Fact Check : ಇಸ್ರೇಲಿ ನಾಗರಿಕರಿಗೆ ಇಸ್ಲಾಮಿಕ್ ಪ್ರಾರ್ಥನೆ ಮಾಡುವಂತೆ ಹಮಾಸ್ ಒತ್ತಾಯಿಸುತ್ತಿದೆ ಎಂಬುದು ಸುಳ್ಳು
ಹಮಾಸ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆಯುತ್ತಿದೆ. ಇದೇ ಸಂದರ್ಭದಲ್ಲಿ ಈ ಯುದ್ಧದ ಕುರಿತು ಹಲವು ರೀತಿಯಾದ ಸುಳ್ಳು ಸುದ್ದಿಗಳನ್ನ ಹರಡಲಾಗುತ್ತಿದೆ. ಈ ಸುದಿಗಳು ಸಾಮಾಜಿಕ ಜಾಲತಾಣದಲ್ಲಿ ಸಾರ್ವಜನಿಕರ ದಾರಿ ತಪ್ಪಿಸುವಲ್ಲಿ ಯಶಸ್ವಿಯಾಗುತ್ತಿದೆ. ಇದೀಗ ಇಂತಹದ್ದೇ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅದ್ರಲ್ಲೂ ಪ್ರಮುಖವಾಗಿ ಫೋಟೋ ಮತ್ತು ವಿಡಿಯೋಗಳಿಗೆ ಬೇರೆ ಬೇರೆ ತಲೆಬರಹಗಳನ್ನು ಹಾಕಿ ಸುಳ್ಳು ಸುದ್ದಿಯನ್ನು ಹರಿ ಬಿಡಲಾಗಿದೆ. ಇದೇ ರೀತಿಯಾಗಿ “ಹಮಾಸ್ ಉಗ್ರಗಾಮಿಗಳು ಇಸ್ರೇಲಿ ಒತ್ತೆಯಾಳುಗಳನ್ನು…