Fact Check | ಲಂಡನ್ ನಲ್ಲಿ ಬಸವಣ್ಣನವರ ಪ್ರತಿಮೆ ನಿರ್ಮಾಣಕ್ಕೆ ಸಿಎಂ ಸಿದ್ದರಾಮಯ್ಯ ಅನುದಾನ ಕಡಿತಗೊಳಿಸಿದ್ದರು ಎಂಬುದು ಸುಳ್ಳು

ಸಿಎಂ ಸಿದ್ದರಾಮಯ್ಯ ಅವರು ಲಂಡನ್‌ನಲ್ಲಿ ನಿರ್ಮಾಣವಾದ ಬಸವಣ್ಣನವರ ಪುತ್ಥಳಿಗೆ ಯಾವುದೇ ಅನುದಾನವನ್ನು ನೀಡಿಲ್ಲ. 2018ರಲ್ಲಿ ಮುಖ್ಯಮಂತ್ರಿಯಾಗಿದ್ದ ವೇಳೆ  ಅಂದಿನ ಮುಖ್ಯಮಂತ್ರಿ ಆಗಿದ್ದ ಜಗದೀಶ್ ಶೆಟ್ಟರ್ ಅವರು ನೀಡಿದ್ದ ಅನುದಾನವನ್ನು ಕಡಿತಗೊಳಿಸಿದ್ದರು ಎಂಬ ವಿಡಿಯೋವನ್ನು  ವಿವಿಧ ಬರಹಗಳೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಇನ್ನು ಇದೇ ವಿಡಿಯೋದಲ್ಲಿ ಹಲವು ಸುಳ್ಳು ಆರೋಪಗಳನ್ನು ಮಾಡಲಾಗಿದ್ದು, ಅದರಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಬಸವಣ್ಣನವರ ಪುತ್ತಳಿಯ ಉದ್ಘಾಟನೆಯ ಸಂದರ್ಭದಲ್ಲಿ ಬಂದಿದ್ದರು ಎಂಬ ಕಾರಣಕ್ಕಾಗಿ ಸಿಎಂ ಸಿದ್ದರಾಮಯ್ಯನವರು ಅಂದು ಬಸವಣ್ಣನವರ ಪ್ರತಿಮೆಯ ಉದ್ಘಾಟನೆಗೆ ಬರಲಿಲ್ಲ. ಆದರೆ ಇಂದು ಲಂಡನಿಗೆ…

Read More
ದುಬೈ

ದುಬೈನ ಸುನ್ನಿ ಮುಸ್ಲಿಮರ ಸಂಘ ಕರ್ನಾಟಕಕ್ಕೆ ಬರಲು ಮುಸ್ಲಿಮರಿಗೆ ಸಂಪೂರ್ಣ ಆರ್ಥಿಕ ನೆರವು ನೀಡುತ್ತಿದೆ ಎಂಬುದು ಸಂಪೂರ್ಣ ಸುಳ್ಳು

ಇತ್ತೀಚೆಗೆ “ನರೇಂದ್ರ ಮೋದಿ ಮತ್ತು ಬಿಜೆಪಿ ಸೋಲಿಸಲು ದುಬೈನಿಂದ ಮುಸ್ಲಿಮರು ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಅವರಿಗೆ ವಿಮಾನ ವ್ಯವಸ್ಥೆ ಮಾಡಲಾಗಿದೆ” ಎಂದು ಸುಳ್ಳು ಹರಿಬಿಡಲಾಗಿತ್ತು. ಆದರೆ ದುಬೈನಲ್ಲಿ ಪ್ರವಾಹದ ಪರಿಸ್ಥಿತಿ ಇದ್ದ ಕಾರಣ ಎಲ್ಲಾ ವಿಮಾನ ಹಾರಾಟಗಳು ಸ್ಥಗಿತವಾಗಿದ್ದವು. ಮತದಾನಕ್ಕೆ ಆಗಮಿಸಲು ಸಹ ಕಷ್ಟಪಡುವಂತಿತ್ತು. ಈ ಕಾರಣಕ್ಕಾಗಿ ಕೇರಳದ ಕೆಲವು ಮುಸ್ಲಿಂ ಸಂಘಟನೆಗಳು ಸರ್ಕಾರದೊಟ್ಟಿಗೆ ಮಾತನಾಡಿ ಎರಡು ವಿಶೇಷ ವಿಮಾನಗಳನ್ನು ವ್ಯವಸ್ಥೆ ಮಾಡಿದ್ದರು. ಈಗ, “ದುಬೈನಲ್ಲಿರುವ ಸುನ್ನಿ ಮುಸ್ಲಿಮರ ಸಂಘ, ಚುನಾವಣೆಯಲ್ಲಿ ‘ಫ್ಯಾಸಿಸ್ಟ್ ಶಕ್ತಿ’ಗಳನ್ನು ಸೋಲಿಸಲು ಮತ್ತು ಕಾಂಗ್ರೆಸ್…

Read More

Fact Check | ಕರ್ನಾಟಕ ಕಾಂಗ್ರೆಸ್‌ ಕಾರ್ಯಕರ್ತರು ಮೋದಿ ಪ್ರತಿಕೃತಿ ಸುಡಲು ಹೋಗಿ ಬೆಂಕಿ ಹಚ್ಚಿಕೊಂಡಿದ್ದಾರೆ ಎಂಬುದು ಸುಳ್ಳು

“ಕರ್ನಾಟಕದಲ್ಲಿ ಬಿಜೆಪಿ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆಯೊಂದರಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಪ್ರಧಾನಿ ಮೋದಿ ಪ್ರತಿಕೃತಿಗೆ ಬೆಂಕಿ ಹಚ್ಚಲು ಮುಂದಾಗಿದ್ದಾರೆ, ಈ ವೇಳೆ ಐದು ಜನ ಕಾಂಗ್ರೆಸ್‌ ಕಾರ್ಯಕರ್ತರ ಪಂಚೆ(ಲುಂಗಿ)ಗೆ ಬೆಂಕಿ ತಗುಲಿ ಎಲ್ಲರೂ ಓಡಿ ಹೋಗಿದ್ದಾರೆ. ನೋಡಿ ವಾಸ್ತವದಲ್ಲಿ ಪ್ರಧಾನಿ ಮೋದಿ ಪ್ರತಿಕೃತಿ ಕೂಡ ವಿರೋಧಿಗಳಿಗೆ ಪಾಠ ಕಲಿಸುತ್ತಿದೆ. ಇದೇ ಮೋದಿ ಹೆಸರಿಗಿರುವ ಶಕ್ತಿ” ಎಂದು ವಿಡಿಯೋದೊಂದಿಗೆ ಬರೆದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. Lungi of five Congressmen caught fire while burning Modi's effigy…

Read More

ಹೈದರಾಬಾದ್‌ನಿಂದ ಪಶ್ಚಿಮ ಬಂಗಾಳಕ್ಕೆ ಹೋಗುತ್ತಿದ್ದ ರೈಲನ್ನು ಜಿಹಾದಿಗಳು ಮುಸ್ಲಿಂ ಎಕ್ಸ್‌ಪ್ರೆಸ್ ಆಗಿ ಬದಲಿಸಿದ್ದರು ಎಂಬುದು ಸುಳ್ಳು

ಭಾರತದ ಮುಸ್ಲಿಂ ಸಮುದಾಯವನ್ನು ಕೇಂದ್ರವಾಗಿರಿಸಿಕೊಂಡು ಅವರನ್ನು ಭಯೋತ್ಪಾದಕರು, ಧರ್ಮ ದ್ರೋಹಿಗಳು ಎಂದು ಬಿಂಬಿಸುವ ಹುನ್ನಾರಗಳು ನಡೆಯುತ್ತಿರುವುದು ದುರಂತದ ಸಂಗತಿ. ಪ್ರತೀದಿನವೂ ಅನೇಕ ಸುಳ್ಳು ಆರೋಪಗಳನ್ನು ಹೊರಿಸಿ ಸುದ್ದಿಗಳನ್ನು ಹಂಚಿಕೊಳ್ಳಲಾಗುತ್ತಿದೆ. ನಮ್ಮ ಭಾರತೀಯ ಸಂವಿಧಾನದಲ್ಲಿ ಭಾರತೀಯ ಪ್ರತಿಯೊಬ್ಬ ಪ್ರಜೆಯನ್ನು ಆತನ ಧರ್ಮ, ಜಾತಿ, ಭಾಷೆ, ಹುಟ್ಟಿನ ಸ್ಥಳ, ಬಣ್ಣ ಹೀಗೆ ಯಾವ ಆಧಾರದ ಮೇಲೆಯೂ ತಾರತಮ್ಯ ಎಸಗಬಾರದು ಎಂದು ಹೇಳುತ್ತದೆ. ಆದರೆ ಇಂದು ಆಡಳಿತಾರೂಢ ಪಕ್ಷಗಳೇ ಈ ರೀತಿ ದ್ವೇಷ ರಾಜಕಾರಣ ಮತ್ತು ಒಡೆದು ಆಳುವ ನೀತಿಯನ್ನು ಅನುಸರಿಸುತ್ತಿರುವುದು….

Read More
ಹವಮಾನ

Fact Check: ಬಿಸಿಗಾಳಿ ಇರುವ ಕಾರಣ ಸಂಜೆ 4ರವರೆಗೆ ಮನೆಯಿಂದ ಹೊರ ಬರಬೇಡಿ ಎಂದು ಹವಮಾನ ಇಲಾಖೆ ಎಚ್ಚರಿಸಿಲ್ಲ

ಹವಮಾನ ವೈಪರಿತ್ಯದಿಂದಾಗಿ ಮತ್ತು ಈ ಬಾರಿ ರಾಜ್ಯದಲ್ಲಿ ಬರದ ಪರಿಸ್ಥಿತಿ ನಿರ್ಮಾಣವಾಗಿರುವುದರಿಂದ ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ದಾಖಲೆ ಪ್ರಮಾಣದ ಬಿಸಿ ಹೆಚ್ಚಾಗುತ್ತಿದೆ. ಹವಮಾನ ಇಲಾಖೆ ಸೂಚಿಸಿದಂತೆ ಏಪ್ರಿಲ್ ಎರಡನೇ ವಾರದಲ್ಲಿ ಮಳೆಯಾದರೂ ಸಹ ಕೇವಲ ಸ್ವಲ್ಪ ಪ್ರಮಾಣದಲ್ಲಿ ಮಳೆಯಾಗಿ ಧಗೆಯನ್ನು ಇನ್ನಷ್ಟು ಹೆಚ್ಚಿಸಿದೆ. ಈಗ, ಸಂಜೆ 4ರವರೆಗೆ ಮನೆಯಿಂದ ಹೊರ ಬರಬೇಡಿ! ಹವಾಮಾನ ಇಲಾಖೆ ಇಂದಿನಿಂದ 5 ದಿನ ರಾಜ್ಯದ ಹಲವೆಡೆ ಬಿಸಿಗಾಳಿ ಎಚ್ಚರಿಕೆ ನೀಡಿದೆ. ಬೆಳಿಗ್ಗೆ 11ರಿಂದ ಸಂಜೆ 4ರವರೆಗೆ ಹೊರಗೆ ಹೋಗುವುದನ್ನು ಸಾಧ್ಯವಾದಷ್ಟು…

Read More

Fact Check | ರಾಜ್ಯ ಕಾಂಗ್ರೆಸ್ ಸರ್ಕಾರ ವಿದ್ಯುತ್‌ ದರ ಡಬಲ್ ಮಾಡಿದೆ ಎಂಬುದು ಸುಳ್ಳು

“ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬರುವ ಮೊದಲು ಪ್ರತೀ ಯೂನಿಟ್‌ ವಿದ್ಯುತ್‌ಗೆ 4.75 ರೂ ಇತ್ತು. ಆದರೆ ಅಧಿಕಾರಕ್ಕೆ ಬಂದು ಗೃಹಜ್ಯೋತಿ ಯೋಜನೆ ಜಾರಿ ಮಾಡಿದ ಬಳಿಕ ಕಾಂಗ್ರೆಸ್‌ ಪ್ರತಿ ಯೂನಿಟ್‌ ವಿದ್ಯುತ್‌ಗೆ 7.25 ರೂ ಹೆಚ್ಚಳ ಮಾಡಿದೆ.” ಎಂಬ ಸಂದೇಶವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಪೋಸ್ಟರ್‌ವೊಂದರಲ್ಲಿ ಕಾಂಗ್ರೆಸ್‌ ಸರ್ಕಾರ ಹಲವು ವಸ್ತುಗಳು ಮತ್ತು ವಿದ್ಯುತ್‌ನ ದರವನ್ನು ಕೂಡ ವ್ಯಾಪಕವಾಗಿ ಹೆಚ್ಚಳ ಮಾಡಿದೆ ಎಂದು ಹಂಚಿಕೊಂಡಿದ್ದಾರೆ. ಈಗಾಗಲೇ ರಾಜ್ಯದಲ್ಲಿ ಸಾಕಷ್ಟು ಮಂದಿ ಉಚಿತವಾಗಿ 200 ಯೂನಿಟ್‌ ವಿದ್ಯುತ್‌…

Read More

Fact Check | ಪಿಯುಸಿ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಬಂದ ವಿದ್ಯಾರ್ಥಿಯ 2000 ರೂ ಸಹಾಯವಾಯ್ತು ವಿಡಿಯೋ ತಿರುಚಿ ಹಂಚಿಕೆ

“ಆ ವಿದ್ಯಾರ್ಥಿ ಹೇಳಿದ್ದು ಮೋದಿ ಸರ್ಕಾರದ ಫಸಲ್‌ ಭೀಮಾ ಇಂದ 2000 ರೂ. ಸಹಾಯ ಆಯ್ತು ಅಂತ. ಕಾಂಗ್ರೆಸ್‌ ಹಾಕಿದ್ದು ಗೃಹಲಕ್ಷ್ಮಿ ಇಂದ ಅಂತ. ಅಷ್ಟಕ್ಕೂ ಗೃಹಲಕ್ಷ್ಮಿ ಇರುವುದು ಹೆಣ್ಣುಮಕ್ಕಳಿಗೆ, ಅದು ಮುಕ್ಕಾಲು ಭಾಗ ತಲುಪದ ಯೋಜನೆ” ಎಂಬ ಬರಹದೊಂದಿಗೆ ವಿಡಿಯೊವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ.   View this post on Instagram   A post shared by ✨ಮೋದಿ ಅವರ ಕುಟುಂಬ 🚩💥 (@t.b.m_improve) ಅದರಲ್ಲೂ ಪ್ರಮುಖವಾಗಿ t.b.m_improve ಎಂಬ ಬಿಜೆಪಿ ಬೆಂಬಲಿಸುವ ಇನ್‌ಸ್ಟಾಗ್ರಾಮ್‌…

Read More
ಸರ್ಧಾರ್ ವಲ್ಲಭಬಾಯಿ ಪಟೇಲ್

Fact Check: ಕರ್ನಾಟಕದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಮೂರ್ತಿಯನ್ನು ಹೊಡೆದು ಹಾಕಿಲ್ಲ

ಲೋಕಸಭಾ ಚುನಾವಣೆಗಳು ಹತ್ತಿರಾಗುತ್ತಿದ್ದಂತೆ ಬಿಜೆಪಿಯೇತರ ರಾಜ್ಯಗಳ ಮೇಲೆ ಅದರಲ್ಲೂ ದಕ್ಷಿಣ ರಾಜ್ಯಗಳ ಮೇಲೆ ಸಾಕಷ್ಟು ಸುಳ್ಳು ಆರೋಪಗಳನ್ನು ಹೊರಿಸಲಾಗುತ್ತಿದೆ. ಇತ್ತೀಚೆಗೆ ವಿಡಿಯೋ ಒಂದು ವೈರಲ್ ಆಗಿದ್ದು ಅದರಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಮೂರ್ತಿಯನ್ನು ಗುಂಪೊಂದು ಟ್ಯಾಕ್ಟ್‌ರ್ ಬಳಸಿ ತೆರವುಗೊಳಿಸುತ್ತಿರುವುದನ್ನು ಕಾಣಬಹುದಾಗಿದೆ. ಆದರೆ, “ಕರ್ನಾಟಕದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಮೂರ್ತಿಯನ್ನು ಹೊಡೆದು ಹಾಕಲಾಗಿದೆ.” ಎಂದು ಪ್ರತಿಪಾದಿಸಲಾಗುತ್ತಿದೆ.  ಫ್ಯಾಕ್ಟ್‌ಚೆಕ್: ಈ ಕುರಿತು ಹುಡುಕಿದಾಗ, ಈ ಘಟನೆ 26 ಜನವರಿ 2024ರಲ್ಲಿ ಮಧ್ಯ ಪ್ರದೇಶದ ಉಜ್ಜಯಿನಿ ಜಿಲ್ಲೆಯ ಮಕಾಡೋನ್…

Read More
BBMP Bangalore

Fact Check: ಏಪ್ರಿಲ್ 1ರಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಾಗಲಿದೆ ಎನ್ನುವುದು ಸುಳ್ಳು

” ಏಪ್ರಿಲ್ 1, 2024ರಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳವಾಗಲಿದೆ. “ಬಿಬಿಎಂಪಿ ವ್ಯಾಪ್ತಿಯಲ್ಲಿ ಮನೆ ತೆರಿಗೆ ಎರಡು ಪಟ್ಟು, ವಾಣಿಜ್ಯ ಸಂಸ್ಥೆಗಳ ತೆರಿಗೆ ಮೂರು ಪಟ್ಟು ಹೆಚ್ಚಾಗಲಿದೆ. ಎಲೆಕ್ಟ್ರಿಕ್ ವಾಹನಗಳ ಲೈಫ್ ಟೈಮ್ ತೆರಿಗೆ ಶೇ.10ರಷ್ಟು ಮತ್ತು ಹೊಸ ವಾಹನಗಳ ನೋಂದಣಿ ತೆರಿಗೆ ಶೇ.3ರಷ್ಟು ಹೆಚ್ಚಳ ಮಾಡಲಾಗುತ್ತದೆ. ಸರ್ಕಾರ ಈ ಹಿಂದೆ ಹಾಲು, ಪೆಟ್ರೋಲ್ ಮತ್ತು ಮದ್ಯದ ಮೇಲಿನ ತೆರಿಗೆ ಹೆಚ್ಚಿಸಿತ್ತು” ಎಂದು ಹೇಳಲಾ ವಿಡಿಯೋ ಒಂದು Index. daily…

Read More

Fact Check | ಇಂಗ್ಲೀಷ್‌ ನಾಮಫಲಕ ತೆರವುಗೊಳಿಸಿದ್ದನ್ನು ಕೇಸರಿ ನಾಮಫಲಕ ಎಂದು ಸುಳ್ಳು ಹಂಚಿಕೆ

“ಕರ್ನಾಟಕದಲ್ಲಿ ನಾಮಫಲಕಗಳಲ್ಲಿ ಕೇಸರಿ ಬಣ್ಣವನ್ನು ಬಳಸುವಂತಿಲ್ಲ ಎಂಬ ಕಾರಣಕ್ಕೆ ಜನರ ಗುಂಪೊಂದು ಅಂಗಡಿಯ ನಾಮಫಲಕಗಳನ್ನು ಧ್ವಂಸಗೊಳಿಸಿದೆ. ಈ ವಿಡಿಯೋವನ್ನು ಎಲ್ಲರಿಗೂ ಶೇರ್‌ ಮಾಡಿ” ಎಂಬ ಬರಹದೊಂದಿಗೆ ವಿಡಿಯೋವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು, ಕರ್ನಾಟಕದಲ್ಲಿ ಹಿಂದೂ ಅಂಗಡಿಯೊಂದನ್ನು ಧ್ವಂಸ ಮಾಡಲಾಗಿದೆ, ಈ ಬಗ್ಗೆ ಧ್ವನಿ ಎತ್ತಲು ಯಾರೂ ಇಲ್ಲದಂತಾಗಿದೆ ಎಂದು ಕೋಮು ಬಣ್ಣವನ್ನು ಬಳಿಯಲಾಗಿದೆ. ಇದನ್ನೇ ನಿಜವೆಂದು ನಂಬಿ ಸಾಮಾಜಿಕ ಜಾಲತಾಣದಲ್ಲಿ ಅನ್ಯ ಕೋಮಿನ ವಿರುದ್ಧ, ಆಕ್ರೋಶವನ್ನು ವ್ಯಕ್ತ ಪಡಿಸುತ್ತಿದ್ದಾರೆ. ಅದರಲ್ಲೂ ವೈರಲ್‌ ವಿಡಿಯೋವನ್ನು ಬಳಸಿಕೊಂಡು ಕರ್ನಾಟಕದ ಕಾಂಗ್ರಸ್‌ ಸರ್ಕಾರದ…

Read More