್ದಿಗಳು ವೈರಲ್ ಆಗುತ್ತಿದೆ. ಇದೀಗ ಹೌಸಿಂಗ್ ಸೊಸೈಟಿಯಲ್ಲಿ ಕೇಸರಿ ಧ್ವಜಗಳನ್ನು ಹಿಡಿದುಕೊಂಡು ಶ್ರೀರಾಮ ಮತ್ತು ಹಿಂದುಗಳನ್ನು ಬೆಂಬಲಿಸಿ, ಘೋಷಣೆಗಳನ್ನು ಕೂಗುಲಾಗುತ್ತಿದೆ. ಇನ್ನು ಈ ಸೊಸೈಟಿಯ ಪಕ್ಕದಲ್ಲಿರುವ ಹಲವು ಅಪಾರ್ಟ್ಮೆಂಟ್ನ ನಿವಾಸಿಗಳು ಕೂಡ ಈ ಪುರುಷರ ಗುಂಪಿಗೆ ಬೆಂಬಲವನ್ನು ನೀಡಿದ್ದಾರೆ ಎಂದು ಪೋಸ್ಟ್ವೊಂದನ್ನು ಹಂಚಿಕೊಳ್ಳಲಾಗುತ್ತಿದೆ.
ವೈರಲ್ ಪೋಸ್ಟ್ನಲ್ಲಿ ಪುರುಷರ ಗುಂಪೊಂದು ಕೇಸರಿ ಧ್ವಜಗಳನ್ನು ಹಿಡಿದುಕೊಂಡು ಘೋಷಣೆಗಳನ್ನು ಕೂಗುತ್ತಿರುವುದನ್ನು ಕಾಣಬಹುದಾಗಿದೆ. ಇದನ್ನು ನೋಡಿದ ಹಲವು ಮಂದಿ ಮಹಾರಾಷ್ಟ್ರದಲ್ಲಿ ಚುನಾವಣೆ ಪ್ರಚಾರವನ್ನು ಕೋಮು ಆಯಾಮದಿಂದ ನಡೆಸಲಾಗುತ್ತಿದೆ ಎಂದು ಬರೆದುಕೊಂಡು ಹಲವರು ಪೋಸ್ಟ್ ಅನ್ನು ತಮ್ಮ ವೈಯಕ್ತಿಕ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಹೀಗೆ ವ್ಯಾಪಕವಾಗಿ ಶೇರ್ ಮಾಡಲಾಗುತ್ತಿರುವ ಪೋಸ್ಟ್ನ ನಿಜಾಂಶ ಏನೂ ಎಂಬುದನ್ನು ಈ ಫ್ಯಾಕ್ಟ್ಚೆಕ್ನಲ್ಲಿ ಪರಿಶೀಲನೆ ನಡೆಸೋಣ
ಫ್ಯಾಕ್ಟ್ಚೆಕ್
ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ಪೋಸ್ಟ್ ಕುರಿತು ಪರಿಶೀಲನೆ ನಡೆಸಲು ನಮ್ಮ ಕನ್ನಡ ಫ್ಯಾಕ್ಟ್ಚೆಕ್ ತಂಡ ಮುಂದಾಯಿತು. ಇದಕ್ಕಾಗಿ ನಾವು ವೈರಲ್ ವಿಡಿಯೋವಿನ ವಿವಿಧ ಕೀ ಫ್ರೇಮ್ಗಳನ್ನು ಬಳಸಿಕೊಂಡು ಗೂಗಲ್ ರಿವರ್ಸ್ ಇಮೇಜ್ನಲ್ಲಿ ಹುಡುಕಾಟವನ್ನು ನಡೆಸಿದೆವು. ಈ ವೇಳೆ ನಮಗೆ 12 ಫೆಬ್ರುವರಿ 2022ರಿಂದಲೂ ಇದೇ ರೀತಿಯ ಹಲವು ಪೋಸ್ಟ್ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಪೋಸ್ಟ್ಗಳನ್ನು ಸಂಪೂರ್ಣವಾಗಿ ಪರಿಶೀಲನೆಯನ್ನು ನಡೆಸಿದಾಗ, . ಉತ್ತರ ಪ್ರದೇಶದ ಕಾನ್ಪುರದ ವಿವಿಧ ವಸತಿ ಸಮಾಜಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತರು ಆಯೋಜಿಸಿದ “ಪ್ರಭಾತ್ ಫೇರಿ” ಅಥವಾ ಬೆಳಗಿನ ಧಾರ್ಮಿಕ ಮೆರವಣಿಗೆಯ ಕಾರ್ಯಕ್ರಮ ಇದಾಗಿದೆ ಎಂದು ಬಳಕೆದಾರರೊಬ್ಬರು ಹಂಚಿಕೊಂಡಿರುವುದು ಕಂಡು ಬಂದಿದೆ.
ಪೋಸ್ಟ್ ವಿವರಣೆಯಿಂದ ಸುಳಿವನ್ನು ತೆಗೆದುಕೊಂಡು, ನಾವು ಗೂಗಲ್ ನಕ್ಷೆಗಳಲ್ಲಿ ಈ ವಸತಿ ಸಂಕೀರ್ಣಗಳ ಹೆಸರುಗಳನ್ನು ಹುಡುಕಿದ್ದೇವೆ ಮತ್ತು ಕಾನ್ಪುರದ ಇಂದ್ರ ನಗರದಲ್ಲಿನ ದಿವಿನಿತಿ ಮನೆಗಳ ರಚನೆಯು ವೈರಲ್ ವೀಡಿಯೊದಲ್ಲಿನ ದೃಶ್ಯಗಳಿಗೆ ಹೊಂದಿಕೆಯಾಗಿರುವುದನ್ನು ಕಂಡುಕೊಂಡಿದ್ದೇವೆ. ವೈರಲ್ ವೀಡಿಯೊ ಮತ್ತು 2022 ರ ಸಾಮಾಜಿಕ ಮಾಧ್ಯಮ ಪೋಸ್ಟ್ಗಳಿಂದ ಬಾಲ್ಕನಿಗಳು ಮತ್ತು ಕಿಟಕಿಗಳ ಹೋಲಿಕೆಯಾಗಿರುವುದು ನಮಗೆ ಕಂಡು ಬಂದಿದೆ.
ಒಟ್ಟಾರೆಯಾಗಿ ಈ ಎಲ್ಲಾ ಅಂಶಗಳನ್ನು ಗಮನಿಸಿ ಹೇಳುವುದಾದರೆ ಹೌಸಿಂಗ್ ಸೊಸೈಟಿಯಲ್ಲಿ ಹಿಂದೂ ಪರ ಘೋಷಣೆಗಳನ್ನು ತೋರಿಸುವ ಕಾನ್ಪುರದ ಹಳೆಯ ಫೆಬ್ರವರಿ 2022 ವೀಡಿಯೊವನ್ನು 2024 ರ ಮಹಾರಾಷ್ಟ್ರ ಚುನಾವಣಾ ಪ್ರಚಾರದ ದೃಶ್ಯಗಳೆಂದು ಹಂಚಿಕೊಳ್ಳಲಾಗುತ್ತಿದೆ. ಹೀಗಾಗಿ ವೈರಲ್ ಪೋಸ್ಟ್ ಅನ್ನು ಯಾವುದೇ ಕಾರಣಕ್ಕೂ ಹಂಚಿಕೊಳ್ಳಬೇಡಿ. ಸುಳ್ಳು ಸುದ್ದಿಗಳನ್ನು ಹಂಚಿಕೊಳ್ಳುವುದು ಕಾನೂನಿ ಪ್ರಕಾರ ಅಪರಾಧವಾಗಿದೆ.
ಇದನ್ನೂ ಓದಿ : Fact Check: ಪಹಣಿಯಲ್ಲಿ ವಕ್ಫ್ ಹೆಸರು: ಮನನೊಂದು ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸುಳ್ಳು ಹಂಚಿಕೊಂಡ ತೇಜಸ್ವಿ ಸೂರ್ಯ
ನಿಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್ಚೆಕ್ ವಾಟ್ಸಾಪ್ ನಂಬರ್ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ.