ಡಾ. ಬಿ.ಆರ್ ಅಂಬೇಡ್ಕರ್

Fact Check: ಡಾ. ಬಿ.ಆರ್ ಅಂಬೇಡ್ಕರ್ ಅವರ “ಪಾಕಿಸ್ತಾನ ಅಥವಾ ಭಾರತದ ವಿಭಜನೆ” ಕೃತಿಯ ಕುರಿತು ಸುಳ್ಳು ಹಂಚಿಕೊಳ್ಳಲಾಗುತ್ತಿದೆ

ಡಾ. ಬಿ. ಆರ್ ಅಂಬೇಡ್ಕರ್ ಅವರು ನಮ್ಮ ದೇಶ ಕಂಡ ಮಹಾನ್ ಜ್ಞಾನಿಗಳಲ್ಲಿ ಒಬ್ಬರು. ಹಾಗೆಯೇ ಮಹಾಮಾನವತಾವಾದಿ ಎಂದೇ ಹೆಸರಾದವರು. ಭಾರತ ದೇಶದ ಸಂವಿಧಾನವನ್ನು ರೂಪಿಸುವಾಗ ಎಲ್ಲಾ ಜಾತಿ, ಧರ್ಮ, ಭಾಷೆಗಳಿಗೂ ಸಮಾನ ಅವಕಾಶ, ಗೌರವಗಳು ಕಲ್ಪಿಸಿಕೊಡುವ ಸಲುವಾಗಿ ನಮ್ಮ ದೇಶವನ್ನು ಧರ್ಮ ನಿರಪೇಕ್ಷತೆಯ ರಾಷ್ಟ್ರವನ್ನಾಗಿ ಮಾಡಿ ಭಾರತದ ವೈವಿದ್ಯತೆಗೆ, ಬಹುತ್ವಕ್ಕೆ ಮತ್ತು ಜಾತ್ಯಾತೀತತೆ ತತ್ವಕ್ಕೆ ಕಾನೂನಾತ್ಮಕವಾಗಿ ಮನ್ನಣೆ ನೀಡಿದವರು. ಆದರೆ, ಡಾ. ಬಿ.ಆರ್ ಅಂಬೇಡ್ಕರ್ ಅವರ ಬದುಕು ಮತ್ತು ಬರಹಗಳಿಗೆ ಸಂಬಂಧಿಸಿದಂತೆ ಅವರ ಬದುಕಿದ್ದ ಕಾಲದಿಂದ…

Read More
ಡಾ. ಬಿ.ಆರ್ ಅಂಬೇಡ್ಕರ್

Fact Check: ಡಾ. ಬಿ. ಆರ್ ಅಂಬೇಡ್ಕರ್ ಮತದಾನ ಮನೆಯ ಹೆಣ್ಣಿದ್ದಂತೆ ಎಂದು ಎಲ್ಲಿಯೂ ಹೇಳಿಲ್ಲ

ಖ್ಯಾತ ಹೃದ್ರೋಗ ತಜ್ಞ ಮತ್ತು ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಮಾಜಿ ನಿರ್ದೇಶಕರು ಹಾಗೂ ಹಾಲಿ ಬೆಂಗಳೂರು ಗ್ರಾಮಂತರ ಲೋಕಸಭಾ ಚುನಾವಣೆಯ ಜೆಡಿಎಸ್-ಬಿಜೆಪಿ ಮೈತ್ರಿಯ ಅಭ್ಯರ್ಥಿಯೂ ಆದ ಡಾ. ಸಿ.ಎನ್ ಮಂಜುನಾಥ್ ಅವರು ನೆನ್ನೆ (ಏಪ್ರಿಲ್ 4) ನಡೆದ ಪ್ರಚಾರದ ಸಭೆಯ ಭಾಷಣದಲ್ಲಿ, “ಮತದಾನ ಮನೆಯ ಹೆಣ್ಣು ಮಗಳಿದಂತೆ ಅದು ಮಾರಾಟ ಆಗಬಾರದು ಎಂದು ಡಾ. ಅಂಬೇಡ್ಕರ್ ಹೇಳಿದ್ದಾರೆ” ಎಂದು ಮತದಾರರಿಗೆ ತಿಳಿಸಿದ್ದಾರೆ. ಹಾಗಾದರೆ ನಿಜಕ್ಕೂ ಡಾ. ಬಿ. ಆರ್ ಅಂಬೇಡ್ಕರ್ ಅವರು…

Read More
ಸರ್ಧಾರ್ ವಲ್ಲಭಬಾಯಿ ಪಟೇಲ್

Fact Check: ಕರ್ನಾಟಕದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಮೂರ್ತಿಯನ್ನು ಹೊಡೆದು ಹಾಕಿಲ್ಲ

ಲೋಕಸಭಾ ಚುನಾವಣೆಗಳು ಹತ್ತಿರಾಗುತ್ತಿದ್ದಂತೆ ಬಿಜೆಪಿಯೇತರ ರಾಜ್ಯಗಳ ಮೇಲೆ ಅದರಲ್ಲೂ ದಕ್ಷಿಣ ರಾಜ್ಯಗಳ ಮೇಲೆ ಸಾಕಷ್ಟು ಸುಳ್ಳು ಆರೋಪಗಳನ್ನು ಹೊರಿಸಲಾಗುತ್ತಿದೆ. ಇತ್ತೀಚೆಗೆ ವಿಡಿಯೋ ಒಂದು ವೈರಲ್ ಆಗಿದ್ದು ಅದರಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಮೂರ್ತಿಯನ್ನು ಗುಂಪೊಂದು ಟ್ಯಾಕ್ಟ್‌ರ್ ಬಳಸಿ ತೆರವುಗೊಳಿಸುತ್ತಿರುವುದನ್ನು ಕಾಣಬಹುದಾಗಿದೆ. ಆದರೆ, “ಕರ್ನಾಟಕದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಮೂರ್ತಿಯನ್ನು ಹೊಡೆದು ಹಾಕಲಾಗಿದೆ.” ಎಂದು ಪ್ರತಿಪಾದಿಸಲಾಗುತ್ತಿದೆ.  ಫ್ಯಾಕ್ಟ್‌ಚೆಕ್: ಈ ಕುರಿತು ಹುಡುಕಿದಾಗ, ಈ ಘಟನೆ 26 ಜನವರಿ 2024ರಲ್ಲಿ ಮಧ್ಯ ಪ್ರದೇಶದ ಉಜ್ಜಯಿನಿ ಜಿಲ್ಲೆಯ ಮಕಾಡೋನ್…

Read More
nehru

Fact Check: ಜವಾಹರ್‌ಲಾಲ್ ನೆಹರು ತಮಗೆ ತಾವೇ “ಭಾರತ ರತ್ನ” ಘೋಷಿಸಿಕೊಂಡರು ಎಂಬುದು ಸುಳ್ಳು

ಭಾರತದ ಮೊದಲ ಮತ್ತು ದೀರ್ಘಾವಧಿಯ ಪ್ರಧಾನ ಮಂತ್ರಿಗಳಾದ ಜವಾಹರಲಾಲ್ ನೆಹರು ಅವರ ಪರಂಪರೆಯು ನರೇಂದ್ರ ಮೋದಿ ಸರ್ಕಾರದ ಅಡಿಯಲ್ಲಿ ವ್ಯವಸ್ಥಿತ ಆಕ್ರಮಣಕ್ಕೆ ಒಳಗಾಗುತ್ತಿದೆ. ಈ ದಾಳಿಯು ಬಹುಮುಖಿಯಾಗಿದ್ದು, ಇತಿಹಾಸದ ಆಧಾರರಹಿತ ಆರೋಪಗಳಿಂದ ಹಿಡಿದು ಅವಹೇಳನಕಾರಿ ಪ್ರತಿಪಾದನೆಗಳು ಮತ್ತು ಸುಳ್ಳುಗಳನ್ನು ಹರಡುವವರೆಗೆ ನಿರಂತರವಾಗಿ ದಾಳಿ ಮಾಡಲಾಗುತ್ತಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಮತ್ತು ಭಾರತದ ಪ್ರಗತಿಯಲ್ಲಿ ನೆಹರೂ ಅವರ ಕೊಡುಗೆಯೇ ಅಲ್ಪ ಎನ್ನುವಂತೆ ಬಿಂಬಿಸಲಾಗುತ್ತಿದೆ. ಇದರ ಭಾಗವಾಗಿ, ಜವಹರಲಾಲ್ ನೆಹರು ಅವರು ತಮಗೆ ತಾವೇ “ಭಾರತ ರತ್ನ” ಘೋಷಿಸಿಕೊಂಡರು ಎಂಬ ಪ್ರತಿಪಾದನೆಯು ಹಲವಾರು ವರ್ಷಗಳಿಂದ…

Read More

Fact Check: ಸ್ವತಃ ಡಾ. ಅಂಬೇಡ್ಕರ್ ಅವರು ಮಾತನಾಡಿರುವ ವಿಡಿಯೋ ಎಂದು ಚಲನಚಿತ್ರದ ವಿಡಿಯೋ ಹಂಚಿಕೆ

ಜಗತ್ತು ಕಂಡ ಇಪ್ಪತ್ತನೇ ಶತಮಾನದ ಮೇರು ಪ್ರತಿಭೆಗಳಲ್ಲಿ ಪ್ರಮುಖರಾದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾಷಣ ಮತ್ತು ಬರಹಗಳನ್ನು ತಿರುಚುವ ಮತ್ತು ತಪ್ಪಾಗಿ ಅರ್ಥೈಸುವ ಕೆಲಸಗಳನ್ನು ಅನೇಕ ವರ್ಷಗಳಿಂದ ಕೆಲವು ಕೋಮುವಾದಿ ಶಕ್ತಿಗಳು ಮಾಡುತ್ತಲೇ ಬರುತ್ತಿದ್ದಾರೆ. ಈಗ “ಇದು ಸ್ವತಃ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಮಾತನಾಡಿರುವ ವಿಡಿಯೋ. ಅಂಬೇಡ್ಕರ್ ಹೆಸರು ಹೇಳಿ ಜಾತ್ಯಾತೀತತೆ ಪಾಠ ಹೇಳುವ ಲದ್ದಿ ಜೀವಿಗಳೇ ಇಲ್ಲಿ ಕೇಳಿ, ಜೈ ಶ್ರೀ ರಾಮ್, ಜೈ ಭೀಮ್, ಜೈ ಹಿಂದು ರಾಷ್ಟ್ರ” ಎಂಬ…

Read More