ಕಾಂಗ್ರೆಸ್

Fact Check: ಕಾಂಗ್ರೆಸ್‌ ಪ್ರಣಾಳಿಕೆಯ ಕುರಿತು ಹರಡುತ್ತಿರುವ ಸುಳ್ಳುಗಳೇನು ಮತ್ತು ಸತ್ಯವೇನು?

ಈ ಬಾರಿಯ ಕಾಂಗ್ರೆಸ್‌ ನ ಲೋಕಸಭಾ ಚುನಾವಣೆಯ ಪ್ರಣಾಳಿಕೆಯ ಕುರಿತಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿ ನಾಯಕರು ಸೇರಿದಂತೆ ಅನೇಕರು ಸುಳ್ಳು ಹರಡುತ್ತಿದ್ದಾರೆ. ಈಗ ವ್ಯಕ್ತಿಯೊಬ್ಬರು ಕಾಂಗ್ರೆಸ್ ಪ್ರಣಾಳಿಕೆಯ ಕುರಿತು ವಿವರಿಸಿರುವ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದರಲ್ಲಿ 2024 ರ ಲೋಕಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷವು ಸರ್ಕಾರ ರಚಿಸಿದರೆ, 370 ನೇ ವಿಧಿಯನ್ನು ಮರುಸ್ಥಾಪಿಸುತ್ತೇವೆ, ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ), ಹೊಸ ಶಿಕ್ಷಣ ನೀತಿ (ಎನ್‌ಇಪಿ)ಯನ್ನು ರದ್ದುಗೊಳಿಸುತ್ತೇವೆ, ಮತಾಂತರ ವಿರೋಧಿ…

Read More

Fact Check: ಕಾಂಗ್ರೆಸ್‌ ನಿಮ್ಮ ಹಣ ದೋಚಿ ಮುಸ್ಲಿಮರಿಗೆ ಕೊಡುತ್ತದೆ ಎಂದು ಖರ್ಗೆ ಹೇಳಿಲ್ಲ. ಇದು ಎಡಿಟೆಡ್‌ ವಿಡಿಯೋ

ಇತ್ತೀಚೆಗೆ ರಾಜಕೀಯ ಮುಖಂಡರ ಭಾಷಣಗಳನ್ನು ತಪ್ಪಾಗಿ ಅರ್ಥ ಬರುವಂತೆ ತಿರುಚಿ ಹಂಚಿಕೊಳ್ಳುವುದು ಸರ್ವೇ ಸಾಮಾನ್ಯವಾಗುತ್ತಿದೆ. ಚುನಾವಣಾ ಸಂದರ್ಭಗಳಲ್ಲಿ ಇಂತಹ ವಿಡಿಯೋಗಳನ್ನು ಹೆಚ್ಚು ಹರಿಬಿಡಲಾಗುತ್ತಿದೆ. ಅನೇಕ ಬಾರಿ ಇಂತಹ ತಿರುಚಿದ ವಿಡಿಯೋಗಳಿಂದ ಜನರಿಗೆ ತಪ್ಪು ಸಂದೇಶ ಹೋಗುವ ಸಾಧ್ಯತೆ ಇರುತ್ತದೆ. ಆದ್ದರಿಂದ ಯಾವುದೇ ಅಥವಾ ಯಾರದೇ ಭಾ‍ಷಣದ ತುಣುಕನ್ನು ನೋಡಿದಾಗ ಅವರ ಮಾತನ್ನು ಸಂಪೂರ್ಣವಾಗಿ ನಂಬಿ ಅಭಿಪ್ರಾಯ ರೂಪಿಸಿಕೊಳ್ಳುವ ಮೊದಲು ಅವರ ಪೂರ್ತಿ ಭಾಷಣ ನೋಡಿ ಯಾವ ಅರ್ಥದಲ್ಲಿ ಈ ಹೇಳಿಕೆ ನೀಡಿದ್ದಾರೆ ಎಂದು ಖಚಿತಪಡಿಸಿಕೊಳ್ಳುವುದು ಉತ್ತಮ. ಈಗ,…

Read More

Fact Check: ಕಾಂಗ್ರೆಸ್ ಪ್ರಣಾಳಿಕೆ ಕುರಿತು ಬಿಜೆಪಿಯ ಅಧಿಕೃತ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿರುವುದು ಸಂಪೂರ್ಣ ಸುಳ್ಳು

ಕಾಂಗ್ರೆಸ್‌ ನ ಲೋಕಸಭಾ ಪ್ರಣಾಳಿಕೆ 2024 ಬಿಡುಗಡೆ ಆದ ದಿನಗಳಿಂದಲೂ ಕಾಂಗ್ರೆಸ್‌ ಪ್ರಣಾಳಿಕೆಯ ಕುರಿತು ಕೆಲವರು ಸುಳ್ಳುಗಳನ್ನು ಹಬ್ಬಿಸುತ್ತಲೇ ಬರುತ್ತಿದ್ದಾರೆ. ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ “ತ್ರಿವಳಿ ತಲಾಖ್ ಅನ್ನು ಮರಳಿ ತರುತ್ತೇವೆ. ಸರ್ಕಾರಿ ಮತ್ತು ಖಾಸಗಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ. ಲವ್ ಜಿಹಾದ್ ಬೆಂಬಲಿಸಿ ಶಾಲೆಯಲ್ಲಿ ಬುರ್ಖಾವನ್ನು ಬೆಂಬಲಿಸುತ್ತೇವೆ” ಎಂದು ಹೇಳಿದ್ದಾರೆ ಎಂದು ಸುದ್ದಿಯೊಂದನ್ನು ಹರಿಬಿಟ್ಟಿದ್ದರು. ನಂತರ ಇತ್ತೀಚೆಗೆ ರಾಜಸ್ತಾನದಲ್ಲಿ ನಡೆದ ಬಿಜೆಪಿ ಪ್ರಚಾರ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರೇ ” ಕಾಂಗ್ರೆಸ್‌ ನಿಮ್ಮ ಬಳಿ ಇರುವ…

Read More
ಕಾಂಗ್ರೆಸ್

Fact Check: ಜಮ್ಮು ಕಾಶ್ಮೀರದಲ್ಲಿ ‌ ಅಧಿಕಾರಕ್ಕೆ ಬಂದರೆ ಉಗ್ರರನ್ನು ಬಿಡುಗಡೆ ಮಾಡುತ್ತೇವೆ ಎಂದು ಕಾಂಗ್ರೆಸ್‌ ಹೇಳಿಲ್ಲ

ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಇರುವುದರಿಂದ ರಾಷ್ಟ್ರೀಯ ಪಕ್ಷಗಳು ತಮ್ಮ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿವೆ. ಕಾಂಗ್ರೆಸ್ ಇದೇ ಏಪ್ರಿಲ್ 5 ರಂದು ತನ್ನ ಪ್ರಣಾಳಿಕೆಯನ್ನು “ನ್ಯಾಯ ಪತ್ರ” ಎಂಬ ಹೆಸರಿನಲ್ಲಿ ಬಿಡುಗಡೆ ಮಾಡಿದೆ. ಸಧ್ಯ ಕಾಂಗ್ರೆಸ್‌ನ ಪ್ರಣಾಳಿಕೆಯ ಕುರಿತು ಸುಳ್ಳು ಸುದ್ದಿಯನ್ನು ಹಂಚಿಕೊಳ್ಳಲಾಗುತ್ತಿದೆ. ಕೆಲವೇ ದಿನಗಳ ಹಿಂದೆ ” ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ತ್ರಿವಳಿ ತಲಾಕ್ ಮತ್ತೆ ತರುತ್ತೇವೆ, ಉಗ್ರವಾದವನ್ನು ಬೆಂಬಲಿಸುತ್ತೇನೆ” ಎಂದು ಸುಳ್ಳು ಹಬ್ಬಿಸಲಾಗುತ್ತಿತ್ತು. ಈಗ, “ಜಮ್ಮು ಕಾಶ್ಮೀರದಲ್ಲಿ ಕಾಂಗ್ರೇಸ್ ಏನಾದರು ಈ ಬಾರಿ…

Read More
Congress

Fact Check: ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ದೇಶದ್ರೋಹ ಜಾರಿಗೊಳಿಸುತ್ತೇವೆ ಎಂದಿಲ್ಲ

ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಇರುವ ಈ ಸಂದರ್ಭದಲ್ಲಿ ರಾಷ್ಟ್ರೀಯ ಪಕ್ಷಗಳ ಕಾರ್ಯಕರ್ತರು ಮತ್ತು ಬೆಂಬಲಿಗರು ತಮ್ಮ ಎದುರಾಳಿ ಪಕ್ಷವನ್ನು ಮಣಿಸುವ ಸಲುವಾಗಿ ಸಾಕಷ್ಟು ಸುಳ್ಳು ಸುದ್ದಿಗಳನ್ನು ಹರಿಬಿಟ್ಟು ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಲೋಕಸಭಾ ಚುನಾವಣೆಯ ಸಮಯದಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ನಕಲಿ ಸುದ್ದಿ ಮತ್ತು ತಪ್ಪು ಮಾಹಿತಿಯ ಹರಡುವಿಕೆಯನ್ನು ಎದುರಿಸಲು ಚುನಾವಣಾ ಆಯೋಗ (EC) 17 ಮಾರ್ಚ್ 2024 ರಂದೇ “ಮಿಥ್ ವರ್ಸಸ್ ರಿಯಾಲಿಟಿ” ಎಂಬ ಯೋಜನೆಯನ್ನು ಪ್ರಾರಂಭಿಸಿದೆ. ಕಾನೂನುಬಾಹಿರ ವಿಷಯವನ್ನು ತೆಗೆದುಹಾಕಲು…

Read More