Likith Rai

Fact Check | TRAI 3 ತಿಂಗಳ ಉಚಿತ ರೀಚಾರ್ಜ್ ನೀಡುತ್ತಿದೆ ಎಂಬುದು ಸುಳ್ಳು..!

ಭಾರತೀಯ ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ ( ಟ್ರಾಯ್ ) ಜನರಿಗೆ ಉಚಿತ ಮೊಬೈಲ್ ರೀಚಾರ್ಜ್ ಅನ್ನು ನೀಡುತ್ತಿದೆ ಎಂದು ಹೇಳಲು ಟೀಎ ಲಿಂಕ್ ಮತ್ತು ಸ್ಕ್ರೀನ್‌ಶಾಟ್‌ಗಳನ್ನು ಹೊಂದಿರುವ ಪೋಸ್ಟ್‌ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ.ಅದರಲ್ಲೂ ಪ್ರಮುಖವಾಗಿ ಜಿಯೋ ಏರ್‌ಟೆಲ್‌ ಸೇರಿದಂತೆ ವಿವಿಧ ಸಿಮ್ ಕಂಪನಿಗಳು ತಮ್ಮ ರಿಚಾರ್ಜ್ ದರವನ್ನು ಹೆಚ್ಚು ಮಾಡಿದ ನಂತರದಲ್ಲಿ ಈ ರೀತಿಯಾದಂತಹ ಸುದ್ದಿಯೊಂದು ವ್ಯಾಪಕವಾಗಿ ಹರಿದಾಡುತ್ತಿದೆ ಈ ಸುದ್ದಿಯನ್ನು ಸಾಮಾಜಿಕ ಜಾಲತಾಣದ ಬಳಕೆದಾರರು ಹೆಚ್ಚಾಗಿ ಹಂಚಿಕೊಳ್ಳುತ್ತಿದ್ದು, ಹಲವು ಮಂದಿ ತಮ್ಮದೇ…

Read More

Fact Check | ಅಂಗಡಿ ಮಾಲೀಕರು ಹೆಸರು ಪ್ರದರ್ಶಿಸಬೇಕು ಎಂಬ ಆದೇಶದ ವಿರುದ್ಧ ‘ದ ಗ್ರೇಟ್‌ ಖಲಿ’ ಪ್ರತಿಭಟಿಸಿದ್ದಾರೆ ಎಂಬುದು ಸುಳ್ಳು

ಖ್ಯಾತ ಕುಸ್ತಿಪಟು ದಲಿಪ್ ಸಿಂಗ್ ರಾಣಾ ಎಂದೂ ಕರೆಯಲ್ಪಡುವ ದಿ ಗ್ರೇಟ್ ಖಲಿ ಮುಸ್ಲಿಂ ಮಾರಾಟಗಾರರ ಗಾಡಿಯಿಂದ ಮಾವಿನ ಹಣ್ಣುಗಳನ್ನು ತಿನ್ನುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಅಂಗಡಿಗಳ ಮೇಲೆ ನಾಮಫಲಕಗಳನ್ನು ಕಡ್ಡಾಯಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರದ ವಿರುದ್ಧ ಖಲಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಹಲವಾರು ಮಂದಿ ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಸದ್ಯಕ್ಕೆ ಈ ವಿಚಾರಕ್ಕೆ ಸಂಬಂಧ ಪಟ್ಟಂತೆ ಹಲವು ಪೋಸ್ಟ್‌ಗಳು ವೈರಲ್‌ ಆಗುತ್ತಿದೆ.  ಉತ್ತರ ಪ್ರದೇಶದ ರಾಜಕೀಯದಲ್ಲಿ ಅಂಗಡಿಗಳ ಮೇಲೆ…

Read More

Fact Check | ಲೈಂಗಿಕ ಕಿರುಕುಳದ ಅಪರಾಧಿಯೊಂದಿಗೆ ಕಮಲಾ ಹ್ಯಾರಿಸ್‌ ಇರುವ ಫೋಟೋ ಎಡಿಟೆಡ್‌ ಆಗಿದೆ

ಅಮೆರಿಕದ ಅಧ್ಯಕ್ಷ ಜೋ ಬೈಡೆನ್‌ ಈ ಬಾರಿಯ ಅಧ್ಯಕ್ಷೀಯ ಸ್ಥಾನದ ಚುನಾವಣೆಯಿಂದ ಹಿಂದೆ ಸರಿಯುತ್ತಿದ್ದಂತೆ ಕಮಲಾ ಹ್ಯಾರಿಸ್‌ ಡೆಮಾಕ್ರೆಟಿಕ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿಯಾಗುವ ಸಾಧ್ಯತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರ ಮಧ್ಯೆ ಕಮಲಾ ಹ್ಯಾರಿಸ್‌ ಅವರಿಗೆ ಎಷ್ಟರ ಮಟ್ಟಿಗೆ ಬೆಂಬಲ ವ್ಯಕ್ತವಾಗುತ್ತಿದೆಯೋ ಅಷ್ಟರ ಮಟ್ಟಿಗೆ ಅವರಿಗೆ ವಿರೋಧ ಕೂಡ ವ್ಯಕ್ತವಾಗುತ್ತಿದೆ. ಇದರ ನಡುವೆ ಅವರ ವಿರುದ್ಧ ಹಲವು ರೀತಿಯ ಸುಳ್ಳು ಸುದ್ದಿಗಳನ್ನು ಕೂಡ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚಾಗಿ ಹಂಚಿಕೊಳ್ಳಲಾಗುತ್ತಿದೆ. ಈಗ ಅದೇ ರೀತಿಯಲ್ಲಿ ಲೈಂಗಿಕ ಕಿರುಕುಳ, ಮಾನವ…

Read More

Fact Check | ಕಮಲಾ ಹ್ಯಾರಿಸ್‌ ಪೋಷಕರು ಎಂದು ಬೇರೆಯವರ ಫೋಟೋ ಹಂಚಿಕೆ

“ಜೋ ಬೈಡೆನ್ ಸ್ಪರ್ಧೆಯಿಂದ ಹಿಂದೆ ಸರಿಯುವುದರೊಂದಿಗೆ, ಕಮಲಾ ಹ್ಯಾರಿಸ್ ಈಗ ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಅವರನ್ನು ಎದುರಿಸಲು ಡೆಮಾಕ್ರಟಿಕ್ ಅಧ್ಯಕ್ಷೀಯ ಅಭ್ಯರ್ಥಿಯಾಗಿ ಪರಿಗಣಿಸಲ್ಪಡುತ್ತಿದ್ದಾರೆ. ಇದರ ನಡುವೆ ಕಮಲಾ ಹ್ಯಾರಿಸ್‌ ಅವರ ಕುರಿತು ದಿನಕ್ಕೊಂದು ಸುದ್ದಿಗಳು, ಮಾಹಿತಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿವೆ. ಅದರಲ್ಲೂ ಇತ್ತೀಚೆಗೆ ಅಮೆರಿಕದಲ್ಲಿ ಕಮಲಾ ಹ್ಯಾರಿಸ್‌ ಅವರ ಮೂಲದ ಕುರಿತು ಕೆಲ ಸಾಮಾಜಿಕ ಜಾಲತಾಣದ ಬಳಕೆದಾರರು ಚರ್ಚೆಯನ್ನು ಆರಂಭಿಸಿದ್ದಾರೆ. 🇺🇸It’s simple science.🇺🇸 pic.twitter.com/zm7Lp57I1b — MAGAMARINE (@Nichole05507742) July…

Read More

Fact Check | ಸೇನೆಯಲ್ಲಿ ಸೇವೆ ಸಲ್ಲಿಸಿದ ಮೋಹನ್‌ ಸಿಂಗ್‌ ಎಂದು ಸಂಬಂಧವಿಲ್ಲದ ಫೋಟೋ ಹಂಚಿಕೆ

ಸಿಖ್ ವ್ಯಕ್ತಿಯ ಚಿತ್ರವನ್ನು ಒಳಗೊಂಡ ಫೋಟೊವೊಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದ್ದು, ಅವರು ಭಾರತದ ಸ್ವಾತಂತ್ರ್ಯ ಪೂರ್ವದಲ್ಲಿ INA ( ಇಂಡಿಯನ್‌ ನ್ಯಾಷನಲ್‌ ಆರ್ಮಿ)ಯಲ್ಲಿ ಸೇವೆ ಸಲ್ಲಿಸಿದ್ದರು ಎಂದು ಪೋಸ್ಟ್‌ವೊಂದನ್ನು ಹಂಚಿಕೊಳ್ಳಲಾಗುತ್ತಿದೆ. ಹೀಗೆ ಹಂಚಿಕೊಳ್ಳಲಾಗುತ್ತಿರುವ ಫೋಟೋದೊಂದಿಗೆ ಟಿಪ್ಪಣಿಯನ್ನು ನೋಡಿದ ಹಲವರು ಇದು ನಿಜವಿರಬಹುದು ಎಂದು ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. आओ कोफीरो, में तुमको बताऊ, आज़ादी कैसे आई थी 😱😭 pic.twitter.com/HD4GJ3CwJr — THE PUNCHAR MAN 😎 (@panchar_men) July 11,…

Read More

Fact Check | ಕಮಲಾ ಹ್ಯಾರಿಸ್‌ ಟ್ರಂಪ್‌ ವಿರುದ್ಧ ಜಾಹಿರಾತು ನೀಡಿದ್ದಾರೆ ಎಂದು ಹಳೆಯ ವಿಡಿಯೋ ಹಂಚಿಕೆ

ಮುಂಬರಲಿರುವ ಅಮೇರಿಕ ಚುನಾವಣೆಗಳಲ್ಲಿ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಎಂದೇ ಗುರುತಿಸಿಕೊಂಡಿದ್ದ ಅಮೇರಿಕದ ಅಧ್ಯಕ್ಷ ಜೋ ಬೈಡೆನ್ ಅವರು ಒಮ್ಮಿಂದೊಮ್ಮೆಗೆ ಕಣದಿಂದ ಹಿಂದೆ ಸರಿದಿದ್ದಾರೆ, ತನ್ಮೂಲಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರನ್ನು ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿಯನ್ನಾಗಿ ನಾಮನಿರ್ದೇಶನಗೊಳಿಸಿದ್ದಾರೆ. ಇದರ ನಡುವೆ ಇದೀಗ ಸಾಮಾಜಿಕ ಜಾಲತಾಣದಲ್ಲಿ “ಅಮೆರಿಕ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಕಮಲಾ ಹ್ಯಾರಿಸ್‌ ಅವರು ಟ್ರಂಪ್‌ ವಿರುದ್ಧ ಜಾಹಿರಾತು ಪ್ರಚಾರವನ್ನು ಆರಂಭಿಸಿದ್ದಾರೆ” ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.  First official campaign ad…

Read More

Fact Check | ಕಳೆದ 7 ವರ್ಷಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲವೆಂದು ಸುಳ್ಳು ಹೇಳಿದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಕಳೆದ ಏಳು ವರ್ಷಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಹೇಳಿಕೆಯನ್ನು ನೀಡಿದ್ದಾರೆ. ಇದು ಲೋಕಸಭೆಯ ಕಲಾಪಗಳನ್ನು ವೀಕ್ಷಿಸಿದವರಿಗೆ ಆಘಾತವನ್ನು ಉಂಟುಮಾಡಿದೆ. ಜೊತೆಗೆ ಸಾರ್ವಜನಿಕ ವಲಯದಲ್ಲಿ ಕೂಡ ಹಲವು ಪ್ರಶ್ನೆಗಳು ಮೂಡುವಂತೆ ಮಾಡಿದೆ. ಅದರಲ್ಲೂ ಕೇಂದ್ರ ಶಿಕ್ಷಣ ಸಚಿವರೇ ಈ ರೀತಿಯಾಗಿ ಸುಳ್ಳು ಮಾಹಿತಿಯನ್ನು ಸದನಕ್ಕೆ ನೀಡಿದರೆ ಹೇಗೆ ಎಂಬ ಪ್ರಶ್ನೆಗಳು ಕೂಡ ಕಾಡೋದಕ್ಕೆ ಆರಂಭವಾಗಿದೆ. ಶಿಕ್ಷಣ ಸಚಿವರು ಹೇಳಿದ್ದು ಏನು?…

Read More

Fact Check | ಆಂಧ್ರಪ್ರದೇಶದಲ್ಲಿ ವೈಎಸ್‌ಆರ್‌ಸಿಪಿ ಕಾರ್ಯಕರ್ತರು ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬುದು ಸುಳ್ಳು

“ಈ ವಿಡಿಯೋ ನೋಡಿ ಆಂಧ್ರಪ್ರದೇಶದ ಗುಡೂರಿನಲ್ಲಿ ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷದ (ವೈಎಸ್‌ಆರ್‌ಸಿಪಿ) ಕಾರ್ಯಕರ್ತರು ಪೊಲೀಸ್ ಪೇದೆಯ ಮೇಲೆ ಹಲ್ಲೆ ನಡೆಸಿದ್ದಾರೆ. ಆಂಧ್ರಪ್ರದೇಶದಲ್ಲಿ ಈಗ ಪೊಲೀಸರಿಗೂ ರಕ್ಷಣೆ ಇಲ್ಲ.” ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ವ್ಯಾಪಕವಾಗಿ ವೈರಲ್‌ ಆಗುತ್ತಿದೆ. ಈ ವಿಡಿಯೋವನ್ನು ಹಂಚಿಕೊಂಡ ಇನ್ನೂ ಕೆಲವರು  ಜಗನ್‌ ಮೋಹನ್‌ ರೆಡ್ಡಿ ಅವರ ವಿರುದ್ಧ ಕೂಡ ಆಕ್ರೋಶವನ್ನು ವ್ಯಕ್ತ ಪಡಿಸುತ್ತಿದ್ದಾರೆ. https://www.youtube.com/watch?v=B8uqcFeaPiI ಇನ್ನು ವಿಡಿಯೋ ನೋಡಿದ ಹಲವರು ಪೊಲೀಸ್‌ ಕಾನ್‌ಸ್ಟೇಬಲ್‌ ಮೇಲೆ ನಿಜವಾಗಿಯೂ ವೈಎಸ್‌ಆರ್‌ಸಿಪಿ ಪಕ್ಷದ ಕಾರ್ಯಕರ್ತರೇ…

Read More

Fact Check | ಉಯ್ಘರ್‌ ಮುಸ್ಲಿಂ ವ್ಯಕ್ತಿಯ ಮೇಲೆ ಚೀನಾ ಸೈನಿಕನ ದರ್ಪ‌ ಎಂದು ಇಂಡೋನೇಷ್ಯಾ ವಿಡಿಯೋ ಹಂಚಿಕೆ

“ಈ ವಿಡಿಯೋ ನೋಡಿ.. ಇದು ಚೀನಾದಲ್ಲಿನ ಉಯ್ಘರ್‌ಮುಸ್ಲಿಂ ಜನರ ಇಂದಿನ ಪರಿಸ್ಥಿತಿ. ಇಂದು ಚೀನಾದ ಮನೆಯೊಂದರಲ್ಲಿ ವ್ಯಕ್ತಿಯೊಬ್ಬ ಕುರಾನ್ ಹೊಂದಿದ್ದ ಕಾರಣಕ್ಕೆ ಅಲ್ಲಿನ ಸೈನಿಕರು ಆ ವ್ಯಕ್ತಿಯನ್ನು ಥಳಿಸಿದ್ದಾರೆ. ಒಬ್ಬ ವ್ಯಕ್ತಿಯ ಧಾರ್ಮಿಕ ಸ್ವಾತಂತ್ರ್ಯವನ್ನು ತಡೆದು ಅಲ್ಲಿನ ಮೂಲ ಧರ್ಮವನ್ನು ಮಾತ್ರ ಅನುಸರಿಸುವಂತೆ ಚೀನಾ ನೋಡಿಕೊಳ್ಳುತ್ತಿದೆ.” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋ ನೋಡಿದ ಹಲವು ಮಂದಿ ಈ ಘಟನೆ ಚೀನಾದಲ್ಲೇ ನಡೆದಿದೆ ಎಂದು ಭಾವಿಸಿದ್ದಾರೆ, ಹೀಗಾಗಿ ಸಾಕಷ್ಟು ಮಂದಿ  ತಮ್ಮ ವೈಯಕ್ತಿಕ ಸಾಮಾಜಿಕ‌‌…

Read More

Fact Check | ತೆಲಂಗಾಣದಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬ ಆಹಾರಕ್ಕೆ ಮೂತ್ರ ವಿಸರ್ಜನೆ ಮಾಡಿದ್ದಾನೆ ಎಂಬುದು ಸುಳ್ಳು

” ಈ ವಿಡಿಯೋ ನೋಡಿ ಇದು ತೆಲಂಗಾಣದ ವಾರಂಗಲ್‌ನಲ್ಲಿ ನಡೆದ ಘಟನೆ. ಈ ಮುಸ್ಲಿಂ ಯುವಕ ಸಾವಿರಾರು ಜನ ಊಟ ಮಾಡಲು ತಯಾರಿಸಲಾಗುತ್ತಿರುವ ಆಹಾರದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದಾನೆ. ನೆನಪಿರಲಿ ಈ ಆಹಾರವನ್ನು ಹಿಂದೂಗಳು ಕೂಡ ಸೇವನೆ ಮಾಡುತ್ತಾರೆ. ಮುಸಲ್ಮಾನರು ನಡೆಸುವ ಹೋಟೆಲ್‌ಗೆ ಹೋಗುವ ಮುನ್ನ ಎಚ್ಚರ” ಎಂಬ ಬರಹದೊಂದಿಗೆ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. 🧵 NO CONFUSION🚨 Ok, let's assume that "HALAL" isn't "spitting" on food but actually…

Read More