Fact Check: ಹಿಂದೂಗಳ ಅಗತ್ಯವಿಲ್ಲವೆಂದು ಸಿಎಂ ಸಿದ್ದರಾಮಯ್ಯನವರು ಹೇಳಿಲ್ಲ. ಈ ಪತ್ರಿಕಾ ವರದಿ ನಿಜವಲ್ಲ

ಲೋಕಸಭಾ ಚುನಾವಣೆಗಳಿಗೆ ಇನ್ನು ಕೆಲವೇ ದಿನಗಳು ಬಾಕಿ ಇರುವ ಈ ಹೊತ್ತಿನಲ್ಲಿ ತಮ್ಮ ಎದುರಾಳಿಗಳನ್ನು ಮಣಿಸುವ ಸಲುವಾಗಿ ನಕಲಿ ವರದಿಗಳನ್ನು, ಹೇಳಿಕೆಗಳನ್ನು ಸೃಷ್ಟಿಸಲಾಗುತ್ತಿದೆ. ಅದೇ ರೀತಿ ಈಗ, “ಹಿಂದೂಗಳ ಅಗತ್ಯ ನಮಗೆ ಬೇಡ. ಮುಸ್ಲಿಮರ ಓಟು ಸಾಕು‌. ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟಲು ಬಯಸುತ್ತೇನೆ. ಮುಸ್ಲಿಂರ ಓಲೈಕೆ ಕುರಿತು ಬಿಜೆಪಿಗರ ಟೀಕೆ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ.” ಎಂದು ಸಿಎಂ ಸಿದ್ದರಾಮಯ್ಯ ಖಾಸಗಿ ಹೋಟೇಲ್ ಒಂದರಲ್ಲಿ ನಡೆದ ಹೋಬಳಿ ಮಟ್ಟದ ಕಾಂಗ್ರೆಸ್ ನಾಯಕರ ಸಭೆಯಲ್ಲಿ ಹೇಳಿದ್ದಾರೆ ಎನ್ನುವ ಪತ್ರಿಕಾ…

Read More

Fact Check | ಮೋದಿ ಪ್ರಧಾನಿಯಾದರೆ ದೇಶ ಬಿಟ್ಟು ಹೋಗುತ್ತೇನೆ ಎಂಬುದು ದೇವೇಗೌಡರ ಹೇಳಿಕೆಯೇ ಹೊರತು ಸಿದ್ದರಾಮಯ್ಯನವರದ್ದಲ್ಲ

“ತಾರಿಖು ನೆನಪಿಡಿ ಮೋದಿ ಅವರು ಪ್ರಧಾನಿ ಆದರೆ ದೇಶ ಬಿಟ್ಟು ಹೋಗುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿಕೊಂಡಿದ್ದಾರೆ. ಈ ವಿಡಿಯೋವನ್ನು ಎಲ್ಲರಿಗೂ ಶೇರ್‌ ಮಾಡಿ” ಎಂಬ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಈ ವಿಡಿಯೋದಲ್ಲಿ ಸಿಎಂ ಸಿದ್ದರಾಮಯ್ಯನವರ ಧ್ವನಿಯಲ್ಲೇ ಈ ಮಾತು ಹೇಳಿರುವುದು ಸ್ಪಷ್ಟವಾಗಿದೆ. ಆದರೆ ವಿಡಿಯೋವಿನ ಪ್ರಾರಂಭ ಮತ್ತು ವಿಡಿಯೋದ ಕೊನೆಯು ಒಂದೇ ರೀತಿಯಲ್ಲಿರದೆ ಮಧ್ಯದಲ್ಲಿ ಪ್ರಸಾರವಾದ ರೀತಿಯಲ್ಲಿರುವುದು ಅನುಮಾನವನ್ನು ಹುಟ್ಟಿಸುತ್ತಿದೆ. ಆದರೂ ಸಾಕಷ್ಟು ಮಂದಿ ಈ ಹೇಳಿಕೆಯನ್ನು ಸಿದ್ದರಾಮಯ್ಯನವರೇ ನೀಡಿದ್ದಾರೆ ಎಂದು…

Read More
ಸಿದ್ದರಾಮಯ್ಯ

ಸಿದ್ದರಾಮಯ್ಯನವರು ಮಹಿಳೆಯೊಬ್ಬರ ಬಟ್ಟೆ ಎಳೆದು ದೌರ್ಜನ್ಯ ನಡೆಸಿದ್ದರು ಎಂದು ಸುಳ್ಳು ಹರಡಿದ ಆರ್. ಅಶೋಕ್

ಇತ್ತೀಚೆಗೆ ಚಾಮರಾಜನಗರದ ಹನೂರು ಕ್ಷೇತ್ರದಲ್ಲಿ ನಡೆದ ಸಭೆಯೊಮದರಲ್ಲಿ ಸಿದ್ದರಾಮಯ್ಯನವರ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯನವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಒಬ್ಬ ರೌಡಿ. ಆತ ಗುಜರಾತ್ ನಲ್ಲಿ ನರಮೇಧಗಳಿಗೆ ಕಾರಣರಾಗಿದ್ದಾರೆ. ಪ್ರಧಾನಿ ಮೋದಿಯವರು ಅಂತವರನ್ನು ತಮ್ಮ ಜೊತೆಗೆ ಇಟ್ಟುಕೊಳ್ಳುವುದು ಸರಿಯಲ್ಲ ಎಂದಿದ್ದಾರೆ. ಇದಕ್ಕೆ ತೀವ್ರ ವಿರೋದ ವ್ಯಕ್ತವಾಗಿದ್ದು ಸದ್ಯ ಯತೀಂದ್ರ ಸಿದ್ದರಾಮಯ್ಯನವರನ್ನು ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಸಾಕಷ್ಟು ಟೀಕಿಸುತ್ತಿದ್ದಾರೆ. ಇದಕ್ಕೆ ಪ್ರತಿಕ್ರಯಿಸಿರುವ ವಿರೋದ ಪಕ್ಷದ ನಾಯಕ ಆರ್. ಅಶೋಕ್ ಅವರು “ಸದನದಲ್ಲಿ ಪೊಲೀಸರನ್ನು ಬೆದರಿಸುವುದು,…

Read More

Fact Check | ಇಂಗ್ಲೀಷ್‌ ನಾಮಫಲಕ ತೆರವುಗೊಳಿಸಿದ್ದನ್ನು ಕೇಸರಿ ನಾಮಫಲಕ ಎಂದು ಸುಳ್ಳು ಹಂಚಿಕೆ

“ಕರ್ನಾಟಕದಲ್ಲಿ ನಾಮಫಲಕಗಳಲ್ಲಿ ಕೇಸರಿ ಬಣ್ಣವನ್ನು ಬಳಸುವಂತಿಲ್ಲ ಎಂಬ ಕಾರಣಕ್ಕೆ ಜನರ ಗುಂಪೊಂದು ಅಂಗಡಿಯ ನಾಮಫಲಕಗಳನ್ನು ಧ್ವಂಸಗೊಳಿಸಿದೆ. ಈ ವಿಡಿಯೋವನ್ನು ಎಲ್ಲರಿಗೂ ಶೇರ್‌ ಮಾಡಿ” ಎಂಬ ಬರಹದೊಂದಿಗೆ ವಿಡಿಯೋವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು, ಕರ್ನಾಟಕದಲ್ಲಿ ಹಿಂದೂ ಅಂಗಡಿಯೊಂದನ್ನು ಧ್ವಂಸ ಮಾಡಲಾಗಿದೆ, ಈ ಬಗ್ಗೆ ಧ್ವನಿ ಎತ್ತಲು ಯಾರೂ ಇಲ್ಲದಂತಾಗಿದೆ ಎಂದು ಕೋಮು ಬಣ್ಣವನ್ನು ಬಳಿಯಲಾಗಿದೆ. ಇದನ್ನೇ ನಿಜವೆಂದು ನಂಬಿ ಸಾಮಾಜಿಕ ಜಾಲತಾಣದಲ್ಲಿ ಅನ್ಯ ಕೋಮಿನ ವಿರುದ್ಧ, ಆಕ್ರೋಶವನ್ನು ವ್ಯಕ್ತ ಪಡಿಸುತ್ತಿದ್ದಾರೆ. ಅದರಲ್ಲೂ ವೈರಲ್‌ ವಿಡಿಯೋವನ್ನು ಬಳಸಿಕೊಂಡು ಕರ್ನಾಟಕದ ಕಾಂಗ್ರಸ್‌ ಸರ್ಕಾರದ…

Read More

Fact Check | ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿಲ್ಲ

“ನಾನು ಮುಂದಿನ ಜನ್ಮ ಅಂತ ಇದ್ರೆ ಮುಸ್ಲಿಂ ಆಗಿ ಹುಟ್ಟುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ವಿಡಿಯೋ ನೋಡಿ” ಎಂದು ಸಾಕಷ್ಟು ಮಂದಿ ವಿಡಿಯೋವೊಂದನ್ನ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ. ಅದರಲ್ಲೂ ಬಿಜೆಪಿ ಐಟಿಸೆಲ್‌ ಸದಸ್ಯ ರಿಶಿ ಬಿಗ್ರೀ ಮತ್ತು ಹಲವು ಬಿಜೆಪಿಯ ಕಾರ್ಯಕರ್ತರು ಇದೇ ವಿಡಿಯೋವನ್ನು ಹೆಚ್ಚು ಪ್ರಚಾರ ಮಾಡಿದ್ದಾರೆ. ಮುಂದಿನ ಜನ್ಮ ಯಾಕೆ ಇವಾಗ್ಲೇ ಕನ್ವರ್ಟ್ ಆಗಿ,🙏 pic.twitter.com/LhruF22ikk — Murali Purshotham (@MurariMurali3) March 11, 2024 ಇನ್ನು ಸುಳ್ಳು ಸುದ್ದಿಗೆ…

Read More

Fact Check | ಬಿಜೆಪಿ ಬಿಡುಗಡೆ ಮಾಡಿರುವ FSL ವರದಿ ನಕಲಿ

“ಸತ್ಯವನ್ನೇ ತಿರುಚಿ ಸುಳ್ಳು ಮಾಡಿ ಪ್ರಚಾರ ಮಾಡಿದ ಕಾಂಗ್ರೆಸ್ಸಿಗರೇ ಸುಳ್ಳು ಸುದ್ದಿಗಳ ಸೃಷ್ಟಿಕರ್ತರು ಎಂಬುದನ್ನು ವೈಜ್ಞಾನಿಕ ವರದಿ ಬಹಿರಂಗಪಡಿಸಿದೆ. ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದನ್ನು “ನಾಸೀರ್ ಸಾಬ್ ಜಿಂದಾಬಾದ್” ಎಂದು ತಿರುಚಿ ಕನ್ನಡಿಗರಿಗೆ ಟೋಪಿ ಹಾಕಲು ಹೊರಟ ಹುನ್ನಾರ ಈಗ FSL ವರದಿಯಲ್ಲಿ ಬಟಾ ಬಯಲಾಗಿದೆ.” ಸತ್ಯವನ್ನೇ ತಿರುಚಿ ಸುಳ್ಳು ಮಾಡಿ ಪ್ರಚಾರ ಮಾಡಿದ ಕಾಂಗ್ರೆಸ್ಸಿಗರೇ ಸುಳ್ಳು ಸುದ್ದಿಗಳ ಸೃಷ್ಟಿಕರ್ತರು ಎಂಬುದನ್ನು ವೈಜ್ಞಾನಿಕ ವರದಿ ಬಹಿರಂಗಪಡಿಸಿದೆ. ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದನ್ನು “ನಾಸೀರ್ ಸಾಬ್…

Read More

Fact Check : ಬಾಬಾಬುಡನ್ ಗಿರಿಯ ಗೋರಿ ದ್ವಂಸ ಪ್ರಕರಣ ರೀ ಓಪನ್ ಆಗಿಲ್ಲ

“ಚಿಕ್ಕಮಗಳೂರು ತಾಲೂಕು ಇನಾಂ ದತ್ತಾತ್ರೇಯ ಬಾಬಾ ಬುಡನ್ ದರ್ಗಾದಲ್ಲಿ 2017ರಲ್ಲಿ ಗೋರಿಯನ್ನು ಧ್ವಂಸಗೊಳಿಸಿದ ಘಟನೆ ನಡೆದಿತ್ತು. ‌ಒಟ್ಟು 14 ಜನರ ಮೇಲೆ ಈ ಪ್ರಕರಣ ದಾಖಲಾಗಿದ್ದು, ಆಪಾದಿತರಿಗೆ ಮುಂದಿನ ಸೋಮವಾರ ಜನವರಿ 8ರಂದು ಕೋರ್ಟ್​ಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.” ಎಂದು ರಾಜ್ಯದ ಪ್ರಮುಖ ಮಾಧ್ಯಮ ಸಂಸ್ಥೆ ಟಿವಿ 9 ಕನ್ನಡ ಸೇರಿದ ಹಾಗೆ ಹಲವು ಮಾಧ್ಯಮಗಳು ವರದಿಯನ್ನ ಮಾಡಿವೆ. ಫ್ಯಾಕ್ಟ್‌ಚೆಕ್‌ ಈ ಸುದ್ದಿ ನಿಜವೇ ಎಂದು ಪರಿಶೀಲಿಸಲಿ ಕನ್ನಡ ಫ್ಯಾಕ್ಟ್‌ಚೆಕ್‌ ತಂಡ ಕೆಲವೊಂದು ಕೀ ವರ್ಡ್‌ಗಳನ್ನು ಬಳಸಿ…

Read More

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಎಡಿಟ್ ವಿಡಿಯೋ ಹಂಚಿ ಸುಳ್ಳು ಸಾರಿದ BJP ನಾಯಕರು

ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಎರಡು ದಿನಗಳ ಹಿಂದೆಯಷ್ಟೇ ರೈತರ ಸಾಲ ಮನ್ನದ ಕುರಿತು ತೀವ್ರವಾದ ಚರ್ಚೆಗಳು ಜರುಗಿವೆ. “ಸಾಲ ಪಡೆದಿರುವ ರೈತರು ಅಸಲನ್ನು ಕಟ್ಟಿದರೆ ಬಡ್ಡಿಯನ್ನು ಸಂಪೂರ್ಣವಾಗಿ ಮನ್ನ ಮಾಡಲಾಗುವುದು, ಅದು ಮಧ್ಯಮಾವದಿ ಸಾಲ ಇರಬಹುದು ಅಥವಾ ಧೀರ್ಘವಧಿಯ ಸಾಲ ಇರಬಹುದು, ಎಲ್ಲದರ ಮೇಲಿರುವ ಬಡ್ಡಿಯನ್ನು ಮನ್ನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಿಸಿದ್ದಾರೆ. ಆದರೆ ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದಂತೆ “ಎಲ್ಲಿಂದ ತರ್ಲಿ ದುಡ್ಡು? ಚುನಾವಣೆ ಸಂದರ್ಭದಲ್ಲಿ ಭರವಸೆ ನೀಡುತ್ತೇವೆ ಹಾಗಂತ ಹೇಳಿದ್ದೆಲ್ಲವನ್ನು ಮಾಡೋಕೆ ಆಗತ್ತಾ,…

Read More

ಕ್ಯಾ. ಪ್ರಾಂಜಲ್ ಕುರಿತು ಸಿಎಂ ಸಿದ್ದರಾಮಯ್ಯನವರ ಅರ್ಧ ಹೇಳಿಕೆ ಹಂಚಿ ತಪ್ಪಾಗಿ ಅರ್ಥೈಸಿದ ಸಂಸದ ತೇಜಸ್ವಿ ಸೂರ್ಯ

ಕಳೆದ ನವೆಂಬರ್ ತಿಂಗಳಲ್ಲಿ ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಉಗ್ರರ ದಾಳಿಯಿಂದ ಮೃತಪಟ್ಟ ಕರ್ನಾಟಕದ ಯೋಧ ಕ್ಯಾ. ಪ್ರಾಂಜಲ್ ರವರ ಸಾವಿಗೆ ಇಡೀ ರಾಜ್ಯದ ಜನರು ಸಂತಾಪ ಸೂಚಿಸಿದ್ದರು. ಮಾನ್ಯ ಮುಖ್ಯಮಂತ್ರಿಗಳು ಸಹ ಪ್ರಾಂಜಲ್‌ರವರ ಪಾರ್ಥಿವ ಶರೀರಕ್ಕೆ ಗೌರವ ಸಲ್ಲಿಸಿ, ಅವರ ಕುಟುಂಬದವರಿಗೆ ಸಾಂತ್ವಾನ ಹೇಳಿ 50 ಲಕ್ಷದಷ್ಟು ಪರಿಹಾರವನ್ನು ನೀಡುವುದಾಗಿ ಭರವಸೆ ನೀಡಿದ್ದರು. ಅದು ತಡವಾಗುತ್ತಿದ್ದಂತೆ ಬಿಜಿಪಿ ಕಾರ್ಯಕರ್ತರು ಸೇರಿದಂತೆ ಹಲವು ಮಾಧ್ಯಮಗಳು ಸಹ ಕಾಂಗ್ರೆಸ್ ಮತ್ತು ಸಿದ್ದರಾಮಯ್ಯನವರನ್ನು ಟೀಕಿಸುತ್ತಿದ್ದಾರೆ.ಈಗ, ಕ್ಯಾ. ಪ್ರಾಂಜಲ್ ಯಾರು? ಯಾವಾಗ…

Read More