ರಿಷಿಕೇಶ

Fact Check: ರಿಷಿಕೇಶದಲ್ಲಿ ರಾಫ್ಟಿಂಗ್ ಸಮಯದಲ್ಲಿ ನಡೆದಿರುವ ಗಲಾಟೆಗೆ ಯಾವುದೇ ಕೋಮು ಆಯಾಮವಿಲ್ಲ

ರಿಷಿಕೇಶದ ಗಂಗಾನದಿಯ ದಡದಲ್ಲಿ ಪ್ರವಾಸಿಗರು ಮತ್ತು ರಾಫ್ಟಿಂಗ್ ಮಾರ್ಗದರ್ಶಕರ ನಡುವೆ ವಾಗ್ವಾದ ನಡೆದಿದೆ ಎಂದು ವರದಿಯಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ, ಪ್ರವಾಸಿಗರು ಮತ್ತು ರಾಫ್ಟಿಂಗ್ ಗೈಡ್‌ಗಳ ನಡುವಿನ ಘರ್ಷಣೆಯನ್ನು ಚಿತ್ರಿಸುವ ವೀಡಿಯೊ ಕೋಮುವಾದದ ಪ್ರತಿಪಾದನೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಮುಸ್ಲಿಂ ರಾಫ್ಟಿಂಗ್ ಮಾರ್ಗದರ್ಶಕರು ಹಿಂದೂಗಳ ಮೇಲೆ (ಇಲ್ಲಿ ಮತ್ತು ಇಲ್ಲಿ) ಹಲ್ಲೆ ನಡೆಸಿದ್ದಾರೆ ಎಂದು ವೀಡಿಯೋದಲ್ಲಿ ಹೇಳಲಾಗುತ್ತಿದೆ. ऋषिकेश:- जेहादी हिंदुओ के हर पवित्र पर्यटन स्थल पर पहुंच रहे हैं, और वहां का सारा…

Read More
ಹಿಂದು

Fact Check: ರಾಜಸ್ತಾನದಲ್ಲಿ ಜಮೀನು ವ್ಯಾಜ್ಯದ ಗಲಾಟೆಯನ್ನು ಹಿಂದು ಮನೆಗೆ ಕಲ್ಲು ತೂರಾಟ ಎಂದು ತಪ್ಪಾಗಿ ಹಂಚಿಕೆ

ಇತ್ತೀಚೆಗೆ ಜನರಲ್ಲಿ ಮುಸ್ಲಿಂ ಸಮುದಾಯದ ಕುರಿತು ದ್ವೇಷ ಬಿತ್ತುವ ಸಲುವಾಗಿ ಅನೇಕ ಪ್ರಯತ್ನಗಳನ್ನು ನಮ್ಮ ದೇಶದಲ್ಲಿ ನಡೆಸಲಾಗುತ್ತಿದೆ. ಎಲ್ಲಿಯೇ ಜಗಳಗಳು, ಕೊಲೆ, ಹಲ್ಲೆಗಳು ನಡೆದರೂ ಅದಕ್ಕೆ ಧರ್ಮದ ಬಣ್ಣ ಹಚ್ಚುವುದು, ಆರೋಪಿ ಮುಸ್ಲಿಂ ಆಗಿದ್ದರೆ ಅದನ್ನು ದೊಡ್ಡ ಸಂಗತಿ ಮಾಡಿ ರಾಜಕೀಯವಾಗಿ ಬದಲಾಯಿಸಲು ಹುನ್ನಾರಗಳು ನಡೆಯುತ್ತಿದೆ. ಈ ಮೂಲಕ ಮುಸ್ಲಿಂ ಸಮುದಾಯದ ಕುರಿತು ಇತರೆ ಜನರಲ್ಲಿ ಭಯ ಹುಟ್ಟಿಸಿ ನಾವು ನಿಮ್ಮ ರಕ್ಷಿಸುತ್ತೇವೆ ಎಂಬ ಸುಳ್ಳು ಭರವಸೆಗಳ ನೀಡಿ ಮತ ಪಡೆಯಲಷ್ಟೇ ಇಂತಹ ದ್ವೇಷದ ರಾಜಕಾರಣವನ್ನು ಹುಟ್ಟು…

Read More
Yoga

ಯೋಗ ತರಬೇತುದಾರ ಸುಹೇಲ್ ಅನ್ಸಾರಿ 5 ಹಿಂದೂ ಮಹಿಳೆಯರುನ್ನು ಇಸ್ಲಾಂಗೆ ಮದುವೆ ಮಾಡಿಸಿದ್ದಾನೆ ಎಂಬುದಕ್ಕೆ ಆಧಾರಗಳಿಲ್ಲ

ಇತ್ತೀಚೆಗೆ ಮುಸ್ಲೀಮರಿಗೆ ಸಂಬಂಧಿಸಿದ ಯಾವುದೇ ವಿಷಯಗಳನ್ನು ಕೋಮುದ್ವೇಷ ಹರಡುವ ಸಲುವಾಗಿ ತಿರುಚಿ ಹಂಚಿಕೊಳ್ಳಲಾಗುತ್ತಿದೆ. ಹಾಗೆಯೇ ಮುಸ್ಲಿಂ ಪ್ರತಿಭೆಗಳನ್ನು ಕೇಂದ್ರವಾಗಿರಿಸಿಕೊಂಡು ಸುಳ್ಳು ಆರೋಪಗಳೊಂದಿಗೆ ಅಪಪ್ರಚಾರ ಮಾಡಲಾಗುತ್ತಿದೆ. ಇದಕ್ಕೆ ಉದಾಹರಣೆ ಎಂಬಂತೆ,”ಇವನ ಹೆಸರು ಸುಹೇಲ್ ಅನ್ಸಾರಿ.. ಇವನು ಯೋಗ ತರಬೇತುದಾರ. ಯೋಗ ಕಲಿಸುವ ರೀತಿ ನೋಡಿ, ಅಷ್ಟೇ ಅಲ್ಲ ಇವನು ಐದು ಹಿಂದೂ ಮಹಿಳೆಯರುನ್ನು ಇಸ್ಲಾಂಗೆ ಮದುವೆ ಮಾಡಿಸಿದ್ದಾನೆ.” ಎಂಬ ಯೋಗ ತರಬೇತಿದಾರರೊಬ್ಬರ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ಫ್ಯಾಕ್ಟ್‌ಚೆಕ್‌: ಸುಹೇಲ್ ಅನ್ಸಾರಿ ಅಡ್ವಾನ್ಸ್ಡ್‌ ಯೋಗ ತರಬೇತಿ…

Read More
ಮುಸ್ಲಿಂ

Fact Check: ಮುಸ್ಲಿಂ ಮಹಿಳೆಯಿಂದ ಮಗು ಅಪಹರಣ ಎಂದು ಈಜಿಪ್ಟಿನ ಫೇಕ್ ವಿಡಿಯೋ ಹಂಚಿಕೆ

ಕಳೆದ ಒಂದು ದಶಕದಿಂದ ಮುಸ್ಲಿಂ ಸಮುದಾಯದವರ ಮೇಲೆ ನಿರಂತರವಾಗಿ ಸುಳ್ಳು ಸುದ್ದಿಗಳನ್ನು, ಸುಳ್ಳು ಆರೋಪಗಳನ್ನು ಹರಿಬಿಡಲಾಗುತ್ತಿದೆ. ಇದರ ಮುಖ್ಯ ಉದ್ದೇಶ ಇಸ್ಲಾಮ್ ಧರ್ಮದ ಮೇಲೆ, ಮುಸ್ಲಿಂ ಸಮುದಾಯದ ಮೇಲೆ ದ್ವೇಷ ಹುಟ್ಟಿಸುವುದೇ ಆಗಿದೆ. ಜನರು ಸಹ ಇವುಗಳ ಸತ್ಯ ತಿಳಿದುಕೊಳ್ಳದೆ ಸುಳ್ಳುಗಳನ್ನೇ ನಂಬಿಕೊಳ್ಳುತ್ತಾ ತಮ್ಮ ಅಭಿಪ್ರಾಯಗಳನ್ನು ರೂಪಿಸಿಕೊಳ್ಳುತ್ತಿದ್ದಾರೆ. ಈ ಹಿಂದೆ ಬೆಂಗಳೂರಿನ ಲಿಫ್ಟ್‌ ಒಂದರಲ್ಲಿ ಬಾಲಕಿಯರನ್ನು ಅಪಹರಿಸಲಾಗಿದೆ ಎಂದು ಈಜಿಪ್ಟ್‌ನ ವಿಡಿಯೋ ಹಂಚಿಕೊಳ್ಳಲಾಗುತ್ತಿತ್ತು. ಈಗ “ಬುರ್ಖಾಧಾರಿ ಮಹಿಳೆಯೊಬ್ಬರು ರಸ್ತೆ ಬದಿ ಕುಳಿತಿದ್ದ ಬಾಲಕನನ್ನು ಅಪಹರಿಸಿದ್ದಾರೆ. ಇಂತವರ ಕುರಿತು…

Read More
ಬೆಂಗಳೂರಿನಲ್ಲಿ

Fact Check: ಬೆಂಗಳೂರಿನಲ್ಲಿ ಮೂತ್ರ ಬೆರೆಸಿ ಪಾಪ್ ಕಾರ್ನ್ ತಯಾರಿಸಲಾಗುತ್ತಿತ್ತು ಎಂಬುದು ಸುಳ್ಳು

ಇತ್ತೀಚೆಗೆ ಅನ್ಯ ಕೋಮಿನವರು ಎಂಬ ಕಾರಣಕ್ಕೆ ಹಲ್ಲೆ ನಡೆಸುವುದು, ಅವರಿಗೆ ಆರ್ಥಿಕ ನಿರ್ಬಂಧನೆಗಳನ್ನು ಹೇರುವುದು, ಸುಳ್ಳು ಆರೋಪಗಳನ್ನು ಮಾಡುವುದು ದೇಶದಾದ್ಯಂತ ಕಂಡು ಬರುತ್ತಿದೆ. ರಾಜಕೀಯ ಪ್ರೇರಿತ ಧರ್ಮಾಂಧತೆಯು ದಿನೇ ದಿನೇ ಭಾರತವನ್ನು ಆವರಿಸಿಕೊಂಡು ಎರಡು ಕೋಮುಗಳ ನಡುವೆ ದ್ವೇಷ, ಅಸಹಿಷ್ಣುತೆ ಹೆಚ್ಚಾಗುವಂತೆ ಮಾಡಲಾಗುತ್ತಿದೆ. ಈಗ ಇಂತಹದ್ದೆ ಪ್ರಕರಣವೊಂದು ಬೆಳಕಿಗೆ ಬಂದಿದ್ದು “ಬೆಂಗಳೂರಿನಲ್ಲಿ ಉಪ್ಪಿನ ಬದಲು ಮೂತ್ರ ಬೆರೆಸಿ ಪಾಪ್ ಕಾರ್ನ್ ತಯಾರಿಸುವಾಗ ಪಾಪ್ ಕಾರ್ನ್ ಸ್ಟಾಲ್ ನ ನಯಾಸ್ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ! ಮುಸ್ಲಿಮರನ್ನು ಸುಧಾರಿಸಲು…

Read More