Fact Check | 2041ರ ಹೊತ್ತಿಗೆ ಭಾರತದಲ್ಲಿ ಮುಸ್ಲಿಂ ಜನಸಂಖ್ಯೆ ಶೇ.84 ರಷ್ಟು ಏರಿಕೆಯಾಗಲಿದೆ ಎಂಬುದು ಸುಳ್ಳು
“2041 ರ ವೇಳೆಗೆ ಭಾರತದ ಒಟ್ಟು ಜನಸಂಖ್ಯೆಯಲ್ಲಿ ಮುಸ್ಲಿಮರು 84% ರಷ್ಟು ಇರಲಿದ್ದಾರೆ ಎಂದು ‘ಇನ್ಸ್ಟಿಟ್ಯೂಟ್ ಆಫ್ ವರ್ಲ್ಡ್ ಡೆಮಾಗ್ರಾಫಿಕ್ಸ್ ರಿಸರ್ಚ್’ ಸಮೀಕ್ಷೆಯು ಭವಿಷ್ಯ ನುಡಿದಿದೆ. ಈ ಬಗ್ಗೆ ಹಿಂದೂಗಳು ಎಚ್ಚೆತ್ತುಕೊಳ್ಳಬೇಕಾಗಿದೆ. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಭಾರತದಲ್ಲಿನ ಹಿಂದೂಗಳು ಅಲ್ಪಸಂಖ್ಯಾತರಾಗುವುದರಲ್ಲಿ ಯಾವುದೇ ರೀತಿಯ ಅನುಮಾನವಿಲ್ಲ.” ಎಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಸಂದೇಶವನ್ನು ಹಂಚಿಕೊಳ್ಳಲಾಗುತ್ತಿದೆ. ಈ ಸಂದೇಶವನ್ನು ನೋಡಿದ ಹಲವರು ಇದು ನಿಜವಾದ ದತ್ತಾಂಶವಿರಬಹುದು ಎಂದು ಭಾವಿಸಿ ಈ ಸಂದೇಶವನ್ನು ಹಂಚಿಕೊಳ್ಳುತ್ತಿದ್ದಾರೆ. ಇನ್ನು ಸಂದೇಶದಲ್ಲಿನ ದತ್ತಾಂಶಗಳು ಕೂಡ ಅಂತರಾಷ್ಟ್ರೀಯ…