Fact Check | 2024ರಲ್ಲಿ 9,60,000 ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ ಎಂಬುದು ಸುಳ್ಳು ಮತ್ತು ವಂಚನೆ

“ವಿದ್ಯಾರ್ಥಿಗಳ ಲ್ಯಾಪ್‌ಟಾಪ್ ಯೋಜನೆ 2024 ಗಾಗಿ ಅಪ್ಲಿಕೇಶನ್‌ಗಳು ಲಭ್ಯವಿದೆ. ಆರ್ಥಿಕ ಕಾರಣಗಳಿಗಾಗಿ ತಮ್ಮದೇ ಆದ ಲ್ಯಾಪ್‌ಟಾಪ್ ಖರೀದಿಸುವ ಸ್ಥಿತಿಯಲ್ಲಿಲ್ಲದ ಮತ್ತು ಅವರ ಶಿಕ್ಷಣದ ಮಟ್ಟದಲ್ಲಿ ಲ್ಯಾಪ್‌ಟಾಪ್ ಅಗತ್ಯವಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಈ ಯೋಜನೆಯು ಮುಕ್ತವಾಗಿದೆ”  ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣದಲ್ಲಿ ಮತ್ತು ವಾಟ್ಸ್‌ಆಪ್‌ನಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ಸಂದೇಶದಲ್ಲಿ ಇನ್ನೂ ಮುಂದುವರೆದು, “2024 ರಲ್ಲಿ 960,000 ವಿದ್ಯಾರ್ಥಿಗಳಿಗೆ ಅವರ ಕಲಿಕೆಯನ್ನು ಹೆಚ್ಚಿಸಲು ಉಚಿತ ಲ್ಯಾಪ್‌ಟಾಪ್ ನೀಡಲಾಗುವುದು. ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ತಮ್ಮ…

Read More
ಕಾಂಗ್ರೆಸ್

Fact Check: ಕಾಂಗ್ರೆಸ್‌ ಪ್ರಣಾಳಿಕೆಯ ಕುರಿತು ಹರಡುತ್ತಿರುವ ಸುಳ್ಳುಗಳೇನು ಮತ್ತು ಸತ್ಯವೇನು?

ಈ ಬಾರಿಯ ಕಾಂಗ್ರೆಸ್‌ ನ ಲೋಕಸಭಾ ಚುನಾವಣೆಯ ಪ್ರಣಾಳಿಕೆಯ ಕುರಿತಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿ ನಾಯಕರು ಸೇರಿದಂತೆ ಅನೇಕರು ಸುಳ್ಳು ಹರಡುತ್ತಿದ್ದಾರೆ. ಈಗ ವ್ಯಕ್ತಿಯೊಬ್ಬರು ಕಾಂಗ್ರೆಸ್ ಪ್ರಣಾಳಿಕೆಯ ಕುರಿತು ವಿವರಿಸಿರುವ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದರಲ್ಲಿ 2024 ರ ಲೋಕಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷವು ಸರ್ಕಾರ ರಚಿಸಿದರೆ, 370 ನೇ ವಿಧಿಯನ್ನು ಮರುಸ್ಥಾಪಿಸುತ್ತೇವೆ, ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ), ಹೊಸ ಶಿಕ್ಷಣ ನೀತಿ (ಎನ್‌ಇಪಿ)ಯನ್ನು ರದ್ದುಗೊಳಿಸುತ್ತೇವೆ, ಮತಾಂತರ ವಿರೋಧಿ…

Read More

Fact Check | ಶೇ.80ಕ್ಕಿಂತ ಹೆಚ್ಚು ಅಂಕ ತೆಗೆದ ವಿದ್ಯಾರ್ಥಿಗಳಿಗೆ ಮೊಬೈಲ್‌ ಮತ್ತು ಟ್ಯಾಬ್‌ ವಿತರಿಸಲಾಗುವುದು ಎಂಬುದು ಸುಳ್ಳು

“ಮುಂಬರುವ 10 ಮತ್ತು ದ್ವಿತಿಯ ಪಿಯುಸಿ ಬೋರ್ಡ್ ಪರೀಕ್ಷೆ 2024 ರಲ್ಲಿ ಶೇಕಡಾ 80 ಅಥವಾ ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸುವ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರವು 4.34 ಲಕ್ಷ ಮೊಬೈಲ್ ಫೋನ್‌ಗಳು ಮತ್ತು ಟ್ಯಾಬ್‌ಗಳನ್ನು ವಿತರಿಸುತ್ತಿದೆ.” ಎಂಬ ಸುದ್ದಿಯೊಂದು ವ್ಯಾಪಕವಾಗಿ ಸಾಮಾಜಿಕ ಜಾಲತಾಣದಲ್ಲಿ ಹಬ್ಬುತ್ತಿದೆ. ಇದನ್ನೇ ನಿಜವೆಂದು ನಂಬಿ ಸಾಕಷ್ಟು ಮಂದಿ ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಆದರೆ ಈ ಕುರಿತು ಪರಿಶೀಲನೆ ನಡೆಸಿದಾಗ ಅಸಲಿ ಸಂಗತಿ ಹೊರ ಬಂದಿದ್ದು, ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ…

Read More